Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಡ್ರಗ್ಸ್ ದಂಧೆ ನಿಯಂತ್ರಣಕ್ಕೆ ಹೊಸ ಕ್ರಮ- ಸ್ಕ್ಯಾನ್ ಮಾಡಿ ಮಾಹಿತಿ ನೀಡಲು ಅವಕಾಶ
    ಇತ್ತೀಚಿನ ಸುದ್ದಿ

    ಡ್ರಗ್ಸ್ ದಂಧೆ ನಿಯಂತ್ರಣಕ್ಕೆ ಹೊಸ ಕ್ರಮ- ಸ್ಕ್ಯಾನ್ ಮಾಡಿ ಮಾಹಿತಿ ನೀಡಲು ಅವಕಾಶ

    September 25, 2025
    Share

    ಉಡುಪಿ ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳು, ಯುವ ಸಮುದಾಯವನ್ನೇ ಗುರಿಯಾಗಿರಿಸಿಕೊಂಡು ಸಕ್ರಿಯವಾಗಿರುವ ಡ್ರಗ್ಸ್‌ ಜಾಲವನ್ನು ಮಟ್ಟ ಹಾಕಲು ಉಡುಪಿ ಜಿಲ್ಲಾ ಪೊಲೀಸ್ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದೀಗ ಸಾರ್ವಜನಿಕರು ಈ ದಂಧೆಯ ಬಗ್ಗೆ ಅನಾಮಧೇಯವಾಗಿ ಮಾಹಿತಿ ನೀಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಕ್ಯೂಆ‌ರ್ ಕೋಡ್‌ನ್ನು ರಚಿಸಿದೆ.

    ಅಕ್ರಮ ಡ್ರಗ್ಸ್ ಹಾಗೂ ಸಿಗರೇಟ್ ಮಾರಾಟಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಅನಾಮಧೇಯರಾಗಿ ಕ್ಯೂಆ‌ರ್ ಕೋಡ್‌ನ್ನು ಸ್ಕ್ಯಾನ್ ಮಾಡಿ ಈ ಮೂಲಕ ಮಾಹಿತಿ ನೀಡಬಹುದಾಗಿದೆ. ಸ್ಕ್ಯಾನ್ ಮಾಡಿದಾಗ ಒಟ್ಟು 15 ಹಂತ ಗಳು ಬರಲಿದ್ದು, ಅದನ್ನು ಸಾರ್ವಜನಿಕರು ಅನುಸರಿಸಿ ಆಯ್ಕೆ ಮಾಡಿ ವರದಿ ಮಾಡಬೇಕು. ಆ ಮೂಲಕ ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಬಹುದು. ಮೊದಲ ಹಂತದಲ್ಲಿ ನೀವು ಏನು ವರದಿ ಮಾಡುತ್ತಿದ್ದೀರಿ ಎಂಬುದಕ್ಕೆ ಸೂಕ್ತವಾಗಿರುವುದನ್ನು ಆಯ್ಕೆ ಮಾಡಬೇಕು.

    ಮುಂದಿನ ವಿವಿಧ ಹಂತಗಳಲ್ಲಿ, ಅಕ್ರಮ ಮಾದಕ ವಸ್ತುಗಳ ಬಳಕೆ ಎಲ್ಲಿ ನಡೆಯುತ್ತಿದೆ, ಕಾಲೇಜು, ಸ್ನಾತಕೋತ್ತರ ಪದವಿ ಸಂಸ್ಥೆಯ ಹೆಸರು ಹಾಗೂ ಅಲ್ಲಿ ಏನು ನಡೆಯುತ್ತಿದೆ ಎಂಬುದರ ವಿವರ ನೀಡಬಹುದು. ಮಾದಕ ವಸ್ತು ಮಾರಾಟ ಅಥವಾ ವಿತರಣೆಯಲ್ಲಿ ತೊಡಗಿರುವವರ ಹೆಸರು ತಿಳಿದಿದ್ದರೆ ವಿವರಣೆ ನೀಡಬಹುದು. ಮಾರಾಟ ಮಾಡುವವರ ಗುಂಪು, ನೆಟ್‌ವರ್ಕ್‌ಗಳ ಬಗ್ಗೆಯೂ ಮಾಹಿತಿ ಕೊಡಬಹುದು.

    ಅಲ್ಲಿ ಯಾವ ರೀತಿಯ ಮಾದಕ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬುದನ್ನು ತಿಳಿಸಬಹುದು. ಒಂದು ವೇಳೆ ತಮಗೆ ಮಾದಕ ವ್ಯಸನಕ್ಕೆ ಒಳಗಾಗಿರುವ ತಮ್ಮ ಆಪ್ತರನ್ನು ಸಮಾಲೋಚನೆ ಮಾಡಬೇಕಿದ್ದಲ್ಲಿಯೂ ಮಾಹಿತಿ ಹಂಚಿಕೊಳ್ಳಬಹುದು. ಅಗತ್ಯಕ್ಕೆ ಸ್ನೇಹಿತರ ವಿವರ ನೀಡಬಹುದು. ಆ ವ್ಯಕ್ತಿಯ ವಿರುದ್ಧ ಪೊಲೀಸ್ ಕ್ರಮ ತೆಗೆದುಕೊಳ್ಳಬೇಕೆ ಅಥವಾ ಸಮಾಲೋಚನೆ ಮಾತ್ರ ಮಾಡಿದರೆ ಸಾಕೇ ಎಂಬುದರ ಮಾಹಿತಿ ಕೂಡ ತಿಳಿಸಬಹುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.

    Post Views: 140

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.