Facebook Twitter Instagram
    Sunday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಪ್ರತಿಮೆ ಸ್ಥಾಪನೆಗೆ ಅನುಮತಿ ಕೋರಿ ಪುರಸಭೆಗೆ ಯಶ್‌ಪಾಲ್ ಸುವರ್ಣ ಪತ್ರ
    ಇತ್ತೀಚಿನ ಸುದ್ದಿ

    ಉಡುಪಿ: ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಪ್ರತಿಮೆ ಸ್ಥಾಪನೆಗೆ ಅನುಮತಿ ಕೋರಿ ಪುರಸಭೆಗೆ ಯಶ್‌ಪಾಲ್ ಸುವರ್ಣ ಪತ್ರ

    August 18, 2022
    Share

    ಉಡುಪಿ: ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಪ್ರತಿಮೆ ಸ್ಥಾಪನೆಗೆ ಅನುಮತಿ ನೀಡುವಂತೆ ಕೋರಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಷ್ಟ್ರೀಯ ಮುಖ್ಯ ಕಾರ್ಯದರ್ಶಿ ಯಶ್‌ಪಾಲ್ ಸುವರ್ಣ ಅವರು ನಗರದ ಪುರಸಭೆಗೆ ಪತ್ರ ಬರೆದಿದ್ದಾರೆ.

    ಬ್ರಹ್ಮಗಿರಿ ವೃತ್ತದಲ್ಲಿ ಅಳವಡಿಸಿರುವ ಫ್ಲೆಕ್ಸ್‌ನಲ್ಲಿ ಸಾವರ್ಕರ್‍ ಫೋಟೋ ಮುದ್ರಿಸಿರುವುದಕ್ಕೆ ಕಾಂಗ್ರೆಸ್ ಮತ್ತು ಎಸ್‌ಡಿಪಿಐ ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಇದರ ಬೆನ್ನಲ್ಲೇ ಕಾಂಗ್ರೆಸ್ ಮತ್ತು ಎಸ್‌ಡಿಪಿಐಗೆ ಸವಾಲು ಹಾಕಿರುವ ಯಶ್‌ಪಾಲ್ ಸುವರ್ಣ, ಉಭಯ ಪಕ್ಷಗಳು ಸಾವರ್ಕರ್ ಫೋಟೋ ವಿರೋಧಿಸುವುದನ್ನು ಮುಂದುವರಿಸಿದಲ್ಲಿ ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಪ್ರತಿಮೆ ಅಳವಡಿಸಲಾಗುವುದು ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ಪುರಸಭೆ ಅಧ್ಯಕ್ಷರು ಮತ್ತು ಆಯುಕ್ತರಿಗೆ ಅವರು ಪತ್ರ ಬರೆದಿದ್ದಾರೆ.ವಿನಾಯಕ ದಾಮೋದರ ಸಾವರ್ಕರ್ ಅವರು ಭಾರತದ ಸ್ವಾತಂತ್ರ ಹೋರಾಟದಲ್ಲಿ ಮುಂಚೂಣಿಯಲ್ಲಿ ತೊಡಗಿಸಿಕೊಂಡಿದ್ದರು. ಹೀಗಾಗಿ ಅವರ ಗೌರವಾರ್ಥ ಎಲ್ಲಾ ದೇಶಭಕ್ತರ ಪರವಾಗಿ ಸಾವರ್ಕರ್‍ ಪ್ರತಿಮೆಯನ್ನು ಬ್ರಹ್ಮಗಿರಿ ವೃತ್ತದಲ್ಲಿ ಸ್ಥಾಪಿಸಲು ನಾವು ಉದ್ದೇಶಿಸಿದ್ದೇವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ದೇಶ 75ನೇ ವರ್ಷದ ಸ್ವಾತಂತ್ರ ಸಂಭ್ರಮದಲ್ಲಿರುವಾಗ ಬ್ರಿಟಿಷರನ್ನು ಹಿಮ್ಮೆಟ್ಟಿಸುವಲ್ಲಿ ತೊಡಗಿಸಿಕೊಂಡ ವೀರ್‍ ಸಾವರ್ಕರ್ ಪ್ರತಿಮೆ ಸ್ಥಾಪನೆಗೆ ಇದೇ ಸರಿಯಾದ ಸಮಯವಾಗಿದೆ. ಹೀಗಾಗಿ ವೀರ್‍ ಸಾವರ್ಕರ್‌ ಪ್ರತಿಮೆ ಸ್ಥಾಪನೆಗೆ ಪುರಸಭೆಯಿಂದ ಅನುಮತಿ ನೀಡಬೇಕೆಂದು ಉಡುಪಿಯ ದೇಶಭಕ್ತ ಸಾರ್ವಜನಿಕರ ಪರವಾಗಿ ನಾನು ಮನವಿ ಮಾಡುತ್ತೇನೆ ಎಂದು ಕೋರಿದ್ದಾರೆ.

    Post Views: 150

    Related Posts

    ಉಡುಪಿ: ಕಾರು ಡಿಕ್ಕಿ ಅಪಘಾತದಲ್ಲಿ ಎಂ.ಬಿ.ಎ ವಿದ್ಯಾರ್ಥಿ ಬಲಿ

    June 7, 2025

    ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲಂಚ ಸ್ವೀಕರಿಸುತ್ತಿದ್ದಾಗ ಸೆರೆ

    June 7, 2025

    ಪುತ್ತೂರು: ಗಡಿಪಾರು ನೋಟಿಸ್ ವಿಚಾರಣೆ – 8 ಮಂದಿ ವಕೀಲರ ಮೂಲಕ ಹಾಜರಾತಿ

    June 6, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.