Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಆಝಾನ್ ವಿಚಾರಗಳಿಗೆ ನಿರ್ಬಂಧ ಕೋರಿ ಸಲ್ಲಿಸಿದ್ದ ಅರ್ಜಿ ಆಲಿಸಲು ಹೈಕೋರ್ಟ್ ನಕಾರ
    ಇತ್ತೀಚಿನ ಸುದ್ದಿ

    ಆಝಾನ್ ವಿಚಾರಗಳಿಗೆ ನಿರ್ಬಂಧ ಕೋರಿ ಸಲ್ಲಿಸಿದ್ದ ಅರ್ಜಿ ಆಲಿಸಲು ಹೈಕೋರ್ಟ್ ನಕಾರ

    August 23, 2022
    Share

    ಬೆಂಗಳೂರು: ಮಸೀದಿಗಳಲ್ಲಿ ಧ್ವನಿವರ್ಧಕಗಳ ಮೂಲಕ ಕೂಗಲಾಗುವ ಆಝಾನ್‌ನಲ್ಲಿ ಇರುವ ವಿಚಾರಗಳನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಲು ಹೈಕೋರ್ಟ್ ನಿರಾಕರಿಸಿದೆ.

    ನಗರದ ನಿವಾಸಿ ಆರ್.ಚಂದ್ರಶೇಖರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಪ್ರತಿ ದಿನ 5 ಬಾರಿ ಆಝಾನ್ ಕೂಗುವುದರಿಂದ ಬೇರೆ ಧರ್ಮಗಳ ಅನುಯಾಯಿಗಳ ಭಾವನೆಗೆ ಧಕ್ಕೆಯಾಗುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು.

     ಅರ್ಜಿದಾರರೇ ಆಝಾನ್ ಅಗತ್ಯ ಧಾರ್ಮಿಕ ಆಚರಣೆ ಎಂದು ತಿಳಿಸಿದ್ದಾರೆ. ಅಲ್ಲದೆ, ಆಝಾನ್‌ನಲ್ಲಿ ಇರುವ ವಿಚಾರಗಳು, ಬೇರೆ ಧರ್ಮಗಳ ಅನುಯಾಯಿಗಳ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎನ್ನುವ ಅರ್ಜಿದಾರರ ವಾದವನ್ನು ಮಾನ್ಯ ಮಾಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠವು ಅಭಿಪ್ರಾಯಪಟ್ಟಿದೆ.

    ಭಾರತದ ಸಂವಿಧಾನದ ಪ್ರಕಾರ 25 ಮತ್ತು 26ನೆ ವಿಧಿಗಳು ನಮ್ಮ ದೇಶದ ಸಂಸ್ಕೃತಿಯ ಸಹನಶೀಲತೆಯ ಮೂರ್ತರೂಪವಾಗಿವೆ. 25(1) ವಿಧಿಯು ಪ್ರತಿ ವ್ಯಕ್ತಿಯೂ ತಮ್ಮ ತಮ್ಮ ಧರ್ಮಗಳಲ್ಲಿ ಶ್ರದ್ಧೆ ಇರಿಸಲು, ಆಚರಿಸಲು ಮತ್ತು ಪ್ರಚಾರ ಮಾಡಲು ಅವಕಾಶ ಮಾಡಿಕೊಡುತ್ತದೆ ಎಂದು ಪೀಠವು ಹೇಳಿದೆ.

    Post Views: 196

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.