Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»“ತುಳು ಭವನ: ರಿಯಾಯಿತಿ ರದ್ದು ಮಾಡಲಾಗಲಿಲ್ಲ”- ತಾರಾನಾಥ್ ಗಟ್ಟಿ ಕಾಪಿಕಾಡ್
    ಇತ್ತೀಚಿನ ಸುದ್ದಿ

    “ತುಳು ಭವನ: ರಿಯಾಯಿತಿ ರದ್ದು ಮಾಡಲಾಗಲಿಲ್ಲ”- ತಾರಾನಾಥ್ ಗಟ್ಟಿ ಕಾಪಿಕಾಡ್

    May 24, 2025
    Share

    ಮಂಗಳೂರು: ಖಾಸಗಿ ಸಂಘ, ಸಂಸ್ಥೆಗಳು ಆಯೋಜಿಸುವ ತುಳು ಭಾಷೆ, ಸಾಹಿತ್ಯ , ಸಂಸ್ಕ್ರತಿಗೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಮಂಗಳೂರಿನ ತುಳು ಭವನದಲ್ಲಿ ವಿಶೇಷವಾಗಿ ಶೇಕಡಾ ಐವತ್ತರಷ್ಟು ರಿಯಾಯಿತಿಯಲ್ಲಿ ಸಭಾಂಗಣವನ್ನು ನೀಡಲಾಗುತ್ತಿದೆ. ಇದೇ ವೇಳೆ ಯಕ್ಷಗಾನ , ನಾಟಕ ಆಯೋಜಿಸುವವರಿಗೆ ಇನ್ನೂ ಹೆಚ್ಚಿನ ರಿಯಾಯಿತಿಯಲ್ಲಿ ಸಭಾಂಗಣವನ್ನು ಒದಗಿಸಲಾಗುತ್ತದೆ, ಯಾವುದೇ ರಿಯಾಯಿತಿಯನ್ನು ರದ್ದುಪಡಿಸಲಾಗಿಲ್ಲ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ಸಂಘ ಸಂಸ್ಥೆಗಳು ಅಕಾಡೆಮಿಯೊಂದಿಗೆ ಸಹಭಾಗಿತ್ವದಲ್ಲಿ ನಡೆಸುವ ಕಾರ್ಯಕ್ರಮಗಳಿಗೆ ಉಚಿತವಾಗಿ ಸಭಾಂಗಣ ಒದಗಿಸಲಾಗುತ್ತದೆ. ಸಾಹಿತ್ಯ , ಸಾಂಸ್ಕ್ರತಿಕ ಹೊರತುಪಡಿಸಿದ ಖಾಸಗಿ ಕಾರ್ಯಕ್ರಮಗಳಿಗೆ ಮಾತ್ರ ಪೂರ್ತಿ ಬಾಡಿಗೆ ಪಡೆಯಲಾಗುತ್ತಿದೆ.
    ಯಾವುದೇ ಸಂಘ , ಸಂಸ್ಥೆಗಳು ನಡೆಸುವ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಸರ್ಟಿಫಿಕೇಟ್ ನೀಡುವುದು ಅಕಾಡೆಮಿ ಕಾರ್ಯವ್ಯಾಪ್ತಿಗೆ ಸಂಬಂಧಿಸಿದ ವಿಚಾರವಾಗಿರುವುದಿಲ್ಲ ಅಥವಾ ಅಕಾಡೆಮಿಯು ಪರೀಕ್ಷೆ ಪ್ರಾಧಿಕಾರವಾಗಿರುವುದಿಲ್ಲ. ಅಕಾಡೆಮಿಯ ವತಿಯಿಂದ ನೇರವಾಗಿ ಅಥವಾ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆಸುವ ತರಬೇತಿ ಶಿಬಿರ , ಕಮ್ಮಟ, ಸೆಮಿನಾರ್ ಗಳಲ್ಲಿ ಭಾಗವಹಿಸುವವರಿಗೆ ಸರ್ಟಿಫೀಕೇಟ್ ಆಯಾ ಸಂದರ್ಭದಲ್ಲಿ ನೀಡಲಾಗುತ್ತಿದೆ.


    ತುಳು ಮಾತೃ ಭಾಷಾ ಪ್ರಮಾಣ ಪತ್ರವನ್ನು (ತುಳು ಕೋಟ ಸರ್ಟಿಫೀಕೇಟ್) ಆಯಾ ವಿದ್ಯಾರ್ಥಿಗಳು ವಾಸಿಸುವ ತಾಲೂಕಿನ ತಹಶೀಲ್ದಾರರು ನೀಡುವವರಾಗಿದ್ದು, ಎಲ್ಲಾ ತಾಲೂಕುಗಳಲ್ಲಿ ಭಾಷಾ ಪ್ರಮಾಣ ಪತ್ರ ನೀಡಲಾಗುತ್ತಿದೆ. ಭಾಷಾ ಪ್ರಮಾಣ ಪತ್ರ ನೀಡುವ ಅಧಿಕಾರ ತಾಲೂಕು ದಂಡಾಧಿಕಾರಿಗಳ ವ್ಯಾಪ್ತಿಗೆ ಸೇರಿದ್ದಾಗಿರುತ್ತದೆ, ಕರ್ನಾಟಕದ ಯಾವುದೇ ಅಕಾಡೆಮಿಯು ವಿದ್ಯಾರ್ಥಿಗಳಿಗೆ ಭಾಷಾ ಪ್ರಮಾಣ ನೀಡುವ ಸಕ್ಷಮ ಪ್ರಾಧಿಕಾರವಾಗಿರುವುದಿಲ್ಲ. ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಈ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಭಾಷಾ ಪ್ರಮಾಣ ಪತ್ರದ ಅರ್ಜಿ ನಮೂನೆಯನ್ನು ತುಳು ಅಕಾಡೆಮಿಯ ನೋಟಿಸ್ ಬೋರ್ಡ್ ನಲ್ಲಿ ಲಗತ್ತಿಸಲಾಗಿರುತ್ತದೆ.


    ವಿದ್ಯಾರ್ಥಿಗಳು ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರವನ್ನು ಪಡೆಯುವ ರೀತಿಯಲ್ಲೇ ಮಾತೃ ಭಾಷಾ ಪ್ರಮಾಣ ಪತ್ರವನ್ನು ಪಡೆಯಲು ಅವಕಾಶ ಇರುವಂತಹದು. ಶಾಲಾ ದಾಖಲಾತಿ ವಿವರದೊಂದಿಗೆ ತಹಶೀಲ್ದಾರರ ಕಛೇರಿಗೆ ಅರ್ಜಿ ಸಲ್ಲಿಸಿದಾಗ ಭಾಷಾ ಪ್ರಮಾಣ ಪತ್ರವನ್ನು ತಹಶೀಲ್ದಾರರು ನೀಡುತ್ತಾರೆ. ತುರ್ತು ಸಂದರ್ಭದಲ್ಲಿ ಅರ್ಜಿ ಸಲ್ಲಿಸಿದ ದಿನದಂದೇ ಈ ಪ್ರಮಾಣ ಪತ್ರವನ್ನು ನೀಡುತ್ತಾರೆ.


    ತಹಶೀಲ್ದಾರರ ಹೊರತುಪಡಿಸಿ ಯಾರೇ ನೀಡುವ ಮಾತೃ ಭಾಷಾ ಸರ್ಟಿಫೀಕೇಟ್ ಗೆ ಕಾನೂನಿನ ಮಾನ್ಯತೆ ಇರುವುದಿಲ್ಲ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
    ಈ ಮೇಲಿನ ಎಲ್ಲ ವಿಚಾರಗಳ ಬಗ್ಗೆ ಮಂಗಳೂರು ದಕ್ಷಿಣದ ಶಾಸಕ ಶ್ರೀ ವೇದವ್ಯಾಸ ಕಾಮತ್ ಅವರು ಮಾಹಿತಿಯ ಕೊರತೆಯಿಂದ ವಾಸ್ತವ ಅಲ್ಲದ ಹೇಳಿಕೆಯನ್ನು ನೀಡಿರುವುದರಿಂದ ಈ ಸ್ಪಷ್ಟೀಕರಣವನ್ನು ನೀಡುವುದು ಅಗತ್ಯವಾಯಿತು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

    Post Views: 209

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.