Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸಣ್ಣ ತಪ್ಪುಗಳಿಗೆ ಜೈಲು ಶಿಕ್ಷೆ ವಿಧಿಸುವಂತಿಲ್ಲ, ತಿದ್ದುಪಡಿಗೆ ಮುಂದಾದ ಕೇಂದ್ರ ಸರ್ಕಾರ!!
    ಇತ್ತೀಚಿನ ಸುದ್ದಿ

    ಸಣ್ಣ ತಪ್ಪುಗಳಿಗೆ ಜೈಲು ಶಿಕ್ಷೆ ವಿಧಿಸುವಂತಿಲ್ಲ, ತಿದ್ದುಪಡಿಗೆ ಮುಂದಾದ ಕೇಂದ್ರ ಸರ್ಕಾರ!!

    August 18, 2025
    Share

    ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಷ್ ಗೋಯಲ್  ಲೋಕಸಭೆಯಲ್ಲಿ  ಮಹತ್ವದ ಮಸೂದೆ ಮಂಡಿಸಲು  ಮುಂದಾಗಿದ್ದು,ಇದೇ ಸೋಮವಾರ (ಆ.18) ರಂದು ಜೀವನ ನಿರ್ವಹಣೆ & ವ್ಯವಹಾರಗಳನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಮಸೂದೆಯ ಮಂಡನೆಗೆ ಮುಂದಾಗಿದ್ದು,ಸಣ್ಣ ಪ್ರಮಾಣದ ತಪ್ಪುಗಳಿಗೂ ಜೈಲು ಶಿಕ್ಷೆ ವಿಧಿಸುವಂತೆ ಮಾಡುವ ಕೆಲವು ಕಾನೂನುಗಳಿಗೆ ತಿದ್ದುಪಡಿ ತರಲು ಮುಂದಾಗಿದೆ.

    ಹೌದು ಸಣ್ಣ ಪುಟ್ಟ ತಪ್ಪುಗಳಿಗೂ ಜೈಲು ಶಿಕ್ಷೆ ವಿಧಿಸಬಹುದಾದ ಕೆಲವು ನಿಬಂಧನೆಗಳನ್ನು ತೆಗೆದುಹಾಕಲು ಅಥವಾ ಅಪರಾಧಗಳ ಪಟ್ಟಿಯಿಂದ ಹೊರಗಿಡುವ ಉದ್ದೇಶ ಹೊಂದಿರುವ ‘ಜನ ವಿಶ್ವಾಸ (ತಿದ್ದುಪಡಿ) ಮಸೂದೆ-2025’ ಅನ್ನು ಸಚಿವ ಪಿಯೂಷ್ ಗೋಯಲ್ ಲೋಕಸಭೆಯಲ್ಲಿ ಮಂಡನೆ ಮಾಡಲಿದ್ದಾರೆ.

    ಈ ಬಗ್ಗೆ ಲೋಕಸಭೆ ಅಧಿಕೃತ ವೆಬ್ ಸೈಟ್ ನಲ್ಲಿ ಮಾಹಿತಿ ನೀಡಲಾಗಿದ್ದು ಈ ಪ್ರಕಾರವಾಗಿದೆ.ಜನರ ಜೀವನ ಮತ್ತು ವ್ಯವಹಾರಗಳನ್ನು ಸುಗಮಗೊಳಿಸುವ ಉದ್ದೇಶದಿಂದ, ಜೊತೆಗೆ ಆಡಳಿತದಲ್ಲಿ ವಿಶ್ವಾಸ ಹೆಚ್ಚಿಸುವ ಸಲುವಾಗಿ ಸಣ್ಣ ತಪ್ಪುಗಳನ್ನು ಅಪರಾಧ ಮುಕ್ತಗೊಳಿಸಲು,ತರ್ಕಬದ್ಧಗೊಳಿಸಲು ಕಾನೂನಿನಲ್ಲಿ ಮಾರ್ಪಾಡು ಮಾಡಲು ಅವಕಾಶ ಕಲ್ಪಿಸುವ ಮಸೂದೆಯನ್ನು ಸಚಿವರು ಮಂಡಿಸಲಿದ್ದಾರೆ ಎನ್ನಲಾಗಿದೆ.

    ಈ ಉದ್ದೇಶದಿಂದಾಗಿ ಬಹುತೇಕ 350ಕ್ಕೂ ಹೆಚ್ಚು ನಿಬಂಧನೆಗಳಿಗೆ ತಿದ್ದುಪಡಿ ತರಲು ಈ ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ ಎನ್ನಲಾಗಿದೆ. ಭಾರತದಾದ್ಯಂತ ವಾಣಿಜ್ಯ ಚಟುವಟಿಕೆಗಳನ್ನು ಇನ್ನಷ್ಟು ಸುಧಾರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಈ ಮಸೂದೆ ಉದ್ದೇಶ ಹೊಂದಿದೆ, ಹೀಗಾಗಿ ಜನರ ವ್ಯವಹಾರಗಳಿಗೆ ಅನುಕೂಲ ಮಾಡಿಕೊಡುವುದು ಮತ್ತು ಜನಸ್ನೇಹಿ ಪರಿಸರ ಸೃಷ್ಟಿಸುವುದು ಈ ಕ್ರಮದ ಉದ್ದೇಶ ಎಂದು ಸಂಬಂಧಪಟ್ಟ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    Post Views: 208

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.