Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೊಂಡಾಲ ಸಚ್ಚಿದಾನಂದ ಶೆಟ್ಟಿಯವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ
    ಇತ್ತೀಚಿನ ಸುದ್ದಿ

    ಬೊಂಡಾಲ ಸಚ್ಚಿದಾನಂದ ಶೆಟ್ಟಿಯವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ

    May 24, 2025
    Share

    ಮಂಗಳೂರು: ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ತನ್ನ 50ನೇ ವರ್ಷಾಚರಣೆ ಸಂದರ್ಭದಲ್ಲಿ ನಾಡು,ಹೊರನಾಡು ಮತ್ತು ವಿದೇಶಗಳಲ್ಲಿರುವ ವಿವಿಧ ಕ್ಷೇತ್ರಗಳ 74 ಮಂದಿ ಸಾಧಕರನ್ನು ಗುರುತಿಸಿ ಈ ಬಾರಿಯ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಯನ್ನು ನೀಡಿದೆ.

    ಮೇ 22ರಂದು ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಜರಗಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಖ್ಯಾತ ಉದ್ಯಮಿ, ಸಾಮಾಜಿಕ ಮತ್ತು ಶಿಕ್ಷಣ ಕ್ಷೇತ್ರದ ಸಾಧಕ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಅವರು 2025 ಸಾಲಿನ ಆರ್ಯಭಟ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.
    ಬೊಂಡಾಲ ಸರಕಾರಿ ಶಾಲೆಯನ್ನು ದತ್ತು ಪಡೆದು ‘ದಿ.ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಪ್ರೌಢಶಾಲೆ’ ಎಂಬ ಹೆಸರಿನಲ್ಲಿ ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಿದ್ದಲ್ಲದೆ ತಮ್ಮ ಬೊಂಡಾಲ ಚ್ಯಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಡಿರುವ ಸಮಾಜ ಸೇವೆ ಮತ್ತು ಯಕ್ಷಗಾನ ಸೇವೆಗಾಗಿ ಸಚ್ಚಿದಾನಂದ ಶೆಟ್ಟರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.


    ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಡಾ.ಅಶೋಕ್ ಬಿ. ಹಿಂಚಿಗೇರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾಕ್ಟರ್ ಎಚ್.ಎಲ್.ಎನ್.ರಾವ್ ಅಧ್ಯಕ್ಷತೆ ವಹಿಸಿದ್ದರು.ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ, ಹಿರಿಯ ಚಲನಚಿತ್ರ ನಟಿಯರಾದ ಪದ್ಮಶ್ರೀ ಭಾರತಿ ವಿಷ್ಣುವರ್ಧನ್, ಡಾ.ಜಯಮಾಲಾ, ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ಸಂಗೀತ ನಿರ್ದೇಶಕ ಪ್ರೇಮಕವಿ ಕೆ.ಕಲ್ಯಾಣ್ ಅತಿಥಿಗಳಾಗಿದ್ದರು.


    ಸ್ವಾಗತ ಸಮಿತಿಯ ಡಾ.ಕೆ.ಎನ್. ಅಡಿಗ ಅಡೂರು, ಗುರುರಾಜ್, ಡಾ. ಬಸವರಾಜು, ಎಚ್.ಎಸ್. ಹನುಮಂತ ರಾವ್, ಮಂಗಳೂರು ಪ್ರತಿನಿಧಿ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಮೊದಲಾದವರು. ಉಪಸ್ಥಿತರಿದ್ದರು. ಸುಗ್ಗನಹಳ್ಳಿ ಷಡಕ್ಷರಿ ಹಾಗೂ ಸಾರ್ಥವಳ್ಳಿ ನಾರಾಯಣಸ್ವಾಮಿ ಕಾರ್ಯಕ್ರಮ ನಿರೂಪಿಸಿದರು.

    Post Views: 237

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.