Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ವಿಶೇಷ ಕಾರ್ಯಪಡೆಗೆ ಗಲಭೆ ನಿಗ್ರಹ ತರಬೇತಿ ಮತ್ತು ಸಾಮಾಜಿಕ ಜಾಲತಾಣಗಳ ನಿಗಾ ಕುರಿತು ವಿಶೇಷ ತರಬೇತಿ
    ಇತ್ತೀಚಿನ ಸುದ್ದಿ

    ಮಂಗಳೂರು: ವಿಶೇಷ ಕಾರ್ಯಪಡೆಗೆ ಗಲಭೆ ನಿಗ್ರಹ ತರಬೇತಿ ಮತ್ತು ಸಾಮಾಜಿಕ ಜಾಲತಾಣಗಳ ನಿಗಾ ಕುರಿತು ವಿಶೇಷ ತರಬೇತಿ

    July 3, 2025
    Share

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಮೂರು ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ, ಕೋಮು ಸೌಹಾರ್ದತೆ ಮತ್ತು ಶಾಂತಿಯುತ ವಾತಾವರಣವನ್ನು ಕಾಪಾಡುವ ಉದ್ದೇಶದಿಂದ ಇತ್ತೀಚೆಗೆ ಹೊಸದಾಗಿ ಸ್ಥಾಪಿಸಲಾದ ವಿಶೇಷ ಕಾರ್ಯಪಡೆ (Special Task Force) ಅಧಿಕಾರಿಗಳು ಮತ್ತು ಸಿಬ್ಬಂದಿಯವರಿಗೆ ಉತ್ತಮ ಕಾರ್ಯಕ್ಷಮತೆಗಾಗಿ ಮಹತ್ವದ ತರಬೇತಿಯನ್ನು ನೀಡಲಾಗಿದೆ.

    ಜುಲೈ 2, 2025 ರಂದು ಮಂಗಳೂರು ನಗರದ ನೆಹರೂ ಮೈದಾನದಲ್ಲಿ ನಡೆದ ಈ ತರಬೇತಿಯಲ್ಲಿ, ಕೋಮು ಗಲಭೆಗಳ ಸಂದರ್ಭದಲ್ಲಿ ಉದ್ರಿಕ್ತ ಜನಸಮೂಹವನ್ನು ಚದುರಿಸಲು ಬಳಸಲಾಗುವ Anti Riots gun ಮತ್ತು Stun Shell ಗಳನ್ನು ಉಪಯೋಗಿಸುವ ಬಗ್ಗೆ ಪ್ರಾಯೋಗಿಕ ತರಬೇತಿ ಮತ್ತು ಪ್ರಾತ್ಯಕ್ಷಿಕೆಗಳನ್ನು ನಡೆಸಲಾಯಿತು. ವಿಶೇಷ ಕಾರ್ಯಪಡೆ ಘಟಕದ ಆಪರೇಷನಲ್ ವಿಭಾಗದ 95 ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಈ ತರಬೇತಿಯಲ್ಲಿ ಭಾಗವಹಿಸಿದ್ದರು.

    ಇದರ ಜೊತೆಗೆ, ಗುಪ್ತಚರ ವಿಭಾಗದ ಕೆಲವು ಅಧಿಕಾರಿಗಳು ಮತ್ತು ಸಿಬ್ಬಂದಿಯವರಿಗೆ ಗುಪ್ತಚರ ಮಾಹಿತಿ ಸಂಗ್ರಹಿಸುವ ಬಗ್ಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ದ್ವೇಷ ಭಾಷಣ (Hate Speech) ಮುಂತಾದ ಸೂಕ್ಷ್ಮ ಮಾಹಿತಿಗಳನ್ನು ಪರಿಣಾಮಕಾರಿಯಾಗಿ ಸಂಗ್ರಹಿಸುವ ಕುರಿತು ವಿಶೇಷ ತರಬೇತಿಯನ್ನು ನೀಡಲಾಯಿತು. ಈ ತರಬೇತಿಯ ನಂತರ, ಕಾರ್ಯಪಡೆಯ ಸಿಬ್ಬಂದಿಗಳು ಮತ್ತು ಗುಪ್ತಚರ ವಿಭಾಗದ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಣೆಗೆ ಸಂಪೂರ್ಣ ಸನ್ನದ್ಧರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 160

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.