Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಉಡುಪಿ : ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ 15 ಲಕ್ಷ ಮೌಲ್ಯದ ಮಾದಕ ವಸ್ತು ನಾಶ
    Uncategorized

    ಉಡುಪಿ : ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ 15 ಲಕ್ಷ ಮೌಲ್ಯದ ಮಾದಕ ವಸ್ತು ನಾಶ

    October 9, 2025
    Share

    ಉಡುಪಿ: ದಿನಾಂಕ 09/10/2025ರಂದು ಉಡುಪಿ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 9 ಕೆಜಿ 937 ಗ್ರಾಂ 209 ಮಿಲಿಗ್ರಾಂ ತೂಕದ ಅಂದಾಜು ಮೌಲ್ಯ ರೂಪಾಯಿ 7,12,963/- ಬೆಲೆಯ ಗಾಂಜಾ, 345 ಗ್ರಾಂ 596 ಮಿಲಿಗ್ರಾಂ ಎಂ.ಡಿ.ಎಂ.ಎ. ಅಂದಾಜು ಮೌಲ್ಯ ರೂಪಾಯಿ 8,08,464/- ಹಾಗೂ ಮೌಲ್ಯರಹಿತ 61 ಗ್ರಾಂ 430 ಮಿಲಿಗ್ರಾಂ ಬಿಳಿ ಪೌಡರ್‌ನ್ನು ಪಡುಬಿದ್ರಿ ಠಾಣಾ ಸರಹದ್ದಿನ ಮೆ. ಆಯುಷ್‌ ಎನ್‌ವಿರೋಟೆಕ್‌ ಪ್ರೈ. ಲಿ., ಪಡುಬಿದ್ರಿ ಎಂಬಲ್ಲಿ ನಾಶಪಡಿಸಲಾಯಿತು. ನಾಶಪಡಿಸಿದ ಮಾದಕ ದ್ರವ್ಯದ ಒಟ್ಟು ಅಂದಾಜು ಮೌಲ್ಯ ರೂಪಾಯಿ 15,21,427/- ಆಗಿರುತ್ತದೆ.

    ಈ ಕಾರ್ಯಾಚರಣೆಯಲ್ಲಿ ಉಡುಪಿ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಡ್ರಗ್‌ ಡಿಸ್‌ಪೋಸಲ್‌ ಕಮಿಟಿಯ ಅಧ್ಯಕ್ಷರಾದ ಹರಿರಾಮ್‌ ಶಂಕರ್‌, ಐಪಿಎಸ್‌, ಜಿಲ್ಲಾ ಡ್ರಗ್‌ ಡಿಸ್‌ಪೋಸಲ್‌ ಕಮಿಟಿ ಸದಸ್ಯರು ಹಾಗೂ ಸಹಾಯಕ ಪೊಲೀಸ್‌ ಅಧೀಕ್ಷಕರಾದ ಡಾ. ಹರ್ಷಾ ಪ್ರಿಯಂವದಾ ಐ.ಪಿ.ಎಸ್. ಮತ್ತು ಉಡುಪಿ ಉಪವಿಭಾಗದ ಪೊಲೀಸ್‌ ಉಪಾಧೀಕ್ಷಕರು ಹಾಗೂ ಸದಸ್ಯರಾದ ಪ್ರಭು ಡಿ.ಟಿ. ಇತರ ಪೊಲೀಸ್‌ ಅಧಿಕಾರಿಯವರು ಮತ್ತು ಮೆ. ಆಯುಷ್‌ ಎನ್‌ವಿರೋಟೆಕ್‌ ಪ್ರೈ. ಲಿ., ಪಡುಬಿದ್ರಿಯ ಅಧಿಕಾರಿಯವರು ಉಪಸ್ಥಿತರಿದ್ದರು.

    ಉಡುಪಿ ನಗರ ಠಾಣೆಯ 03 ಪ್ರಕರಣ, ಸೆನ್‌ ಠಾಣೆಯ 2 ಪ್ರಕರಣ ಹಾಗೂ ಮಲ್ಪೆ, ಪಡುಬಿದ್ರಿ, ಶಿರ್ವಾ, ಕಾರ್ಕಳ ನಗರ ಹಾಗೂ ಮಣಿಪಾಲ ಠಾಣೆಯ ತಲಾ 01 ಪ್ರಕರಣ ಸೇರಿ ಒಟ್ಟು 10 ಪ್ರಕರಣಗಳಲ್ಲಿ ವಶಪಡಿಸಿಕೊಂಡ ಮಾದಕ ದ್ರವ್ಯ ಪದಾರ್ಥವನ್ನು ಮಾನ್ಯ ನ್ಯಾಯಾಲಯದ ಆದೇಶಾನುಸಾರ ನಾಶಗೊಳಿಸಲಾಗಿದೆ. ಇದರಲ್ಲಿ 2021ರ 01 ಪ್ರಕರಣ, 2024ರ 03 ಪ್ರಕರಣ ಹಾಗೂ 2025ರ 06 ಪ್ರಕರಣ ಒಳಗೊಂಡಿರುತ್ತದೆ. 2021ರ ಪಡುಬಿದ್ರಿ ಠಾಣೆಯ ಅಪರಾಧ ಕ್ರಮಾಂಕ 76/2021ರ ಪ್ರಕರಣವು ಸಜೆಯಲ್ಲಿ ಮುಕ್ತಾಯಗೊಂಡಿದ್ದು, ಆರೋಪಿತ ಅಬ್ದುಲ್‌ ರಹಿಮಾನ್‌ ಎಂಬಾತನಿಗೆ ಮಾನ್ಯ ನ್ಯಾಯಾಲಯವು ರೂಪಾಯಿ 8,000/- ಜುಲ್ಮಾನೆ ವಿಧಿಸಿ ಶಿಕ್ಷೆ ಪ್ರಕಟಿಸಿರುತ್ತದೆ. 2025ರ ಮಣಿಪಾಲ ಠಾಣೆಯ ಪ್ರಕರಣವು ತನಿಖೆಯಲ್ಲಿದ್ದು, ಉಳಿದ ಎಲ್ಲಾ ಪ್ರಕರಣಗಳು ಮಾನ್ಯ ನ್ಯಾಯಾಲಯದ ವಿಚಾರಣೆಯಲ್ಲಿ ಇರುತ್ತದೆ.

    Post Views: 155

    Related Posts

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.