Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಜ್ಯ ಸುದ್ದಿ»ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಿಕಾಂ ವಿದ್ಯಾರ್ಥಿ ಗಾಯ, ಆರ್ಸಿಬಿ, ಕೆಎಸ್ಸಿಎ ವಿರುದ್ಧ ಪ್ರಕರಣ ದಾಖಲು
    ರಾಜ್ಯ ಸುದ್ದಿ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಿಕಾಂ ವಿದ್ಯಾರ್ಥಿ ಗಾಯ, ಆರ್ಸಿಬಿ, ಕೆಎಸ್ಸಿಎ ವಿರುದ್ಧ ಪ್ರಕರಣ ದಾಖಲು

    June 7, 2025
    Share

    ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಕಬ್ಬನ್ಪಾರ್ಕ್ ಪೊಲೀಸ್ ಠಾಣೆಯಲ್ಲಿ ಆರ್ಸಿಬಿ, ಕೆಎಸ್ಸಿಎ, ಡಿಎನ್ಎ ಕಂಪನಿ ವಿರುದ್ಧ ಮೂರನೇ ಎಫ್ಐಆರ್ ದಾಖಲಾಗಿದೆ. ಗಾಯಾಳು ಬಿಕಾಂ ವಿದ್ಯಾರ್ಥಿ ಸಿ.ವೇಣು ಅವರು ನೀಡಿದ ದೂರು ಆಧಾರಸಿ, ಎಫ್ಐಆರ್ ದಾಖಲಾಗಿದೆ.

    ಆರ್ಸಿಬಿಯ ಉಚಿತ ಟಿಕೆಟ್‌ ಜಾಹೀರಾತು ನೋಡಿ ಕ್ರೀಡಾಂಗಣಕ್ಕೆ ಬಂದಿದ್ದೆ. ಕ್ರೀಡಾಂಗಣದ ಗೇಟ್ ನಂಬರ್ 6ರ ಬಳಿ ನೂಕುನುಗ್ಗಲು ಉಂಟಾಗಿತ್ತು. ನೂಕುನುಗ್ಗಲಿನಲ್ಲಿ ಬಲಗಾಲಿನ ಮೇಲೆ ಬ್ಯಾರಿಕೇಡ್‌ ಬಿದ್ದಿತ್ತು. ಇದರಿಂದ ಗಾಯಗೊಂಡು ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೇನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಈ ಹಿಂದೆ ಎರಡು ಕೇಸ್ ದಾಖಲು

    ಕಾಲ್ತುಳಿತದಲ್ಲಿ ಗಾಯಗೊಂಡ ರೋಲನ್ ಗೊಮೆಸ್ ಎಂಬುವರು ಶುಕ್ರವಾರ ಸಂಜೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಆರ್ಸಿಬಿ ಫ್ರಾಂಚೈಸಿ, ಕೆಎಸ್ಸಿಎ ಮತ್ತು ಡಿಎನ್ಎ ಕಂಪನಿ ವಿರುದ್ಧ ಬಿಎನ್ಎಸ್ ಕಾಯ್ದೆ 2023 (U/s-125(a)) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

    ಜಾಲತಾಣದಲ್ಲಿ ಆರ್ಸಿಬಿ ಪೋಸ್ಟ್ ನೋಡಿ ನನ್ನ ಗೆಳೆಯರ ಜೊತೆ ಸಂಭ್ರಮಾಚರಣೆ ವೀಕ್ಷಿಸಲು ಬಂದಿದ್ದೆ. ತೆರದ ಬಸ್ ಮೂಲಕ ಮೆರಬಣಿಗೆ ಇದೆ ಎಂದು ತಿಳಿಸಲಾಗಿತ್ತು. ಗೇಟ್ ನಂಬರ್ 17ರಲ್ಲಿ ನಾನು ಹೋಗುವಾಗ ನೂಕುನುಗ್ಗಲು‌ ಆಯ್ತು. ಈ ವೇಳೆ ನನ್ನ ತೋಳಿಗೆ ಪೆಟ್ಟಾಗಿದೆ ಎಂದು ಗಾಯಾಳು ರೋಲನ್ ಗೊಮೆಸ್ ದೂರು ನೀಡಿದ್ದರು.

    ಕಬ್ಬನ್ ಪಾರ್ಕ್ ಇನ್ಸ್ಪೆಕ್ಟರ್ ಗಿರೀಶ್ ದೂರು ನೀಡಿದ್ದ ದೂರಿನ ಆಧಾರದ ಮೇಲೆ ಬಿಎನ್ಎಸ್ ಸೆಕ್ಷನ್ 105, 115, 118ರಡಿ ಮೊಕದ್ದಮೆ ದಾಖಲಾಗಿತ್ತು. ಆರ್ಸಿಬಿ ಮ್ಯಾನೇಜ್ಮೆಂಟ್ A-1 ಆಗಿದ್ದರೆ, ಕಾರ್ಯಕ್ರಮ ಆಯೋಜನೆ ಮಾಡಿದ್ದ DNA ಇವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆ A-2 ಆಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ನ A3 ಯನ್ನಾಗಿ ಮಾಡಿ ಎಫ್ಐಆರ್ ದಾಖಲಿಸಲಾಗಿತ್ತು. ಆರ್ಸಿಬಿ ಮಾರ್ಕೆಟಿಂಗ್ ಮುಖಸ್ಥ ಸೇರಿ ನಾಲ್ವರನ್ನು ಬಂಧಿಸಲಾಗಿತ್ತು.

    Post Views: 281

    BComStudent ChinnaswamyStampede CrowdControl EventManagement FIR Injury KSCA LegalAction PublicSafety RCB

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.