Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸಾರ್ವಜನಿಕ ಸಮಾರಂಭಗಳಲ್ಲಿ ಡಿಜೆಗಳಿಗೆ ಅವಕಾಶ ನೀಡುವುದಿಲ್ಲ- ಕಮಿಷನ‌ರ್ ಸ್ಪಷ್ಟನೆ
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕ ಸಮಾರಂಭಗಳಲ್ಲಿ ಡಿಜೆಗಳಿಗೆ ಅವಕಾಶ ನೀಡುವುದಿಲ್ಲ- ಕಮಿಷನ‌ರ್ ಸ್ಪಷ್ಟನೆ

    August 22, 2025
    Share

    ಮಂಗಳೂರು: ಸಾರ್ವಜನಿಕ ಸಮಾರಂಭಗಳಲ್ಲಿ ಧ್ವನಿವರ್ಧಕಗಳ ಬಳಕೆಗೆ ಷರತ್ತು ವಿದಿಸಿರುವುದನ್ನು ಖಂಡಿಸಿ, ಸಾರ್ವಜನಿಕ ಕಾರ್ಯಕ್ರಮಗಳನ್ನು ಬಹಿಷ್ಕರಿಸುವ ಸಂಘಟನೆಗಳ ನಿರ್ಧಾರದ ಕುರಿತಂತೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಪ್ರತಿಕ್ರಿಯಿಸಿದ್ದು, ಬಹಿಷ್ಕಾರ ಸೇರಿದಂತೆ ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲು ಅವರು ಸ್ವತಂತ್ರರಾಗಿದ್ದಾರೆ. ಆದರೆ ಕಾನೂನು ಸ್ಪಷ್ಟವಾಗಿದ್ದು, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಆದಾಗ್ಯೂ, ಸಾರ್ವಜನಿಕರು, ಹಿರಿಯ ನಾಗರಿಕರು, ರೋಗಿಗಳು ಮತ್ತು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಆಚರಣೆಗಳು ನಡೆಯುವಂತೆ ನೋಡಿಕೊಳ್ಳಲು ಅದಕ್ಕೆ ತಕ್ಕಂತೆ ಹೊಂದಿಕೊಳ್ಳುವ ಕೆಲವು ವ್ಯವಸ್ಥೆಗಳನ್ನು ಮಾಡುತ್ತೇವೆ ಎಂದು ಭರವನೆ ನೀಡಿದ್ದಾರೆ.

    ಗಣೇಶ ಹಬ್ಬದ ಆಯೋಜಕರ ಸಭೆ ಇಂದು ನಡೆಯಲಿದ್ದು, ಈ ಸಭೆಯಲ್ಲಿ ಡಿಸಿಪಿ, ಹೆಚ್ಚುವರಿ ಎಸ್ಪಿ ಡಿಕೆ ಮತ್ತು ಎಸಿಪಿಗಳು ಭಾಗವಹಿಸಲಿದ್ದು, ಇಲ್ಲಿ ಮಾರ್ಗಸೂಚಿಗಳನ್ನು ಅಂತಿಮಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ನಿಯಮಗಳಿವೆ ನಿಜ, ಆದರೆ ನಿಯಮಗಳಿಗೆ ಕೆಲವು ವಿನಾಯಿತಿಗಳನ್ನು ಸಮರ್ಥನೀಯ ಕಾರಣಗಳಿಗಾಗಿ ನೀಡಬಹುದು. ಆದರೆ ವಿನಾಯಿತಿಗಳೇ ನಿಯಮಗಳಾಗಲು ಸಾಧ್ಯವಿಲ್ಲ ಎಂದು ಕಮೀಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.

    ನಾರ್ವಜನಿಕ ಸಮಾರಂಭಗಳಲ್ಲಿ ಧ್ವನಿವರ್ಧಕಗಳ ಶಬ್ದವನ್ನು 50 ಡೆಸಿಬಲ್‌ಗೆ ಸೀಮಿತಗೊಳಿಸಬೇಕು ಎನ್ನುವ ಅದೇಶದಿಂದ ಕಾರ್ಯಕ್ರಮ ಆಯೋಜಕರು, ಕಲಾವಿದರು ಹಾಗೂ ಸಂಘದ ಸದಸ್ಯರಿಗೆ ಸಮಸ್ಯೆಯಾಗಿದೆ ದ.ಕ. ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಸಂಘ ಆರೋಪಿಸಿದ್ದು, ಈ ಹಿನ್ನೆಲೆಯಲ್ಲಿ ಅ. 21ರಿಂದ ಅನ್ವಯವಾಗುವಂತೆ ಈ ಸಮಸ್ಯೆ ಇತ್ಯರ್ದಪಡಿಸುವವರೆಗೆ ನಾವು ಸಾರ್ವಜನಿಕ ಕಾರ್ಯಕ್ರಮಗಳಿಗೆ ಧ್ವನಿವರ್ಧಕಗಳನ್ನು ನೀಡದಿರಲು ನಿರ್ದರಿಸಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ನಿನ್ನೆ ಮಾತಾಡಿದ್ದ ಸಂಘದ ಅಧ್ಯಕ್ಷ ಧನರಾಜ್ ಶೆಟ್ಟಿ ಅವರು, ಒಂದು ವಾರದಿಂದ ಅಲ್ಲಲ್ಲಿ ಧ್ವನಿವರ್ಧಕಗಳನ್ನು ಪೊಲೀಸರು ಮುಟ್ಟುಗೋಲು ಹಾಕಿಕೊಳ್ಳುತ್ತಿದ್ದಾರೆ. ಪೊಲೀಸರಲ್ಲೇ ಬೇಸ್ ಸ್ಪೀಕರ್ ಹಾಗೂ ಡಿಜಿ ಬಗ್ಗೆ ಗೊಂದಲಗಳಿವೆ, ಅಸ್ಪಷ್ಟತೆ ಇದೆ, ಇದರಿಂದಾಗಿ ಕಾರ್ಯಕ್ರಮ ಆಯೋಜಕರು, ಕಲಾವಿದರು ಹಾಗೂ ಸಂಘದ ಸದಸ್ಯರಿಗೆ ಸಮಸ್ಯೆಯಾಗಿದೆ ಎಂದು ಗಂಭೀರ ಆರೋಪ ಮಾಡಿದ್ದರು.

    Post Views: 221

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.