Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಕೀಲರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಪೊಲೀಸ್ ಅಧಿಕಾರಿಗೆ 2 ತಿಂಗಳು ಜೈಲು..! ಹೈಕೋರ್ಟ್ ಮಹತ್ವದ ತೀರ್ಪು
    ಇತ್ತೀಚಿನ ಸುದ್ದಿ

    ವಕೀಲರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಪೊಲೀಸ್ ಅಧಿಕಾರಿಗೆ 2 ತಿಂಗಳು ಜೈಲು..! ಹೈಕೋರ್ಟ್ ಮಹತ್ವದ ತೀರ್ಪು

    November 3, 2025
    Share

    ಕೇರಳ: ವಕೀಲರೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಪ್ರಕರಣದಲ್ಲಿ ಪೊಲೀಸ್‌ ಅಧಿಕಾರಿಗೆ ನ್ಯಾಯಾಂಗ ನಿಂದನೆ ಆರೋಪದಡಿ 2 ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

    ಕೇರಳ ಹೈಕೋರ್ಟ್‌ನ ನ್ಯಾಯಮೂರ್ತಿ ಶ್ರೀ ದೇವನ್ ರಾಮಚಂದ್ರನ್ ಅವರಿದ್ದ ನ್ಯಾಯಪೀಠ ಈ ಶಿಕ್ಷೆ ವಿಧಿಸಿದೆ. ಅಲತ್ತೂರು ಪೊಲೀಸ್ ಠಾಣೆಯ ಸಬ್ ಇನ್ಸಪೆಕ್ಟರ್ ವಿ.ಆರ್. ರಿನೀಶ್ ವಕೀಲರೊಬ್ಬರಿಗೆ ನಿಂದಿಸಿದ ಕುರಿತಂತೆ ದಾಖಲಾಗಿದ್ದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕೇರಳ ಹೈಕೋರ್ಟ್ ಈ ಮಹತ್ವದ ತೀರ್ಪು ನೀಡಿದೆ.

    “ಕಾನೂನು ವೃತ್ತಿಪರರನ್ನು ಅಗೌರವಿಸುವ ಪರಿಣಾಮಗಳ ಬಗ್ಗೆ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಈ ತೀರ್ಪು ಎಚ್ಚರಿಕೆಯಂತಿರಬೇಕು. ಈ ಪ್ರಕರಣ ಎಲ್ಲರಿಗೂ ಉದಾಹರಣೆಯಾಗಬೇಕು” ಎಂದು ಹೈಕೋರ್ಟ್ ನ್ಯಾಯಪೀಠ ತನ್ನ ತೀರ್ಪಿನಲ್ಲಿ ಹೇಳಿದೆ. ಇದೇ ವೇಳೆ, ಶಿಕ್ಷೆಯನ್ನು ಷರತ್ತಿನ ಮೇಲೆ ಅಮಾನತಿನಲ್ಲಿಟ್ಟಿರುವ ಹೈಕೋರ್ಟ್, ತಪ್ಪಿತಸ್ಥ ಪೊಲೀಸ್ ಅಧಿಕಾರಿ ಮುಂದಿನ ಒಂದು ವರ್ಷ ಇಂತಹ ಪ್ರಕರಣಗಳಲ್ಲಿ ಭಾಗಿಯಾಗಬಾರದು.

    ಭಾಗಿಯಾದಲ್ಲಿ ಶಿಕ್ಷೆ ಜಾರಿಯಾಗಲಿದೆ ಎಂದು ಸ್ಪಷ್ಟಪಡಿಸಿದೆ. ಆಲತ್ತೂರಿನಲ್ಲಿ ಎಸ್‌ಐ ರಿನೀಶ್ ಅವರು ವಕೀಲರ ವಿರುದ್ಧ ನಿಂದನೀಯ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಿ ಕೇರಳ ಹೈಕೋರ್ಟ್ ವಕೀಲರ ಸಂಘ ಅರ್ಜಿ ಸಲ್ಲಿಸಿತ್ತು. ಈ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿ ನ್ಯಾಯಾಲಯದ ಮುಂದೆ ಬೇಷರತ್ ಕ್ಷಮೆ ಯಾಚಿಸಿದ್ದರು.

    ಆದರೆ ಕ್ಷಮೆಯಾಚನೆ ಪ್ರಮಾಣಪತ್ರದಲ್ಲಿನ ಅಂಶಗಳು ಸೂಕ್ತವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿ ಬೇಷರತ್ ಕ್ಷಮೆ ಯಾಚಿಸುವುದಾಗಿ ಎರಡನೇ ಅಫಿಡವಿಟ್ ಸಲ್ಲಿಸಿದ್ದರು. ಅದು ಕೂಡ ಸೂಕ್ತ ರೀತಿಯಲ್ಲಿರದ ಕಾರಣ ಮತ್ತು ನ್ಯಾಯಾಲಯಕ್ಕೆ ತೃಪ್ತಿಯಾಗದ ಹಿನ್ನೆಲೆಯಲ್ಲಿ 2 ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಜತೆಗೆ ಮುಂದಿನ ಒಂದು ವರ್ಷ ಇಂತಹ ಕೃತ್ಯಗಳು ಮರುಕಳಿಸದಂತೆ ಜವಾಬ್ದಾರಿಯುತವಾಗಿ ನಡೆದುಕೊಂಡಲ್ಲಿ ಮಾತ್ರ ಶಿಕ್ಷೆಯಿಂದ ಪಾರಾಗಬಹುದಾಗಿದೆ ಎಂದು ಸ್ಪಷ್ಟಪಡಿಸಿದೆ.

    Post Views: 188

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.