Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಜ್ಯ ಸುದ್ದಿ»ಬಂಡಾಜೆ ಟ್ರೆಕ್ಕಿಂಗ್ ವೇಳೆ ದಾರಿ ತಪ್ಪಿದ ವಿದ್ಯಾರ್ಥಿಗಳು ರಾತ್ರಿ ಪತ್ತೆ
    ರಾಜ್ಯ ಸುದ್ದಿ

    ಬಂಡಾಜೆ ಟ್ರೆಕ್ಕಿಂಗ್ ವೇಳೆ ದಾರಿ ತಪ್ಪಿದ ವಿದ್ಯಾರ್ಥಿಗಳು ರಾತ್ರಿ ಪತ್ತೆ

    June 10, 2025
    Share

    ಚಿಕ್ಕಮಗಳೂರು: ಟ್ರೆಕ್ಕಿಂಗ್ ಗೆ ತೆರಳಿ ಕಾಡಿನಲ್ಲಿ ದಾರಿ ತಪ್ಪಿ ಸಿಕ್ಕಿಹಾಕಿಕೊಂಡಿದ್ದ 10 ವಿಧ್ಯಾರ್ಥಿಗಳನ್ನು ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಮೂಡಿಗೆರೆ ತಾಲ್ಲೂಕಿನ ಬಲ್ಲಾಳರಾಯನದುರ್ಗ ಕಾಡಿನಲ್ಲಿ ನಡೆದಿದೆ.

    ಚಿತ್ರದುರ್ಗದ ವಿವಿಧ ಕಾಲೇಜಿನ ಐವರು ವಿದ್ಯಾರ್ಥಿನಿಯರು ಮತ್ತು ಐವರು ವಿದ್ಯಾರ್ಥಿಗಳ ತಂಡ ಟೆಂಪೊ ಟ್ರಾವೆಲರ್ ವಾಹನ ಬಾಡಿಗೆಗೆ ಪಡೆದು ಪ್ರವಾಸ ಬಂದಿದ್ದರು. ಆನ್‌ಲೈನ್‌ನಲ್ಲಿ ಟಿಕೆಟ್‌ ಬುಕ್ಕಿಂಗ್ ಮಾಡಿದ್ದರು. ರಾಣಿಝರಿ ಕಡೆಯಿಂದ ಚಾರಣ ಆರಂಭಿಸಬೇಕಿತ್ತು. ಗೂಗಲ್ ಮ್ಯಾಪ್‌ನಲ್ಲಿ ಬಂಡಾಜೆ ಟ್ರಕ್ಕಿಂಗ್ ಎಂದು ನಮೂದಿಸಿದಾಗ ದಕ್ಷಿಣ ಕನ್ನಡ ಜಿಲ್ಲೆಯ ದಿಡಪೆ ಮಾರ್ಗ ತೋರಿಸಿದೆ. ಅಲ್ಲಿಂದ ಚಾರಣ ಆರಂಭಿಸಿದ್ದು, ಬಂಡಾಜೆ ಜಲಪಾತ ತನಕ ಹೋಗಿದ್ದಾರೆ.

    ವಾಪಸ್ ಬರಲು ಬಲ್ಲಾಳರಾಯನದುರ್ಗ ಮತ್ತು ರಾಣಿಝರಿ ಕಡೆಯ ಮಾರ್ಗ ಹಿಡಿದಿದ್ದಾರೆ. ಅಷ್ಟರಲ್ಲಿ ಕತ್ತಲಾಗಿದ್ದರಿಂದ ದಾರಿ ತಪ್ಪಿದ್ದಾರೆ. ನೆಟ್‌ವರ್ಕ್ ಇಲ್ಲದ ಕಾರಣ ಗೂಗಲ್ ಮ್ಯಾಪ್ ಕೂಡ ಕೆಲಸ ಮಾಡಿಲ್ಲ.
    ವಾಪಸ್ ಬರಲು ಬಲ್ಲಾಳರಾಯನದುರ್ಗ ಮತ್ತು ರಾಣಿಝರಿ ಕಡೆಯ ಮಾರ್ಗ ಹಿಡಿದಿದ್ದಾರೆ. ಅಷ್ಟರಲ್ಲಿ ಕತ್ತಲಾಗಿದ್ದರಿಂದ ದಾರಿ ತಪ್ಪಿದ್ದಾರೆ. ನೆಟ್‌ವರ್ಕ್ ಇಲ್ಲದ ಕಾರಣ ಗೂಗಲ್ ಮ್ಯಾಪ್ ಕೂಡ ಕೆಲಸ ಮಾಡಿಲ್ಲ.
    ವಿಷಯ ತಿಳಿದ ಬಾಳೂರು ಠಾಣೆ ಸಬ್ ಇನ್‌ಸ್ಪೆಕ್ಟರ್ ದಿಲೀಪ್‌ಕುಮಾರ್, ಸ್ನೇಕ್ ಆರೀಫ್, ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಸ್ಥಳೀಯರು ಕಾಡಿಗೆ ಹೋಗಿ ಆರು ಗಂಟೆಗಳ ಕಾಲ ಹುಡಕಾಟ ನಡೆಸಿದರು. ಮಧ್ಯರಾತ್ರಿ 2 ಗಂಟೆ ವೇಳೆಗೆ ವಿದ್ಯಾರ್ಥಿಗಳು ಸಿಕ್ಕಿದ್ದು, ಎಲ್ಲರನ್ನೂ ಸುರಕ್ಷಿತವಾಗಿ ಕರೆತಂದರು.

    Post Views: 149

    forest karnataka missing student

    Related Posts

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಪೊಲೀಸರನ್ನು ಬಿಡದ ಕಳ್ಳರು: ಕಾನ್ಸ್ಟೇಬಲ್ ಮನೆಗೆ ನುಗ್ಗಿ, ಚಿನ್ನಾಭರಣ ದರೋಡೆ!

    February 27, 2026

    ಸ್ನೇಹಮಯಿ ಕೃಷ್ಣ ವಿರುದ್ಧ ಇನ್ನೊಂದು ಕೇಸ್‌..!!

    February 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.