Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹಿಮಾಚಲ, ಉತ್ತರಾಖಂಡದಲ್ಲಿ ಮೇಘಸ್ಪೋಟ-ಸಾವಿನ ಸಂಖ್ಯೆ 31ಕ್ಕೆ ಏರಿಕೆ, 18 ಮಂದಿ ನಾಪತ್ತೆ
    ಇತ್ತೀಚಿನ ಸುದ್ದಿ

    ಹಿಮಾಚಲ, ಉತ್ತರಾಖಂಡದಲ್ಲಿ ಮೇಘಸ್ಪೋಟ-ಸಾವಿನ ಸಂಖ್ಯೆ 31ಕ್ಕೆ ಏರಿಕೆ, 18 ಮಂದಿ ನಾಪತ್ತೆ

    August 21, 2022
    Share

    ಹೊಸದಿಲ್ಲಿ: ಹಿಮಾಚಲಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮೇಘಸ್ಪೋಟದಿಂದಾಗಿ ಸಾವನ್ನಪ್ಪುತ್ತಿರುವ ಸಂಖ್ಯೆ ಹೆಚ್ಚುತ್ತಲೇ ಇದ್ದು, ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಈ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದ್ದು, ಈಗಾಗಲೇ 18 ಮಂದಿ ಅವಶೇಷಗಳಡಿ ಸಿಲುಕಿ ನಾಪತ್ತೆಯಾಗಿದ್ದಾರೆ.

    ಶುಕ್ರವಾರ ತಡರಾತ್ರಿ ಜನರೆಲ್ಲರೂ ಗಾಢ ನಿದ್ರೆಯಲ್ಲಿದ್ದ ವೇಳೆ ಮೇಘಸ್ಪೋಟ ಸಂಭವಿಸಿದೆ. ಕಳೆದೆರಡು ದಿನಗಳಿಂದ ಅವಶೇಷಗಳಡಿ ಸಿಲುಕಿರುವವರ ಪತ್ತೆ ಕಾರ್ಯ ನಡೆಯುತ್ತಿದ್ದು, ಈ ಪೈಕಿ ಹಲವರ ಮೃತದೇಹ ಪತ್ತೆಯಾಗಿದೆ. ಹಿಮಾಚಲ ಪ್ರದೇಶದಲ್ಲಿ ಕನಿಷ್ಠ 22 ಮಂದಿ ಸಾವಿಗೀಡಾಗಿದ್ದು, 8 ಮಂದಿ ಅವಶೇಷಗಳಡಿ ಸಿಲುಕಿ ನಾಪತ್ತೆಯಾಗಿದ್ದಾರೆ. ಉತ್ತರಾಖಂಡ ಮತ್ತು ಒಡಿಶಾದಲ್ಲಿ ತಲಾ ನಾಲ್ವರು ಸಾವಿಗೀಡಾಗಿದ್ದಾರೆ. ಜಾರ್ಖಂಡ್‌ನ‌ಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಕುಶಾನ್‌ ಗ್ರಾಮದಲ್ಲಿ ಮನೆ ಕುಸಿದು ಬಿದ್ದು ಒಂದೇ ಕುಟುಂಬದ 8 ಮಂದಿ ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ.

    2 ಲಕ್ಷ ಮನೆಗಳಿಗೆ ಹಾನಿ
    ಜೀವ, ಆಸ್ತಿಪಾಸ್ತಿ ಹಾನಿ, ಸಾರ್ವಜನಿಕ ಸೌಲಭ್ಯಗಳಿಗೂ ಹಾನಿ ಸಂಭವಿಸಿದೆ. ಬೃಹತ್ ಗಾತ್ರದ ಬಂಡೆಕಲ್ಲುಗಳು ಉರುಳಿದ ಪರಿಣಾಮ ರಸ್ತೆ ಸಂಪರ್ಕ ಕಡಿತಗೊಂಡಿದೆ. ಈ ವರ್ಷದ ಮಳೆಗೆ ಪ್ರವಾಹ ಪರಿಸ್ಥಿತಿಯಿಂದಾಗಿ ಅಸ್ಸಾಂನಲ್ಲಿ 2.04 ಲಕ್ಷ ಮನೆಗಳಿಗೆ ಹಾನಿ ಯಂಟಾಗಿದೆ. ಒಟ್ಟಾರೆ 199 ಮಂದಿ ಕಳೆದ ಮೂರು ತಿಂಗಳಿನಲ್ಲಿ ಸಾವನ್ನಪ್ಪಿದ್ದಾರೆ. 2.41 ಲಕ್ಷ ಹೆಕ್ಟೇರ್‌ ಬೆಳೆಗೆ ಹಾನಿಯಾಗಿದೆ ಎಂದು ಸಿಎಂ ಬಿಸ್ವಂತ್ ಶರ್ಮ ತಿಳಿಸಿರುವುದಾಗಿ ವರದಿಯಾಗಿದೆ. ಒಡಿಶಾದಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಈಗಾಗಲೇ 500 ಗ್ರಾಮಗಳು ಜಲಾವೃತವಾಗಿವೆ. ಇಲ್ಲಿ ವಾಸಿಸುವ 4 ಲಕ್ಷ ಮಂದಿ ವಾಸಸ್ಥಾನ ಕಳೆದುಕೊಂಡಿದ್ದಾರೆ.

    Post Views: 230

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.