Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಸೈಫುದ್ದೀನ್ ಕೊಲೆ ಪ್ರಕರಣ- ಮೂವರು ಆರೋಪಿಗಳು ವಶಕ್ಕೆ
    ಇತ್ತೀಚಿನ ಸುದ್ದಿ

    ಉಡುಪಿ: ಸೈಫುದ್ದೀನ್ ಕೊಲೆ ಪ್ರಕರಣ- ಮೂವರು ಆರೋಪಿಗಳು ವಶಕ್ಕೆ

    September 28, 2025
    Share

    ಉಡುಪಿ : ಎಕೆಎಂಎಸ್ ಬಸ್ ಮಾಲಕ ಸೈಫುದ್ದೀನ್ ಕೊಲೆ ಪ್ರಕರಣದ ಮೂವರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. ನಂತರ ಪೊಲೀಸರು ಮೂವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

    ಎಕೆಎಂಎಸ್ ಬಸ್ ಚಾಲಕ ಅಬ್ದುಲ್ ಶುಕೂರು, ಫೈಝಲ್ ಹಾಗೂ ಶರೀಫ್ ಶರಣಾದ ಆರೋಪಿಗಳು ಎಂದು ಗುರುತಿಸಲಾಗಿದೆ.

    ಈ ಮೂವರು ಆರೋಪಿಗಳು ಕೂಡಾ ಸೈಫುದ್ದೀನ್ ನ ಸಹಚರರು. ಜೊತೆಗಿದ್ದವರಿಗೇ ಸುಪಾರಿ ನೀಡಿ ಕೊಲೆ ಮಾಡಿಸಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಮಲ್ಪೆ ಠಾಣಾ ಪೊಲೀಸರು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.ಅವಿನಾಶ್ ಕರ್ಕೇರ ಎಂಬವ ಈ ಪ್ರಕರಣದ ಭಾಗಿಯಾಗಿದ್ದ ಎನ್ನಲಾಗಿದೆ.

    ಸೆ. 27ರ ಬೆಳಗ್ಗೆ 10 ರಿಂದ 11 ಗಂಟೆ ಸುಮಾರಿಗೆ ಕೊಡವೂರಿನ ಮನೆಯೊಂದರಲ್ಲಿ ಸೈಫುದ್ದೀನ್‌ನನ್ನು ಮೂವರು ಸೇರಿ ಮಾರಕಾಸ್ತ್ರ ಗಳಿಂದ ದಾಳಿ ನಡೆಸಿ ಕೊಲೆಗೈದಿದ್ದರು. ಆರೋಪಿಗಳು ಪೊಲೀಸ್ ಠಾಣೆಗೆ ಹೋದ ನಂತರ ಸೈಪುದ್ದೀನ್ ಕೊಲೆ ವಿಚಾರ ಬೆಳಕಿಗೆ ಬಂದಿದೆ.

    ಇದೀಗ ಪ್ರಕರಣಕ್ಕೆ ಸಂಬಂಧಿಸಿ ಶರಣಾಗಿರುವ ಮೂವರು ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದ್ದು, ಯಾವ ಕಾರಣಕ್ಕಾಗಿ ಕೊಲೆ ಮಾಡಿದ್ದಾರೆ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಪೊಲೀಸ್ ತನಿಖೆಯಲ್ಲಿ ಸತ್ಯಾಂಶ ತಿಳಿದು‌ ಬರಬೇಕಿದೆ.

    ಸೈಪುದ್ದೀನ್ ಸುಮಾರು ವರ್ಷಗಳ ಹಿಂದೆ ಆತ್ರಾಡಿಯಲ್ಲಿ ನಡೆದಿದ್ದ ಪುಂಡಲಿಕಾ ಎಂಬವನ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ. ನಂತರ ಕೆಲವು ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ರೌಡಿ ಶೀಟರ್ ಆಗಿದ್ದ. ನಾಲ್ಕು ವರ್ಷಗಳ ಹಿಂದೆ ಮಣಿಪಾಲದ ಸೈಫ್ ಕಚೇರಿಯಲ್ಲಿ ಆತನ‌ ಮೇಲೆ ಕೊಲೆ ಪ್ರಕರಣ ಯತ್ನ ನಡೆದಿತ್ತು

    Post Views: 226

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.