Facebook Twitter Instagram
    Thursday, June 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೆಡಿಕಲ್ ಶಾಪ್‌ ನಲ್ಲಿ ಚಿಲ್ಲರೆ ಕಾರಣಕ್ಕೆ ವಿವಾದ: ದಲಿತ ಯುವತಿಗೆ ಜಾತಿ ನಿಂದನೆ ಮತ್ತುಹಲ್ಲೆ
    ಇತ್ತೀಚಿನ ಸುದ್ದಿ

    ಮೆಡಿಕಲ್ ಶಾಪ್‌ ನಲ್ಲಿ ಚಿಲ್ಲರೆ ಕಾರಣಕ್ಕೆ ವಿವಾದ: ದಲಿತ ಯುವತಿಗೆ ಜಾತಿ ನಿಂದನೆ ಮತ್ತುಹಲ್ಲೆ

    June 10, 2025
    Share

    ಕುಂದಾಪುರ : ಮೆಡಿಕಲ್ ಶಾಪ್ ನಲ್ಲಿ ಚಿಲ್ಲರೆ ವಿಚಾರಕ್ಕೆ ಮುಸ್ಲಿಂ ಮಹಿಳೆಯೊಬ್ಬರು ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ದಲತಿ ಯುವತಿಗೆ ಹಲ್ಲೆ ಮಾಡಿದ ಘಟನೆ ಗುಲ್ವಾಡಿ ಗ್ರಾಮದ ಮಾವಿನಕಟ್ಟೆಯ ಮೆಡಿಕಲ್‌ ಶಾಪ್‌ ನಲ್ಲಿ ನಡೆದಿದೆ.

    ಹಲ್ಲೆಗೊಳಗಾದ ಯುವತಿಯನ್ನು ಲಕ್ಷ್ಮೀ ಎಂದು ಗುರುತಿಸಲಾಗಿದೆ. ಯಾಸ್ಮಿನ್‌ ಹಲ್ಲೆಗೈದ ಆರೋಪಿ. ಮಾವಿನಕಟ್ಟೆಯ ಮೆಡಿಕಲ್‌ಗೆ ಬಂದಿದ್ದ ಆ ಮಹಿಳೆ ಔಷಧ ಖರೀದಿಸಿ 500 ರೂ. ಕೊಟ್ಟಳು. ಚಿಲ್ಲರೆ ಇಲ್ಲ, ಕೊಡಿ ಎಂದ ಯುವತಿ ಹೇಳಿದ್ದಾಳೆ. ಆದರೆ ಯಾಸ್ಮಿನ್‌ ಅದೇ ವಿಚಾರಕ್ಕೆ ಯುವತಿಯ ಮೇಲೆ ಹಲ್ಲೆ ನಡೆಸಿ, ಅವಾಚ್ಯವಾಗಿ ಜಾತಿ ನಿಂದನೆ ನಡೆಸಿದ್ದಾಳೆ ಎನ್ನಲಾಗಿದೆ. ಹಲ್ಲೆಗೊಳಗಾದ ಲಕ್ಷ್ಮೀ ಅವರನ್ನು ಕುಂದಾಪುರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಆಸ್ಪತ್ರೆಗೆ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಂ ಶಂಕರ್‌ ಭೇಟಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿಯ ಆರೋಗ್ಯ ವಿಚಾರಿಸಿದರು. ಘಟನೆ ನಡೆದ ಔಷಧ ಅಂಗಡಿಗೂ ಭೇಟಿ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಪತ್ರಕರ್ತರೊಂದಿಗೆ ಮಾತನಾಡಿ, ಘಟನೆ ಕುರಿತಂತೆ ಕುಂದಾಪುರ ಗ್ರಾಮಾಂತರ ಠಾಣೆ ಯಲ್ಲಿ ಕೇಸು ದಾಖಲಾಗಿದೆ. ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಆರೋಪಿಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    Post Views: 293

    karnataka kundapura medical shop

    Related Posts

    ಕುಂದಾಪುರ: ನಾಪತ್ತೆಯಾದ ಮಹಿಳೆ ಹೀನಾ ಕೌಸರ್; ಮೂರು ದಿನ ಕಳೆದರೂ ಸಿಗದ ಸುಳಿವು

    June 12, 2025

    ಪಾಣೆಮಂಗಳೂರು ಸೇತುವೆ ಉಲ್ಲಂಘನೆ: ಚಾಲಕನ ವಿರುದ್ಧ ಎಫ್‌ಐಆರ್

    June 12, 2025

    ಮಂಗಳೂರು ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ: ಆದೇಶ ಪ್ರಕಟ

    June 12, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.