Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬಹುಕೋಟಿ ವಂಚನಾ ಜಾಲ ಪತ್ತೆ ಪ್ರಕರಣ; ಆರೋಪಿಯ ವಿರುದ್ಧ ಚಿತ್ರದುರ್ಗ, ಮುಂಬೈನಲ್ಲೂ ವಂಚನೆ ಪ್ರಕರಣ ದಾಖಲು..!
    ಇತ್ತೀಚಿನ ಸುದ್ದಿ

    ಮಂಗಳೂರು: ಬಹುಕೋಟಿ ವಂಚನಾ ಜಾಲ ಪತ್ತೆ ಪ್ರಕರಣ; ಆರೋಪಿಯ ವಿರುದ್ಧ ಚಿತ್ರದುರ್ಗ, ಮುಂಬೈನಲ್ಲೂ ವಂಚನೆ ಪ್ರಕರಣ ದಾಖಲು..!

    July 18, 2025
    Share

    ಮಂಗಳೂರು: ಮಹತ್ವದ ಕಾರ್ಯಾಚರಣೆಯಲ್ಲಿ ಮಂಗಳೂರು ಪೊಲೀಸರು ಶ್ರೀಮಂತರು ಮತ್ತು ಬೇರೆ ಬೇರೆ ನಗರಗಳ ಉದ್ಯಮಿಗಳನ್ನೇ ಗುರಿಯಾಗಿಸಿ ದೇಶಾದ್ಯಂತ ನೆಟ್ವರ್ಕ್ ಇಟ್ಟುಕೊಂಡು ಭಾರೀ ವಂಚನಾ ಜಾಲ ಎಸಗುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಹೆಚ್ಚುವರಿಯಾಗಿ, ಚಿತ್ರದುರ್ಗ ಮತ್ತು ಮುಂಬೈನಲ್ಲಿಯೂ ಸಹ ಅವರ ವಿರುದ್ಧ ಪ್ರಕರಣಗಳು ದಾಖಲಾಗಿವೆ.

    ಬಂಧಿತ ಆರೋಪಿಯನ್ನು ಬೊಲ್ಲಗುಡ್ಡ, ಬಜಾಲ್ ಕಂಕನಾಡಿ ಮಂಗಳೂರು ನಗರ ನಿವಾಸಿ ರೋಶನ್ ಸಲ್ಡಾನ(43) ಎಂದು ಗುರುತಿಸಲಾಗಿದೆ.

    ಆರೋಪಿ ರೋಶನ್ ಸಲ್ಡಾನ ವಿರುದ್ಧ ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 22/2025 ಕಲಂ: 316(2), 316(5) 318(2), 318(3) ಜೊತೆಗೆ 3(5) ಭಾರತೀಯ ನ್ಯಾಯ ಸಂಹಿತೆ ಹಾಗೂ ಅಪರಾಧ ಕ್ರಮಾಂಕ:30/2025 ಕಲಂ:316(2), 316(5), 318(2), 318 (3), 61(2) ಜೊತೆಗೆ 3(5) ಭಾರತೀಯ ನ್ಯಾಯ ಸಂಹಿತೆಯಂತೆ ವಂಚನೆ ಪ್ರಕರಣಗಳು ದಾಖಲಾಗಿರುತ್ತದೆ. ಚಿತ್ರದುರ್ಗ, ಮುಂಬೈ ಸೇರಿದಂತೆ ವಿವಿಧೆಡೆ ವಂಚನೆ ಪ್ರಕರಣಗಳು ದಾಖಲಾಗಿರುತ್ತವೆ.

    ಪ್ರಕರಣದಲ್ಲಿ ಆರೋಪಿಯು ದಿನಾಂಕ: 17-07-2025 ರಂದು ಆತನ ಮನೆಯಲ್ಲಿ ಇರುವ ಬಗ್ಗೆ ಮಾಹಿತಿ ಸಂಗ್ರಹಿಸಿಕೊಂಡು ಆರೋಪಿಯ ಮನೆಯ ಅಡಗುತಾಣದಲ್ಲಿ ಪತ್ತೆಯಾಗಿದ್ದು, ಪರಿಶೀಲಿಸಿದಾಗ ತನ್ನ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ರೂ 6,72,947/- ಮೌಲ್ಯದ ದೇಶಿ ಮತ್ತು ವಿದೇಶಿ ಮದ್ಯ ದೊರೆತಿದ್ದು, ನಂತರ ಮಧ್ಯವನ್ನು ಮುಂದಿನ ಕ್ರಮದ ಬಗ್ಗೆ ಸ್ವಾಧೀನಪಡಿಸಿಕೊಂಡು ಸೆನ್ ಕ್ರೈಂ ಪೊಲೀಸ್ ಠಾಣಾ ಅ.ಕ್ರ. 39/2025 ಅಬಕಾರಿ ಕಾಯ್ದೆಯಂತೆ ಪ್ರಕರಣವನ್ನು ದಾಖಲಿಸಿಕೊಂಡು ಆರೋಪಿಯನ್ನು ದಸ್ತಗಿರಿ ಮಾಡಲಾಗಿರುತ್ತದೆ. ಹಾಗೂ ‌ಆತನ ಮನೆಯಿಂದ ದಾಖಲಾತಿಗಳನ್ನು, ಖಾಲಿ ಚೆಕ್‌ಗಳನ್ನು ಹಾಗೂ ಸುಮಾರು 667 ಗ್ರಾಂ ಚಿನ್ನಭಾರಣಗಳು ಮತ್ತು ಅಂದಾಜು 2.75 ಕೋಟಿ ಮೌಲ್ಯದ ವಜ್ರದ ಉಂಗುರವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

    ಆರೋಪಿ ರೋಶನ್ ಸಲ್ಡಾನ ಇತರರೊಂದಿಗೆ ಸೇರಿ ಅವಶ್ಯಕತೆ ಇರುವ ಉದ್ದಿಮೆದಾರರಿಗೆ ಸಾಲ ಕೊಡಿಸುವುದಾಗಿ ನಂಬಿಸಿ ಮೋಸ ಮಾಡುತ್ತಿದ್ದು, ತನಿಖೆ ನಡೆಯುತ್ತಿರುವ ಪ್ರಕಾರ ಕಳೆದ 03 ತಿಂಗಳಲ್ಲಿ ಆರೋಪಿಯ ವ್ಯವಹಾರ ಪರಿಶೀಲಿಸಿದಾಗ ಇತನು ಗೋವಾ, ಬೆಂಗಳೂರು, ಪುಣೆ, ವಿಜಯಪುರ, ತುಮಕೂರು, ಕಲ್ಕತ್ತಾ, ಸಾಂಗ್ಲಿ, ಲಕ್ನೋ ,ಬಾಗಲಕೋಟೆ ಇತ್ಯಾದಿ ಕಡೆಗಳಲ್ಲಿ ಉದ್ದಿಮೆದಾರರಿಗೆ ಸಾಲ ಕೊಡಿಸುವುದಾಗಿ ನಂಬಿಸಿ ಸುಮಾರು 32 ಕೋಟಿ ರೂಗಳನ್ನು ಆರೋಪಿ ಮತ್ತು ಇತರರು ಪಡೆದುಕೊಂಡಿರುವುದು ಕಂಡುಬಂದಿರುತ್ತದೆ. ಆರೋಪಿಯನ್ನು ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

    Post Views: 221

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.