Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಜುಲೈ 11: “ಧರ್ಮ ಚಾವಡಿ” ತುಳು ಚಿತ್ರ ಬಿಡುಗಡೆ
    ಇತ್ತೀಚಿನ ಸುದ್ದಿ

    ಜುಲೈ 11: “ಧರ್ಮ ಚಾವಡಿ” ತುಳು ಚಿತ್ರ ಬಿಡುಗಡೆ

    July 9, 2025
    Share

    ಮಂಗಳೂರು: ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾದ ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದಲ್ಲಿ ನಿತಿನ್ ರೈ ಕುಕ್ಕವಳ್ಳಿ ನುಳಿಯಾಲು ನಿರ್ದೇಶನದಲ್ಲಿ ತಯರಾದ “ಧರ್ಮ ಚಾವಡಿ” ತುಳು ಚಿತ್ರ ಜುಲೈ 11 ರಂದು ಬಿಡುಗಡೆಗೊಳ್ಳಲಿದೆ ಎಂದು ಹಿರಿಯ ನಟ ರಮೇಶ್ ರೈ ಕುಕ್ಕುವಳ್ಳಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.


    ಚಿತ್ರ ನಿರ್ದೇಶಕ ನಿತಿನ್ ರೈ ಕುಕ್ಕವಳ್ಳಿ ಮಾತಾಡಿ, “ಇದು ನನ್ನ ಎರಡನೇ ಚಿತ್ರ, ಚಿತ್ರದ ಟೀಸರ್ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದು ಮುಂಬೈಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ವೀಕ್ಷಿಸಿದ ಪ್ರೇಕ್ಷಕರು ಸಿನಿಮಾವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

    ಸಿನಿಮಾ ಹೊಸ ನಿರೀಕ್ಷೆಯನ್ನು ಹುಟ್ಟು ಹಾಕಿದೆ. ಸಾಕಷ್ಟು ಜನರು ಇದು ಧರ್ಮ ದೈವದ ಮುಂದುವರೆದ ಭಾಗ ಎಂದು ಭಾವಿಸಿದ್ದರು, ಆದರೆ ಟೀಸರ್ ಬೇರೆಯೇ ರೀತಿಯಲ್ಲಿದ್ದು ಬಹಳಷ್ಟು ಕುತೂಹಲವನ್ನು ಹುಟ್ಟಿಹಾಕಿದೆ. ಮುಂಬೈ ಮತ್ತು ಪುತ್ತೂರಿನಲ್ಲಿ ನಡೆದ ಪ್ರೀಮಿಯರ್ ನೋಡಿದ ಜನ ಬಹಳಷ್ಟು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ“ ಎಂದರು.


    ಬಳಿಕ ಮಾತಾಡಿದ ನಟಿ ಧನ್ಯ ಪೂಜಾರಿ ”ಧರ್ಮ ಚಾವಡಿ ನನ್ನ ಮೊದಲ ಚಿತ್ರ. ಈಗಾಗಲೇ ಪ್ರೀಮಿಯರ್ ಶೋ ನೋಡಿದ್ದೇನೆ. ನಾನು ನಿರೀಕ್ಷೆ ಇಟ್ಟಿದ್ದಕ್ಕಿಂತ ಸಿನಿಮಾ ಚೆನ್ನಾಗಿದೆ. ಎಲ್ರು ಸಿನಿಮಾ ನೋಡಿ ಗೆಲ್ಲಿಸಿ“ ಎಂದರು.
    ಪತ್ರಿಕಾಗೋಷ್ಟಿಯಲ್ಲಿ ಚಿತ್ರ ನಿರ್ಮಾಪಕ ನಡುಬೈಲ್ ಜಗದೀಶ್ ಅಮೀನ್, ಸಂಗೀತ ನಿರ್ದೇಶಕ ಪ್ರಸಾದ್ ಕೆ. ಶೆಟ್ಟಿ, ಅರುಣ್ ರೈ ಪುತ್ತೂರು, ನೇಹಾ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ ಕುರಿತು:
    ನಿತಿನ್ ರೈ ಕುಕ್ಕುವಳ್ಳಿ ನಿರ್ದೇಶನದಲ್ಲಿ ಜಗದೀಶ್ ಅಮೀನ್ ನಡುಬೈಲು ಚಿತ್ರವನ್ನು ನಿರ್ಮಾಣ ಮಾಡಿದ್ದು ಪ್ರಸಾದ್ ಕೆ. ಶೆಟ್ಟಿ ಸಂಗೀತ ನೀಡಿದ್ದಾರೆ. ಶ್ರೀನಾಥ್ ಪವಾರ್ ಸಂಕಲನ ಅರುಣ್ ರೈ ಪುತ್ತೂರು ಛಾಯಾಗ್ರಹಣ ಚಿತ್ರಕ್ಕಿದ್ದು ರಜಾಕ್ ಪುತ್ತೂರು ಚಿತ್ರಕಥೆ ಬರೆದಿದ್ದಾರೆ.


    ಚಿತ್ರದಲ್ಲಿ ರಮೇಶ್ ರೈ ಕುಕ್ಕುವಳ್ಳಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು ರವಿ ಸ್ನೇಹಿತ್ , ಚೇತನ್ ರೈ ಮಾಣಿ, ಸುರೇಶ್ ರೈ, ಪ್ರಕಾಶ್ ಧರ್ಮ ನಗರ, ದೀಪಕ್ ರೈ ಪಾಣಾಜೆ, ಸುಂದರ್ ರೈ ಮಂದಾರ,ರಂಜನ್ ಬೋಳೂರು, ಮನೀಶ್ ಶೆಟ್ಟಿ ಸಿದ್ದಕಟ್ಟೆ, ರಕ್ಷಣ್ ಮಾಡೂರು, ರೂಪ ಡಿ ಶೆಟ್ಟಿ ಸವಿತಾ ಅಂಚನ್, ಧನ್ಯ ಪೂಜಾರಿ, ನೇಹಾ ಕೋಟ್ಯಾನ್, ನಿಶ್ಮಿತಾ ಶೆಟ್ಟಿ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ. ಸಚಿನ್ ಉಪ್ಪಿನಂಗಡಿ ಚಿತ್ರದ ವಿತರಣೆ ಹಕ್ಕನ್ನು ಪಡೆದುಕೊಂಡಿದ್ದಾರೆ.
    ಚಿತ್ರ ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಯ ಎಲ್ಲಾ ಥಿಯೇಟರ್ ಗಳಲ್ಲಿ ಬಿಡುಗಡೆಗೊಳ್ಳಲಿದೆ.

    Post Views: 209

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.