Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಐದು ವರ್ಷಗಳ ನಿರಾಸೆ ಕೊನೆಗೊಳ್ಳಲಿ! ನವಯುಗ ಎಕ್ಸ್‌ಪ್ರೆಸ್ ಪುನರಾರಂಭಕ್ಕೆ ಕರಾವಳಿ ಜನರ ಆನ್‌ಲೈನ್ ಹೋರಾಟ
    ಕರಾವಳಿ ಸುದ್ದಿ

    ಐದು ವರ್ಷಗಳ ನಿರಾಸೆ ಕೊನೆಗೊಳ್ಳಲಿ! ನವಯುಗ ಎಕ್ಸ್‌ಪ್ರೆಸ್ ಪುನರಾರಂಭಕ್ಕೆ ಕರಾವಳಿ ಜನರ ಆನ್‌ಲೈನ್ ಹೋರಾಟ

    June 9, 2025
    Share

    ಮಂಗಳೂರು: ಮಂಗಳೂರಿನಿಂದ ಜಮ್ಮು ಕತ್ರಾಕ್ಕೆ ಸಂಚರಿಸುತ್ತಿದ್ದ ನವಯುಗ ಎಕ್ಸ್‌ಪ್ರೆಸ್‌ ರೈಲು ಸ್ಥಗಿತಗೊಂಡು ಐದು ವರ್ಷಗಳಾಗಿವೆ. ಈ ಹಿನ್ನೆಲೆಯಲ್ಲಿ ರೈಲು ಸೇವೆಯನ್ನು ಪುನರಾರಂಭಿಸುವಂತೆ ಒತ್ತಾಯಿಸಿ ಆನ್‌ಲೈನ್ ಸಹಿ ಸಂಗ್ರಹ ಅಭಿಯಾನವನ್ನು ದಕ್ಷಿಣ ಕನ್ನಡ ಜಿಲ್ಲಾ ರೈಲು ಬಳಕೆದಾರರ ಸಮಿತಿ ಆರಂಭಿಸಿದೆ.

    ಕರಾವಳಿಯ ರೈಲು ಬಳಕೆದಾರರು ಕೈಜೋಡಿಸಿದ್ದು, ರೈಲು ಮಾರ್ಗವನ್ನು ಬದಲಾಯಿಸಿ ಪುನರಾರಂಭಿಸುವಂತೆ ಆಗ್ರಹಿಸಿದ್ದಾರೆ.

    ದೇಶದ ಅತಿ ದೀರ್ಘ ಪ್ರಯಾಣದ ರೈಲುಗಳ ಪೈಕಿ 4ನೇ ಸ್ಥಾನ ಪಡೆದಿದ್ದ ನವಯುಗ ಎಕ್ಸ್‌ಪ್ರೆಸ್‌ ರೈಲು ಮಂಗಳೂರಿನಿಂದ ಜಮ್ಮು ಕತ್ರಾಕ್ಕೆ ತನ್ನ ಸೇವೆ ನಿಲ್ಲಿಸಿ ಆಗಲೇ 5 ವರ್ಷ ಕಳೆದಿದೆ. ಬಹು ಬೇಡಿಕೆಯ ಈ ರೈಲು ಸಂಚಾರ ಮತ್ತೆ ಆರಂಭಿಸಬೇಕೆಂದು ಒತ್ತಾಯಿಸಿ ಆನ್‌ಲೈನ್‌ ಮೂಲಕ ಹಕ್ಕೊತ್ತಾಯ ಅಭಿಯಾನ ಆರಂಭಿಸಲಾಗಿದೆ.

    ಜೂ.6ರಂದು ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ವರ್ಚುವಲ್‌ ಸಹಿ ಸಂಗ್ರಹ ಅಭಿಯಾನ ಆರಂಭಗೊಂಡಿದ್ದು, ಜುಲೈ 6 ರ ರಾತ್ರಿ 12 ಗಂಟೆಯ ತನಕ ನಡೆದಿದೆ. ಕರ್ನಾಟಕ ಕರಾವಳಿಯಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ನೇರ ರೈಲು ಸೇವೆ ಪುನರಾರಂಭಿಸುವ ಉದ್ದೇಶದಿಂದ ಅಭಿಯಾನ ಆರಂಭಿಸಲಾಗಿದೆ.

    1990ರಲ್ಲಿ ಆರಂಭವಾಗಿದ್ದ ಸೇವೆ:
    ಮಂಗಳೂರು ಸೆಂಟ್ರಲ್‌- ಶ್ರೀಮಾತಾ ವೈಷ್ಣೋದೇವಿ ಕತ್ರ ನವಯುಗ ಎಕ್ಸ್‌ಪ್ರೆಸ್‌ ರೈಲು 1990 ರಲ್ಲಿ ಮಂಗಳೂರಿನಿಂದ ಜಮ್ಮು ತಾವಿ ತನಕ ಸೇವೆ ನೀಡುತ್ತಿದ್ದು, 2015ರಲ್ಲಿ ಕತ್ರ ತನಕ ವಿಸ್ತರಿಸಲಾಗಿತ್ತು.

    ಪ್ರತೀ ಸೋಮವಾರ ಸಂಜೆ 5 ಗಂಟೆಗೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಪ್ರದೇಶ, ಹೊಸದಿಲ್ಲಿ, ಹರಿಯಾಣ, ಪಂಜಾಬ್‌ ಮೂಲಕ ಜಮ್ಮು ಮತ್ತು ಕಾಶ್ಮೀರದ ಕತ್ರಕ್ಕೆ 13 ರಾಜ್ಯಗಳನ್ನು ಬಳಸಿಕೊಂಡು ತಲುಪುತ್ತಿತ್ತು.

    ಒಟ್ಟು 3686 ಕಿ.ಮಿ. ಕ್ರಮಿಸಲು 70 ಗಂಟೆ 5 ನಿಮಿಷ ಅವಧಿ ತೆಗೆದುಕೊಳ್ಳುತ್ತಿದ್ದ ರೈಲು ಪ್ರಯಾಣ ದೂರದ ಲೆಕ್ಕದಲ್ಲಿ ದೇಶದ 4ನೇ ದೊಡ್ಡ ರೈಲು ಎಂಬ ಖ್ಯಾತಿಗೆ ಪಾತ್ರವಾಗಿತ್ತು. ದಾರಿಯುದ್ದಕ್ಕೂ ದೇಶದ ಪ್ರಸಿದ್ಧ ಯಾತ್ರಾಸ್ಥಳಗಳನ್ನು ಸಂಪರ್ಕಿಸುತ್ತಿತ್ತು. 20 ಕೋಚ್‌ಗಳ ರೈಲಿಗೆ ಈರೋಡಿನಲ್ಲಿ ತಿರುನೆಲ್ವೆಲಿಯಿಂದ ಬರುವ ಸ್ಲಿಪ್‌ ಕೋಚ್‌ಗಳನ್ನು ಜೋಡಿಸಲಾಗುತ್ತಿತ್ತು.

    ಕೋವಿಡ್‌ ಕಾಲಘಟ್ಟದಲ್ಲಿ ದೇಶದ ಎಲ್ಲ ರೈಲು ಸೇವೆಗಳು ನಿಂತಿದ್ದು, ಬಳಿಕ ಒಂದೊಂದೇ ಪುನರಾರಂಭಗೊಂಡಿತ್ತು. ಆದರೆ ಮಂಗಳೂರು ಸೆಂಟ್ರಲ್‌- ಕತ್ರಾ ನವಯುಗ ಎಕ್ಸ್‌ಪ್ರೆಸ್‌ ಮಾತ್ರ ಹಳಿಗೆ ಮರಳಲೇ ಇಲ್ಲ. ತಿರುನೆಲ್ವೆಲಿಯಿಂದ ಇದ್ದ ಸ್ಲಿಪ್‌ ರೈಲನ್ನು ಮಾತ್ರ 20 ಕೋಚ್‌ಗಳ ಸ್ವತಂತ್ರ ರೈಲಾಗಿ ಪರಿವರ್ತಿಸಿ ಈಗ ಕತ್ರಾಕ್ಕೆ ಓಡಿಸಲಾಗುತ್ತಿದೆ. ಇದರಿಂದಾಗಿ ಮಂಗಳೂರಿನಿಂದ ವೈಷ್ಣೋದೇವಿ ಸೇರಿದಂತೆ ದೇಶದ ಪ್ರಮುಖ ಯಾತ್ರಾಸ್ಥಳಗಳಿಗೆ ಹೋಗುತ್ತಿದ್ದ ಯಾತ್ರಿಗಳಿಗೆ ದೊಡ್ಡ ನಷ್ಟವಾಗಿದೆ.

    ಈ ಹಿಂದೆ ಮಂಗಳೂರು ಸೆಂಟ್ರಲ್‌ನಿಂದ ಕಾಸರಗೋಡು- ಪಾಲಕ್ಕಾಡ್‌ ಮೂಲಕ ನವಯುಗ ಎಕ್ಸ್‌ಪ್ರೆಸ್‌ ಸಂಚರಿಸುತ್ತಿದ್ದರೆ ಪ್ರಸ್ತುತ ರೂಟ್‌ ಬದಲಾಯಿಸಿ ಪುನರಾರಂಭಿಸಬೇಕೆಂಬುದು ಅಭಿಯಾನದ ಆಗ್ರಹ. ತಿರುನೆಲ್ವೆಲಿಯಿಂದ ಕತ್ರಕ್ಕೆ ಹೋಗುವ ರೈಲು ಸ್ವತಂತ್ರವಾಗಿ ಓಡುತ್ತಿರುವ ಕಾರಣ ಮಂಗಳೂರು ಸೆಂಟ್ರಲ್‌- ಶ್ರೀ ಮಾತಾ ವೈಷ್ಣೋದೇವಿ ಕತ್ರ ನವಯುಗ ಎಕ್ಸ್‌ಪ್ರೆಸ್‌ ರೈಲನ್ನು ಮಂಗಳೂರು- ಹಾಸನ- ಮೀರಜ್‌- ಪುಣೆ- ದಿಲ್ಲಿ ಮಾರ್ಗದಲ್ಲಿ ಓಡಿಸಬೇಕೆಂದು ಒತ್ತಾಯಿಸಲಾಗುತ್ತಿದೆ.

    Post Views: 212

    CitizenMovement CoastalCampaign FiveYearWait KaravaliVoice NawayugaExpress OnlineProtest PublicDemand RailwayUpdate TrainRevival TransportRestoration

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.