Facebook Twitter Instagram
    Friday, September 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದಕ್ಷಿಣ‌ ಕನ್ನಡ, ಉಡುಪಿ ಸೂಕ್ಷ್ಮ‌ ಪ್ರದೇಶಗಳಾಗಿ ಪರಿಗಣಿಸಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ಜಾರಿ
    ಇತ್ತೀಚಿನ ಸುದ್ದಿ

    ದಕ್ಷಿಣ‌ ಕನ್ನಡ, ಉಡುಪಿ ಸೂಕ್ಷ್ಮ‌ ಪ್ರದೇಶಗಳಾಗಿ ಪರಿಗಣಿಸಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ಜಾರಿ

    May 29, 2025
    Share

    ಬೆಂಗಳೂರು : ದಕ್ಷಿಣ‌ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ‌ ಪ್ರದೇಶಗಳಾಗಿ ಪರಿಗಣಿಸಿ, ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಡಾ.‌ ಜಿ.ಪರಮೇಶ್ವರ ಅವರು ಹೇಳಿದರು.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಯಾವುದೇ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರತಿಸಾರಿ ಈರೀತಿ ಆಗುತ್ತಿದ್ದರೆ ಸುಮ್ಮನೆ ಕೂರಲು ಆಗುವುದಿಲ್ಲ. ಕಾನೂನನ್ನು ಮತ್ತಷ್ಟು ಬಿಗಿ ಮಾಡುತ್ತೇವೆ ಎಂದರು.

    ಕಳೆದ ಬಾರಿ ಘಟನೆ ನಡೆದಾಗ ಪರಿಸ್ಥಿತಿ ಅರ್ಥೈಸಿಕೊಂಡು, ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸಲು ಪರಿಶೀಲನೆ ಮಾಡಿ, ತಕ್ಷಣ ಜಾರಿಗೆ ಬರುವ ನಿಟ್ಟಿನಲ್ಲಿ ಸರ್ಕಾರ ಆದೇಶ ಹೊರಡಿಸಿದೆ.‌

    ಈ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಕ್ರಮ ತೆಗೆದುಕೊಳ್ಳುತ್ತಾರೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ ಪ್ರದೇಶಗಳಾಗಿ ಪರಿಗಣಿಸುತ್ತೇವೆ. ಕೋಮು ಹಿಂಸೆಯನ್ನು ಹತ್ತಿಕ್ಕಲು, ಸರ್ಕಾರ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಿದೆ ಎಂದು‌ ತಿಳಿಸಿದರು.

    ನಕ್ಸಲ್ ನಿಗ್ರಹ ಕಾರ್ಯಪಡೆಯಲ್ಲಿನ ಅರ್ಧ ಸಿಬ್ಬಂದಿಗಳನ್ನು ಕೋಮು ಹಿಂಸೆ ನಿಗ್ರಹ ಪಡೆಗೆ ನಿಯೋಜಿಸಲಾಗುವುದು. ಅವರಿಗೆ ಅಗತ್ಯ ಅಧಿಕಾರ, ಸವಲತ್ತುಗಳನ್ನು ನೀಡುತ್ತೇವೆ. ಮೂರು ಜಿಲ್ಲೆಗಳಲ್ಲಿ ಹೆಚ್ಚು ಗಮನ ಹರಿಸುತ್ತೇವೆ ಎಂದು ಹೇಳಿದರು.

    ದ್ವೇಷ ಭಾವನೆ ಬಂದರೆ ಸಮಾಜ ಎಲ್ಲಿ ಉಳಿಯುತ್ತದೆ. ಜನರು ಅಲ್ಲಿ ಜೀವನ ಮಾಡಲು ಆಗುತ್ತದೆಯೇ? ಇದನ್ನು ಸರ್ಕಾರ ನೋಡಿಕೊಂಡು ಸುಮ್ಮನೆ ಇರುವುದಿಲ್ಲ ಎಂದರು.

    ಮಂಗಳೂರಿನಲ್ಲಿ ನಡೆದ ಯುವಕನ ಹತ್ಯೆ ಪ್ರಕರಣದ ತನಿಖೆಯಲ್ಲಿ ಗಂಭೀರವಾದ ಮಾಹಿತಿ ಸಿಕ್ಕಿದೆ. ಅದರ ಆಧಾರದ ಮೇಲೆ‌ಕ್ರಮ ತೆಗೆದುಕೊಳ್ಳುತ್ತೇವೆ. ಜನಪ್ರತಿನಿಧಿಗಳು ಶಾಂತಿ ನೆಲೆಸುವ ನಿಟ್ಟಿನಲ್ಲಿ ಸಹಕಾರ ಮಾಡಬೇಕು. ಪ್ರಚೋದನೆ ಮಾಡಲು‌ ಹೋದರೆ‌ ನಿಲ್ಲಿಅಲು ಹೇಗೆ ಸಾಧ್ಯ. ಧಾರ್ಮಿಕ ಮುಖಂಡರೊಂದಿಗೆ ಶಾಂತಿ ಸಭೆಗಳನ್ನು ಮಾಡಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.

    Post Views: 231

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.