Facebook Twitter Instagram
    Sunday, September 20
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಪು: ಫ್ಲ್ಯಾಟ್‌ನಿಂದ ಚಿನ್ನಾಭರಣ ಖತರ್ನಾಕ್ ಜೋಡಿ ಅಂದರ್
    ಇತ್ತೀಚಿನ ಸುದ್ದಿ

    ಕಾಪು: ಫ್ಲ್ಯಾಟ್‌ನಿಂದ ಚಿನ್ನಾಭರಣ ಖತರ್ನಾಕ್ ಜೋಡಿ ಅಂದರ್

    August 20, 2022
    Share

    ಕಾಪು, ಆಗಸ್ಟ್ 20: ಫ್ಲ್ಯಾಟ್‌ನಿಂದ ಚಿನ್ನಾಭರಣ ಸಹಿತ ನಗ-ನಗದು ಕಳವುಗೈಯ್ಯುತ್ತಿದ್ದ ಯುವತಿ ಮತ್ತು ಯುವಕನೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಉಡುಪಿಯ ಕಾಪುವಿನಲ್ಲಿ ನಡೆದಿದೆ.ಮಂಗಳೂರು ಬಜಪೆ ಮೂಲದ ಪ್ರಸ್ತುತ ಮೂಳೂರು ಶ್ರೀ ಸಾಯಿ ವಾರ್ಚರ್ ಫ್ಲ್ಯಾಟ್‌ನಲ್ಲಿ ವಾಸವಿರುವ ವಾಜೀದ್ (25) ಮತ್ತು ಉಡುಪಿ ಕಡಿಯಾಳಿಯ ಬಾಡಿಗೆ ಮನೆಯ ವಾಸಿ ಶಹನಾಜ್ (32) ಬಂಧಿತ ಆರೋಪಿಗಳು.

    ಮೂಳೂರಿನ ಶ್ರೀ ಸಾಯಿ ವಾರ್ಚರ್ ಫ್ಲ್ಯಾಟ್‌ನಲ್ಲಿ ವಾಸವಿದ್ದ ಸರ್ಫ್‌ರಾಜ್‌ ಅವರು ಮನೆಯಲ್ಲಿ ಇಲ್ಲದಿದ್ದಾಗ ಅವರ ಮನೆಯ ಕಪಾಟಿನ ಡ್ರಾಯರ್‌ನಲ್ಲಿಟ್ಟಿದ್ದ 1.98 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಾಣೆಯಾಗಿರುವ ವಿಚಾರ ಮುನ್ನೆಲೆಗೆ ಬಂದಿದ್ದ ಕಾರಣ ಅವರು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ಸಾಕ್ಷಿ ಆಧಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಸಂಶಯದ ಮೇರೆಗೆ ವಾಜೀದ್‌ನ್ನು ವಶಕ್ಕೆ ಪಡೆದಿದ್ದರು. ಆಗ ಆತ ಕಳ್ಳತನ ಮಾಡಿರುವುದನ್ನು ಬಾಯ್ಬಿಟ್ಟಿದ್ದ. ಈ ಕೃತ್ಯದಲ್ಲಿ ತನ್ನ ಸ್ನೇಹಿತೆ ಶಹನಾಜ್ ಕೂಡಾ ಕೈ ಜೋಡಿಸಿರುವುದಾಗಿ ತಿಳಿಸಿದ್ದ. ಎಸ್‌ಪಿ ಹಾಕೆ ಅಕ್ಷಯ್ ಮಚೀಂದ್ರಾ , ಹೆಚ್ಚುವರಿ ಎಸ್‌ಪಿ ಎಸ್‌.ಟಿ ಸಿದ್ಧಲಿಂಗಯ್ಯ ಅವರ ನಿರ್ದೇಶನದಂತೆ ಕಾರ್ಕಳ ಡಿವೈಎಸ್‌ಪಿ ವಿಜಯಪ್ರಸಾದ್ ಅವರ ಮಾರ್ಗದರ್ಶನದಂತೆ ಕಾಪು ವೃತ್ತ ನಿರೀಕ್ಷಕ ಕೆ.ಸಿ ಪೂವಯ್ಯ ಅವರ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ಮಾಡಿ ಆತನಿಂದ 3.38 ಲಕ್ಷ ರೂ ಸೊತ್ತು ವಶಕ್ಕೆ ಪಡೆದಿದ್ದಾರೆ. ಈತನ ವಿರುದ್ಧ ವಾಹನ ಕಳವು, ದನ ಕಳವು, ಚಿನ್ನಾಭರಣ ಕಳವು ಸೇರಿದಂತೆ 10ಕ್ಕೂ ಅಧಿಕ ಪ್ರಕರಣಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 217

    Related Posts

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.