Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿಯ ಬಂಧನ

    November 10, 2025
    Share

    ಬೆಳ್ತಂಗಡಿ: ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸುತ್ತಿದ್ದ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯೋರ್ವನನ್ನು ಪೂಂಜಾಲಕಟ್ಟೆ ಠಾಣಾ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.

    ಬಂಧಿತ ಆರೋಪಿಯನ್ನು ಕೇರಳ ಮೂಲದ ತಲಪಾಡಿ ನಿವಾಸಿ ಕಿರಣ್ ಎಂದು ಗುರುತಿಸಲಾಗಿದೆ.

    ಬೆಳ್ತಂಗಡಿ ಮಾಲಾಡಿ ಗ್ರಾಮದ ನಿವಾಸಿ ಪ್ರಕಾಶ್‌ ಶೆಟ್ಟಿ ಎಂಬವರ ದೂರಿನಂತೆ ಅವರ ಮನೆಯ ಸಮೀಪ ಶ್ರೀಮತಿ ಪ್ರೇಮಾ ಶೆಟ್ಟಿ ಎಂಬವರ ಮನೆಯಿದ್ದು, ಪ್ರೇಮಾ ಶೆಟ್ಟಿರವರು ಕೆಲ ಸಮಯದಿಂದ ವಿದೇಶದಲ್ಲಿದ್ದು, ಮನೆಯಲ್ಲಿ ಯಾರೂ ಇಲ್ಲದ ಕಾರಣ ಮನೆಗೆ ಸಿ.ಸಿ ಟಿ.ವಿ ಅಳವಡಿಸಿರುತ್ತಾರೆ. ನ.9ರಂದು ಬೆಳಿಗ್ಗೆ, ಪ್ರೇಮಾರವರ ಮಗಳು ಪ್ರಕಾಶ್‌ ಶೆಟ್ಟಿರವರಿಗೆ ಕರೆ ಮಾಡಿ ಅವರ ತಾಯಿಯ ಮನೆಯಲ್ಲಿ ಯಾರೋ ವ್ಯಕ್ತಿ ಕಳ್ಳತನಕ್ಕೆ ಬಂದಿರುವಂತೆ ಸಿ.ಸಿ ಟಿ.ವಿಯಲ್ಲಿ ಕಾಣುತ್ತಿರುವುದಾಗಿ ತಿಳಿಸಿರುತ್ತಾರೆ.

    ತಕ್ಷಣ ಪ್ರೇಮರವರ ಮನೆಯ ಬಳಿ ತೆರಳಿ ನೋಡಿದಾಗ ಪ್ರೇಮಾರವರ ಮನೆಯ ಮೇಲ್ಚಾವಣಿಯಲ್ಲಿ ಒಬ್ಬ ಅಪರಿಚಿತ ವ್ಯಕ್ತಿಯು ಕೈಯಲ್ಲಿ ಕಬ್ಬಿಣದ ರಾಡ್ ಹಿಡಿದು ನಿಂತುಕೊಂಡಿದ್ದು, ಪ್ರಕಾಶ್‌ ಶೆಟ್ಟಿಯವರನ್ನು ನೋಡಿ ಕೆಳಗೆ ಹಾರಿ ಓಡಿ ತಪ್ಪಿಸಲು ಪ್ರಯತ್ನಿಸಿರುತ್ತಾನೆ. ಈ ವೇಳೆ ಆತನನ್ನು ಹಿಡಿಯಲು ಪ್ರಯತ್ನಿಸಿದಾಗ, ಅಪರಿಚಿತ ವ್ಯಕ್ತಿಯು ಆತನ ಕೈಯಲ್ಲಿದ್ದ ರಾಡಿನಿಂದ ಹಲ್ಲೆ ನಡೆಸಿರುತ್ತಾನೆ.

    ಬಳಿಕ ಸ್ಥಳೀಯ ನಿವಾಸಿಗಳ ಸಹಾಯದಿಂದ ಅಪರಿಚಿತ ವ್ಯಕ್ತಿಯನ್ನು ಹಿಡಿಯಲಾಗಿರುತ್ತದೆ. ಆತನ ಬಗ್ಗೆ ವಿಚಾರಿಸಿದ್ದು ಆತನು ಕೇರಳ ಮೂಲದ, ತಲಪಾಡಿ ನಿವಾಸಿ ಕಿರಣ್ ಎಂಬುದಾಗಿ ತಿಳಿಸಿದ್ದು, ನಂತರ ಆತನನ್ನು ಪೂಂಜಾಲಕಟ್ಟೆ ಠಾಣಾ ಪೊಲೀಸರ ವಶಕ್ಕೆ ಒಪ್ಪಿಸಲಾಗಿರುತ್ತದೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅ.ಕ್ರ: 73/2025, ಕಲಂ: 331(1) 62 118(1) 307 BNS ACT ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

    ಆರೋಪಿತನ ಪ್ರಾಥಮಿಕ ವಿಚಾರಣೆಯ ವೇಳೆ ಆರೋಪಿತನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ, ಮಂಗಳೂರು ನಗರ ವ್ಯಾಪ್ತಿಯಲ್ಲಿ ಹಾಗೂ ಕೇರಳ ರಾಜ್ಯದಲ್ಲಿ ಸೇರಿದಂತೆ, ಒಟ್ಟು 13 ಪ್ರಕರಣಗಳು ದಾಖಲಾಗಿರುವುದು ತಿಳಿದುಬಂದಿದ್ದು, ತನಿಖೆ ಮುಂದುವರಿದಿರುತ್ತದೆ.

    Post Views: 108

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.