Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹನಿಟ್ರ್ಯಾಪ್ ಪ್ರಕರಣ; ಮಹಿಳೆ ಸಹಿತ 6 ಮಂದಿಯ ಬಂಧನ
    ಇತ್ತೀಚಿನ ಸುದ್ದಿ

    ಹನಿಟ್ರ್ಯಾಪ್ ಪ್ರಕರಣ; ಮಹಿಳೆ ಸಹಿತ 6 ಮಂದಿಯ ಬಂಧನ

    September 4, 2025
    Share

    ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಹನಿಟ್ರ್ಯಾಪ್ ಪ್ರಕರಣವೊಂದು ನಡೆದ ಬಗ್ಗೆ ವರದಿಯಾಗಿದ್ದು, ಹನಿಟ್ರ್ಯಾಪ್‌ ಜಾಲವನ್ನು ಬೇಧಿಸಿದ ಕುಂದಾಪುರ ಪೊಲೀಸರು ಮಹಿಳೆ ಸಹಿತ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

    ನಾವುಂದ ಬಡಾಕೆರೆಯ ಸವದ್ ಯಾನೆ ಅಚ್ಚು (28), ಗುಲ್ವಾಡಿ ಗಾಂಧೀ ಕಟ್ಟೆಯ ಸೈಪುಲ್ಲಾ(38), ಹಂಗಳೂರು ಗ್ರಾಮದ ಮೊಹಮ್ಮದ್ ನಾಸೀರ್ ಶರೀಫ್(36), ಕುಂಭಾಶಿ ಮೂಡುಗೋಪಾಡಿ ಜನತಾ ಕಾಲೋನಿಯ ಅಬ್ದುಲ್ ಸತ್ತಾರ್(23), ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಾಗೋಡಿಯ ಅಬ್ದುಲ್ ಅಝೀಝ್(26), ಕುಂದಾಪುರ ಎಂ.ಕೋಡಿಯ ಆಸ್ಮಾ(43) ಬಂಧಿತ ಆರೋಪಿಗಳು. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಒಟ್ಟು 18 ಲಕ್ಷ ರೂ. ಮೌಲ್ಯದ ಎರಡು ಕಾರುಗಳನ್ನು ವಶಪಡಿಸಿಕೊಳ್ಳ ಲಾಗಿದೆ. ಆರೋಪಿಗಳನ್ನು ಕೋಟೇಶ್ವರ ಗ್ರಾಮದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ. ಇದನ್ನೂ ಓದಿ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ; ಶರನ್ನವರಾತ್ರಿ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಈ ಪ್ರಕರಣದಲ್ಲಿ ದೂರುದಾರರಿಗೆ ಮೂರು ತಿಂಗಳ ಹಿಂದೆ ಕುಂದಾಪುರಕ್ಕೆ ಬಂದಾಗ ಆರೋಪಿ ಸವಾದ್‌ನ ಪರಿಚಯವಾಗಿದ್ದು, ಬಳಿಕ ಆತನ ಸ್ನೇಹಿತರಾದ ಉಳಿದ ಆರೋಪಿಗಳ ಪರಿಚಯವಾಗಿದೆ. ಇದೇ ವೇಳೆ ಸವಾದ್, ಆಸ್ಮಾ ಎಂಬಾಕೆಯನ್ನು ಪರಿಚಯ ಮಾಡಿಕೊಟ್ಟು ಮೊಬೈಲ್ ನಂಬರ್ ಕೊಟ್ಟಿದ್ದನು. ಆಕೆಯ ಜತೆ ಸಂಪರ್ಕ ಸಾಧಿಸಿದ ದೂರುದಾರ ಬಳಿಕ ಆಕೆಯ ಜತೆ ಲೈಂಗಿಕ ಸಂಪರ್ಕ ಮಾಡಬಹುದು ಎಂದು ತಿಳಿದು ಆಕೆಗೆ ಕರೆ ಮಾಡಿದ್ದಾನೆ. ಅದರಂತೆ ಆಕೆ ದೂರುದಾರನನ್ನು ಕುಂದಾಪುರಕ್ಕೆ ಸಪ್ಟೆಂಬರ್ 2 ರಂದು ಬರಮಾಡಿಸಿದ್ದಳು. ಬಳಿಕ ಆರೋಪಿಗಳೆಲ್ಲರೂ ಸೇರಿ ದೂರುದಾರನನ್ನು ಬೆದರಿಸಿ ಹಲ್ಲೆಗೈದು ಆತನ ಬಳಿ ಇದ್ದ ನಗದು ಹಾಗೂ ಎಟಿಎಂ ಕಾರ್ಡ್ ಬಲವಂತವಾಗಿ ಕಿತ್ತುಕೊಂಡು ಅದರ ಮೂಲಕವೂ ಹಣ ಡ್ರಾ ಮಾಡಿ ಒಟ್ಟು 81,200 ರೂಪಾಯಿ ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

    Post Views: 272

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.