Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೆಮ್ಮಿನ ಸಿರಪ್ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳ ಸಾವು ಪ್ರಕರಣ; ಫಾರ್ಮಾ ಕಂಪನಿ ಮಾಲೀಕ ಅರೆಸ್ಟ್
    ಇತ್ತೀಚಿನ ಸುದ್ದಿ

    ಕೆಮ್ಮಿನ ಸಿರಪ್ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳ ಸಾವು ಪ್ರಕರಣ; ಫಾರ್ಮಾ ಕಂಪನಿ ಮಾಲೀಕ ಅರೆಸ್ಟ್

    October 9, 2025
    Share

    ಚೆನ್ನೈ: ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ಸೇವಿಸಿ ಮಕ್ಕಳು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿರಪ್ ತಯಾರಿಕ ಕಂಪನಿಯ ಮಾಲೀಕನನ್ನು ಪೊಲೀಸರು ಚೆನ್ನೈನಲ್ಲಿ ಬಂಧಿಸಿದ್ದಾರೆ.

    ಸಿರಪ್ ಕುಡಿದು ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ 20ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ ಬಳಿಕ ಕೋಲ್ಡ್ರಿಫ್ ಸಿರಪ್ ಅನ್ನು ನಿಷೇಧಿಸಲಾಯಿತು. ಈ ಬೆನ್ನಲ್ಲೇ ಸಿರಪ್ ತಯಾರಿಸುತ್ತಿದ್ದ ಸ್ರೆಸನ್ ಫಾರ್ಮಾ ಕಂಪನಿಯ ಮಾಲೀಕ ರಂಗನಾಥನ್ ಮೂರು ದಿನಗಳಿಂದ ತಲೆಮರೆಸಿಕೊಂಡಿದ್ದ. ಈತನ ಬಗ್ಗೆ ಮಾಹಿತಿ ನೀಡಿದವರಿಗೆ 20,000 ರೂ. ಬಹುಮಾನವನ್ನೂ ಘೋಷಿಸಲಾಗಿತ್ತು.

    ಅಂತಿಮವಾಗಿ ಬುಧವಾರ ತಡರಾತ್ರಿ ಚೆನ್ನೈನಲ್ಲಿ ರಂಗನಾಥನ್‌ನನ್ನು ಬಂಧಿಸಲಾಗಿದೆ. ಸಿರಪ್‌ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಿಷಕಾರಿ ಕೈಗಾರಿಕಾ ರಾಸಾಯನಿಕ ಡೈಥಿಲೀನ್ ಗ್ಲೈಕೋಲ್ ಇರುವುದು ಪತ್ತೆಯಾದ ಬಳಿಕ ಮಾಲೀಕನನ್ನು ಅರೆಸ್ಟ್ ಮಾಡಲಾಗಿದೆ. ಸದ್ಯ ರಂಗನಾಥನ್‌ನನ್ನು ಚೆನ್ನೈನಿಂದ ಛಿಂದ್ವಾರಕ್ಕೆ ಪೊಲೀಸರು ಕರೆ ತರುತ್ತಿದ್ದು, ನಂತರ ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ.

    ಈ ಹಿಂದೆ ಸ್ರೆಸನ್ ಫಾರ್ಮಾ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಮಧ್ಯಪ್ರದೇಶವಲ್ಲದೆ ರಾಜಸ್ಥಾನದಲ್ಲೂ ಈ ಸಿರಪ್ ಸೇವಿಸಿದ ನಂತರ ಮಕ್ಕಳು ಸಾವನ್ನಪ್ಪಿರುವ ವರದಿಗಳಿವೆ. ಕೋಲ್ಡ್ರಿಫ್ ಹೆಸರಿನ ಈ ಸಿರಪ್ ಸೇವಿಸಿದ ಮಕ್ಕಳಲ್ಲಿ ಕಿಡ್ನಿ ಸೋಂಕು ಕಾಣಿಸಿಕೊಂಡು, ಹೆಚ್ಚಿನ ಸಂಖ್ಯೆಯ ಮಕ್ಕಳು ಸಾವನ್ನಪ್ಪಿದ್ದರು.

    ತಪಾಸಣೆ ವೇಳೆ, ಫಾರ್ಮಾದ ಕಾರ್ಖಾನೆಯಲ್ಲಿ ಯಾವುದೇ ದಾಖಲೆಗಳಿಲ್ಲದ ಡಿಇಜಿ ಕಂಟೇನರ್‌ಗಳು ಪತ್ತೆಯಾಗಿದ್ದವು. ನಿಯಮಗಳ ಪ್ರಕಾರ ಕೇವಲ ಶೇ.0.1ರಷ್ಟು ಮಾತ್ರ ಡಿಇಜಿ ಬಳಸಲು ಅನುಮತಿ ಇದ್ದರೂ, ಈ ಕಂಪನಿಯು ಶೇ.46-48ರಷ್ಟು ಈ ವಿಷಕಾರಿ ರಾಸಾಯನಿಕವನ್ನು ಕೋಲ್ಡ್ರಿಫ್ ಕೆಮ್ಮಿನ ಸಿರಪ್‌ನಲ್ಲಿ ಬಳಸುತ್ತಿತ್ತು ಎಂಬ ಆಘಾತಕಾರಿ ಮಾಹಿತಿಯು ತನಿಖೆಯು ಬಹಿರಂಗವಾಗಿದೆ.

    ಇಷ್ಟಲ್ಲದೆ, ಕಂಪನಿಯು ಉತ್ತಮ ಉತ್ಪಾದನಾ ಪದ್ಧತಿಗಳ (ಜಿಎಂಪಿ) ಪ್ರಮಾಣಪತ್ರವನ್ನು ಸಹ ಹೊಂದಿರಲಿಲ್ಲ. ಆದರೂ, ಜೆನೆರಿಕ್ ಔಷಧಿಗಳನ್ನು ತಯಾರಿಸಿ ಮಾರಾಟವನ್ನು ಮಾಡುತ್ತಿತ್ತು. ತಮಿಳುನಾಡಿನ ಕಾಂಚೀಪುರಂನ ಕಾರ್ಖಾನೆಯಲ್ಲಿ ಈ ಲೋಪಗಳು ಪತ್ತೆಯಾದ ನಂತರ, ರಾಜ್ಯ ಔಷಧಿ ನಿಯಂತ್ರಣ ಪ್ರಾಧಿಕಾರವು ತಕ್ಷಣವೇ ಉತ್ಪಾದನೆಯನ್ನು ನಿಲ್ಲಿಸುವಂತೆ ಆದೇಶಿಸಿ, ಎಲ್ಲಾ ದಾಸ್ತಾನುಗಳನ್ನು ವಶಕ್ಕೆ ಪಡೆದಿತ್ತು. ಕಂಪನಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿ, ಪರವಾನಗಿಯನ್ನು ಅಮಾನತುಗೊಳಿಸಿತ್ತು. ಈ ಘಟನೆಯ ನಂತರ, ಕನಿಷ್ಠ ಒಂಬತ್ತು ರಾಜ್ಯಗಳು ಈ ಸಿರಪ್ ಅನ್ನು ನಿಷೇಧಿಸಿವೆ.

    Post Views: 197

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.