Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ-ಗೃಹ ಸಚಿವ ಡಾ.ಜಿ.ಪರಮೇಶ್ವರ್
    ಇತ್ತೀಚಿನ ಸುದ್ದಿ

    ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ-ಗೃಹ ಸಚಿವ ಡಾ.ಜಿ.ಪರಮೇಶ್ವರ್

    August 27, 2025
    Share

    ಬೆಂಗಳೂರು: ಧರ್ಮಸ್ಥಳ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ ತನಿಖೆಯನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮಂಗಳವಾರ ಹೇಳಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣದಲ್ಲಿ ಸತ್ಯ ಹೊರಗೆ ಬರಬೇಕು ಎಂದು ಕೋಟ್ಯಂತರ ಭಕ್ತರು ಕಾಯುತ್ತಿದ್ದಾರೆ. ಆರೋಪಿ ಚಿನ್ನಯ್ಯನನ್ನು ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ. ಎಸ್‌ಐಟಿಯವರು ವರದಿ ನೀಡಲಿ. ಮುಂದಿನ ಚರ್ಚೆ ಆನಂತರ ಎಂದು ಹೇಳಿದರು.

    ಈ ವಿಚಾರದಲ್ಲಿ ಸರ್ಕಾರ ತಪ್ಪೆಸಗಿದೆ ಎಂದು ಬಿಜೆಪಿಯವರು ಯಾವ ಆಧಾರದಲ್ಲಿ ಹೇಳುತ್ತಿದ್ದಾರೆ. ಎಸ್‌ಐಟಿ ರಚಿಸಿದ್ದೇ ತಪ್ಪು ಮತ್ತು ಷಡ್ಯಂತ್ರ ಎಂದು ಹೇಳುತ್ತಿರುವುದು ವಿಪರ್ಯಾಸ. ಮಹೇಶ್ ತಿಮರೋಡಿ ಮನೆಯಲ್ಲಿ ಎಸ್‌ಐಟಿ ಶೋಧ ನಡೆಸಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪ ಇಲ್ಲ. ಮಾಹಿತಿ ಮತ್ತು ಆಧಾರದ ಮೇಲೆ ಎಸ್‌ಐಟಿ ತನಿಖೆ ನಡೆಸುತ್ತಿದೆಯೇ ಹೊರತು, ಸರ್ಕಾರದ ನಿರ್ದೇಶನದಂತೆ ಅಲ್ಲ.

    ಪ್ರಕರಣದಲ್ಲಿ ಎಸ್‌ಐಟಿ ದೊಡ್ಡ ಜವಾಬ್ದಾರಿಯನ್ನು ಹೊಂದಿದ್ದು, ತನಿಖೆಯನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಲು ಪ್ರಯತ್ನಿಸುತ್ತಿದೆ. ತನಿಖೆ ಬೇಗ ಮುಗಿಯುವುದು ಉತ್ತಮ ಎಂದು ಸರ್ಕಾರ ಕೂಡ ಅಭಿಪ್ರಾಯಪಟ್ಟಿದೆ. ದೂರುದಾರರ ಹೇಳಿಕೆಗಳು ಮತ್ತು ಅದರ ಪರಿಣಾಮಗಳನ್ನು ಎಸ್‌ಐಟಿ ಮತ್ತು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದರು.

    Post Views: 184

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.