Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿಯ ಸೆರೆ
    Uncategorized

    ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿಯ ಸೆರೆ

    July 16, 2025
    Share

    ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿಯನ್ನು ಸುರತ್ಕಲ್ ಪೊಲೀಸರು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.

    ಬಂಧಿತ ಆರೋಪಿಯನ್ನು ಉಡುಪಿ ಮಂಚಿ ನಿವಾಸಿ ರಾಜೇಶ್ ನಾಯ್ಕ್ @ ರಾಜ್ @ ರಾಜು ಪಮಾಡಿ (48) ಎಂದು ಗುರುತಿಸಲಾಗಿದೆ

    ಮಂಗಳೂರು ನಗರ, ಉಡುಪಿ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ, ಧಾರವಾಡ ಹಾಗೂ ವಿವಿಧ ಕಡೆಗಳಲ್ಲಿ ಕೊಲೆ ಯತ್ನ, ಕಳವು, ಹಲ್ಲೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ರಾಜೇಶ್ ನಾಯ್ಕ್ @ ರಾಜ್ @ ರಾಜು ಪಮಾಡಿ ಎಂಬಾತನನ್ನು ಜುಲೈ 14 ರಂದು ಧಾರವಾಡ ಜಿಲ್ಲೆಯ ವಿದ್ಯಾಗಿರಿ ಎಂಬಲ್ಲಿಂದ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಲಾಗಿರುತ್ತದೆ.

    ಈತನ ವಿರುದ್ದ ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 4 ಕಳವು ಪ್ರಕರಣ, ಮುಲ್ಕಿ ಪೊಲೀಸ್ ಠಾಣೆಯಲ್ಲಿ 4 ಕಳವು ಪ್ರಕರಣ, ಜೈಲ್ ನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಸಮಯ ಸಹಾ ಖೈದಿಗಳಿಗೆ ಹಾಗೂ ಜೈಲ್ ಸಿಬ್ಬಂದಿಯವರಿಗೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ 2 ಪ್ರಕರಣವು ಬರ್ಕೆ ಠಾಣೆಯಲ್ಲಿ ದಾಖಲಾಗಿರುತ್ತದೆ. ಅಲ್ಲದೇ ಉಡುಪಿ ಜಿಲ್ಲೆಯ ಮಣಿಪಾಲ,. ಹಿರಿಯಡ್ಕ, ಬೈಂದೂರು, ಉಡುಪಿ ನಗರ, ಕುಂದಾಪುರ, ಗಂಗೋಳ್ಳಿ, ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಹೊನ್ನಾವರ, ಧಾರವಾಡ ಜಿಲ್ಲೆಯ ಉಪನಗರ ಪೊಲೀಸ್ ಠಾಣೆಗಳಲ್ಲಿ ಕಳವು ಪ್ರಕರಣಗಳು ಸೇರಿದಂತೆ ಒಟ್ಟು 21 ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ. ಈತನ ವಿರುದ್ದ ವಿವಿಧ ನ್ಯಾಯಾಲಯಗಳಲ್ಲಿ ಒಟ್ಟು 10 ವಾರಂಟ್ ಇರುತ್ತದೆ. ಆರೋಪಿಯನ್ನು ಸುರತ್ಕಲ್ ಠಾಣಾ ಸಿಬ್ಬಂದಿಯವರಾದ ಅಜಿತ್ ಮ್ಯಾಥ್ಯೂ,ಸುನಿಲ್ ರವರು ದಸ್ತಗಿರಿ ಮಾಡಿರುತ್ತಾರೆ.

    Post Views: 136

    Related Posts

    ಮಂಗಳೂರು: ಹೈದರಾಬಾದ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈಬರ್ ವಂಚಕರ ಜಾಲವನ್ನು ಬೇಧಿಸಿದ ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು- 6 ಮಂದಿ ಆರೋಪಿಗಳ ಬಂಧನ

    February 28, 2026

    ಪ್ರತಿಷ್ಠಿತ ಎಕ್ಸ್ ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ; 99 ಪರ್ಸೆಂಟೈಲ್ ಕ್ಕಿಂತ ಅಧಿಕ ಅಂಕ ಪಡೆದ 15 ವಿದ್ಯಾರ್ಥಿಗಳು

    February 18, 2026

    ಮಂಗಳೂರು:ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿ ಸಾವು , ಶವ ಮುಂದಿಟ್ಟು ಪ್ರತಿಭಟಿಸಿದವರ ವಿರುದ್ಧವೂ ಕೇಸ್- ಕಮಿಷನರ್

    February 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.