Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮದುವೆಯಾಗುವುದಾಗಿ ನಂಬಿಸಿಚಿನ್ನಾಭರಣ ಪಡೆದು ಮೋಸ
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿಚಿನ್ನಾಭರಣ ಪಡೆದು ಮೋಸ

    August 14, 2022
    Share

    ಪಡುಬಿದ್ರಿ : ಮೂಡು ಪಲಿಮಾರು ನಿವಾಸಿ ಶೋಭಾ ಅವರ ಮನೆಗೆ ಮೇ 6ರಂದು ಬಂದಿದ್ದ ಅಪರಿಚಿತ ವ್ಯಕ್ತಿಯೊಬ್ಬ ತನ್ನನ್ನು ಹರೀಶ್‌ ಪುತ್ತೂರು ಹಾಗೂ ತಾನು ವಿಶ್ವಕರ್ಮ ಕುಲದವನೆಂದು ಪರಿಚಯಿಸಿಕೊಂಡು ಶೋಭಾ ಅವರಿಂದ 1.65 ಲಕ್ಷ ರೂ.ಗಳ ಚಿನ್ನಾಭರಣವನ್ನು ಪಡೆದು ಮೋಸ ಮಾಡಿರುವುದಾಗಿ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಆರೋಪಿಯು ಕುಂದಾಪುರದಲ್ಲಿ ಇದ್ದ ತನ್ನ 80 ಲಕ್ಷ ರೂ. ಮೌಲ್ಯದ ಜಾಗವು ಮಾರಾಟವಾಗಿದ್ದು, ಅದರ ದಾಖಲೆಗಳು ಬ್ಯಾಂಕಿನಲ್ಲಿ ಇರುವುದರಿಂದ ಅವುಗಳನ್ನು ಬಿಡಿಸಿಕೊಳ್ಳಲು ತನಗೆ ಸಹಾಯ ಮಾಡುವಂತೆ ಕೇಳಿಕೊಂಡಿದ್ದ. ಶೋಭಾ ಅವರು ತನ್ನಲ್ಲಿ ಹಣ ಇಲ್ಲವೆಂದರೂ ಅವರ ಅಕ್ಕ ಶ್ಯಾಮಲಾ ಹಾಗೂ ಶೋಭಾರನ್ನು ಆರೋಪಿಯು ನಂಬಿಸಿ, ಅಕ್ಕ ಶ್ಯಾಮಲಾ ಅವರಿಂದ 6 ಗ್ರಾಂ ತೂಕದ ಚಿನ್ನದ ಉಂಗುರ, ಶೋಭಾ ಅವರಿಂದ ಎರಡೂವರೆ ಪವನ್‌ ತೂಕದ ಪವನ್‌ ಸರ, ಒಂದೂಕಾಲು ಪವನ್‌ನ ಚಿನ್ನದ ಬೆಂಡೋಲೆ ಮತ್ತು ಜುಮ್ಕಿಯನ್ನು ತೆಗೆದುಕೊಂಡು ಹೋಗಿದ್ದ. ಚಿನ್ನದ ಹಣವನ್ನು ತನ್ನ ಜಾಗ ಮಾರಾಟ ಮಾಡಿ ಬಂದಿರುವ ಹಣದಲ್ಲಿ ಮೇ 16ರಂದು ನಿಮ್ಮ ಹಣಕ್ಕೆ ಹೆಚ್ಚುವರಿಯಾಗಿ ಹಣ ಸೇರಿಸಿ ಕೊಡುತ್ತೇನೆ ಎಂದು ಶೋಭಾ ಅವರನ್ನು ನಂಬಿಸಿದ್ದ.

    ಮೋಸದ ಉದ್ದೇಶದಿಂದಲೇ ಆರೋಪಿಯು ಈ ಕೃತ್ಯವೆಸಗಿದ್ದು, ಮೇ 14ರಿಂದ ಎರಡು ದಿನ ಮನೆಯಲ್ಲೇ ಬೀಡು ಬಿಟ್ಟಿದ್ದ. ಆ ಬಳಿಕ ಹಿಂದಿರುಗಿ ಬಾರದೆ ಮೋಸ ಮಾಡಿರುವುದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಶೋಭಾ ಅವರು ತಿಳಿಸಿದ್ದಾರೆ. ಇದೀಗ ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

    Post Views: 209

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.