Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಸರ್ಕಾರಿ ಗೌರವಗಳೊಂದಿಗೆ ಎಎಸ್ಐ ವಿಶ್ವನಾಥ್ ಅಂತ್ಯ ಸಂಸ್ಕಾರ
    ಇತ್ತೀಚಿನ ಸುದ್ದಿ

    ಉಡುಪಿ: ಸರ್ಕಾರಿ ಗೌರವಗಳೊಂದಿಗೆ ಎಎಸ್ಐ ವಿಶ್ವನಾಥ್ ಅಂತ್ಯ ಸಂಸ್ಕಾರ

    November 2, 2025
    Share

    ಹೃದಯಾಘಾತದಿಂದ ನಿಧನರಾದ ಉಡುಪಿಯ ಮಲ್ಪೆ ಠಾಣಾ ಎಎಸ್ಐ ವಿಶ್ವನಾಥ್ ಅವರ ಅಂತ್ಯಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. 

    ಉಡುಪಿಯ ಆದರ್ಶ ಆಸ್ಪತ್ರೆಯಿಂದ ವಿಶ್ವನಾಥ್ ಅವರ ಪಾರ್ಥಿವ ಶರೀರವನ್ನು ಉಡುಪಿ ಅಜ್ಜರಕಾಡು ಸರ್ಕಾರಿ ಆಸ್ಪತ್ರೆಗೆ ಕೊಂಡೋಯ್ದು ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಬಳಿಕ ಸಂತೆಕಟ್ಟೆ ಕಲ್ಯಾಣಪುರ ಸಮೀಪದ ನಿಡಂಬಳ್ಳಿಯ ಅವರ ನಿವಾಸಕ್ಕೇ ಕೊಂಡೋಯ್ದು ಸಕಲ ವಿಧಿ ವಿಧಾನ ನೆರವೇರಿಸಲಾಯಿತು.

    ಉಡುಪಿ ಜಿಲ್ಲಾ ಎಸ್ಪಿ ಹರಿರಾಮ್ ಶಂಕರ್ ಅವರು ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು. ಪೊಲೀಸರು ಗಾಳಿಯಲ್ಲಿ ಮೂರು ಸುತ್ತಿನ ಗುಂಡು ಹಾರಿಸಿ ಅಂತಿಮ ಗೌರವ ಸಲ್ಲಿಸಿದರು. ಬಳಿಕ ಮಲ್ಪೆಯ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಈ ವೇಳೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು. ಮಲ್ಪೆ ಠಾಣಾ ವ್ಯಾಪ್ತಿಯಲ್ಲಿ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಎಸ್ಐ ವಿಶ್ವನಾಥ್ ಅವರು ಎದೆನೋವಿನಿಂದ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರು. 

    ಪೊಲೀಸ್ ಇಲಾಖೆಗೆ ಸೇರುವ ಮೊದಲು ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದು, ಅನೇಕ ಕ್ರಿಡಾಪಟುಗಳಿಗೆ ತರಬೇತಿ ಹಾಗೂ ಮಾರ್ಗದರ್ಶನ ನೀಡಿದ್ದರು. 1993ರಲ್ಲಿ ಪೊಲೀಸ್ ಇಲಾಖೆಗೆ ಸೇರಿದ ವಿಶ್ವನಾಥ್ ಅವರು ತನ್ನ ಸರಳ ನಡೆ ನುಡಿಯಿಂದ ಜನರಿಗೆ ಹತ್ತಿರವಾಗಿದ್ದರು. 

    ಕ್ರೀಡಾಪಟುವಾಗಿದ್ದ ವಿಶ್ವನಾಥ್ ಅವರು  ಮಲೇಷಿಯದಲ್ಲಿ ನಡೆದ ಮಾಸ್ಟರ್ ಅತ್ಲೆಟಿಕ್ಸ್ ನಲ್ಲಿ ಭಾಗವಹಿಸಿದ್ದರು. ಉಡುಪಿ ಸಂಚಾರಿ ಠಾಣೆಯಲ್ಲೂ ಕರ್ತವ್ಯ ನಿರ್ವಹಿಸಿದ್ದ ವಿಶ್ವನಾಥ್ ತನ್ನ ಕಾರ್ಯದಕ್ಷತೆಗೆ ಹೆಸರಾಗಿದ್ದರು. ಕುಂದಾಪುರ ಠಾಣೆಗೆ ವರ್ಗಾವಣೆಯಾಗಿದ್ದ ವಿಶ್ವನಾಥ್ ಅವರು ಇತ್ತೀಚಿಗಷ್ಟೇ ಮಲ್ಪೆ ಠಾಣೆಗೆ ವರ್ಗಾವಣೆಯಾಗಿ ಬಂದಿದ್ದರು. ಅವರ ನಿಧನಕ್ಕೆ ಉಡುಪಿಯ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

    Post Views: 77

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.