ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 7 ಗ್ರಾ.ಪಂ.ಗಳ 7 ಕ್ಷೇತ್ರಗಳಲ್ಲಿ ಮೇ 25 ರಂದು ನಡೆಯುವ ಉಪ ಚುನಾವಣೆ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ 23ರ ಸಂಜೆ 5 ಗಂಟೆಯಿಂದ ಮೇ 25 ರ ಸಂಜೆ 5 ಗಂಟೆಯವರೆಗೆ ಉಳ್ಳಾಲ ತಾಲೂಕಿನ ಕಿನ್ಯಾ ಮುನ್ನೂರು, ಬಂಟ್ವಾಳ ತಾಲೂಕಿನ ವಿಟ್ಲ ಮುಡೂರು, ಬಾಳ್ತಿಲ, ಬೆಳ್ತಂಗಡಿ ತಾಲೂಕಿನ ಹೊಸಂಗಡಿ, ಪುದುವೆಟ್ಟು, ಸುಳ್ಯ ತಾಲೂಕಿನ ಕನಕಮಜಲು ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮದ್ಯದಂಗಡಿಗಳನ್ನು, ಮದ್ಯ ತಯಾರಿಕಾ ಘಟಕಗಳನ್ನು, ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಆನಂದ್ ಕೆ ಆದೇಶಿಸಿದ್ದಾರೆ.