Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬೈಕ್ ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪ- ಇಬ್ಬರು ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಬೈಕ್ ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪ- ಇಬ್ಬರು ಬಂಧನ

    October 10, 2025
    Share

    ಮಂಗಳೂರು: ಬೈಕ್ ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ಸಾದಿಕ್ ಹಾಗೂ ಅಬ್ದುಲ್ ಮಜೀದ್ ಬಂಧಿತ ಆರೋಪಿಗಳು.ಬಂಧಿತರಿಂದ 88,700 ರೂ. ಮೌಲ್ಯದ 8.790 ಕಿಲೋ ಗ್ರಾಂ ಗಾಂಜಾ, 1,00,000 ರೂ. ಮೌಲ್ಯದ ಬೈಕ್ ಸೇರಿದಂತೆ ಒಟ್ಟು 2,17,460 ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಬುಧವಾರ ಬೆಳಗ್ಗೆ ಬಂಟ್ವಾಳ ಪಿಎಸ್‌ಐ ಸಂದೀಪ್‌ ಕುಮಾ‌ರ್ ಶೆಟ್ಟಿ ಠಾಣಾ ವ್ಯಾಪ್ತಿಯಲ್ಲಿ ಸಿಬ್ಬಂದಿಯೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಗೂಡಿನಬಳಿ ಸಮೀಪ ಪಾಣೆಮಂಗಳೂರು ಕಡೆಯಿಂದ ಬಿ.ಸಿ.ರೋಡು ಕಡೆಗೆ ಬೈಕ್‌ನಲ್ಲಿ ಹೆಲೈಟ್ ಧರಿಸದೆ ಬರುತ್ತಿದ್ದ ಇಬ್ಬರನ್ನು ನಿಲ್ಲಿಸಲು ಸೂಚಿಸಿದಾಗ, ಅವರು ಬೈಕನ್ನು ನಿಲ್ಲಿಸದೆ ಪರಾರಿಯಾದರು.

    ಈ ವೇಳೆ ಅವರನ್ನು ಬೆನ್ನಟ್ಟಿದ ಪೊಲೀಸರು ಕೈಕುಂಜೆ ರೈಲ್ವೆ ಸ್ಟೇಷನ್ ಬಳಿ ಬೈಕನ್ನು ಸುತ್ತುವರಿದು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೊಳಪಡಿಸಿದಾಗ ಅವರು ಗಾಂಜಾ ಸಾಗಾಟಕ್ಕೆ ಯತ್ನಿಸುತ್ತಿರುವ ಘಟನೆ ಬೆಳಕಿಗೆ ಬಂದಿದೆ.

    ಆರೋಪಿಗಳು ಈ ಹಿಂದೆ ಪಿಕಪ್ ವಾಹನದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ವೇಳೆ ಅಬಕಾರಿ ಇಲಾಖೆಯವರು ಬೆನ್ನಟ್ಟಿಕೊಂಡು ಬಂದಾಗ ನಂದಾವರ ಎಂಬಲ್ಲಿ ವಾಹನವನ್ನು ನಿಲ್ಲಿಸಿ ಗಾಂಜಾ ಸಮೇತ ಪರಾರಿಯಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಬಳಿಕ ಗಾಂಜಾವನ್ನು ಆರೋಪಿ ಅಬ್ದುಲ್ ಸಾದಿಕ್ ತನ್ನ ಸ್ನೇಹಿತ ಮಜೀದ್‌ನ ಮನೆಯಲ್ಲಿ ಇಟ್ಟಿದ್ದನು. ಅ.8ರಂದು ಗಾಂಜಾವನ್ನು ಮಾರಾಟ ಮಾಡಲು ಕೊಂಡು ಹೋಗುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

    ಆರೋಪಿಗಳನ್ನು ಬಂಧಿಸಿರುವ ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳನ್ನು ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ.

    Post Views: 150

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.