Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವ್ಯಕ್ತಿಗೆ 20 ಲಕ್ಷ ರೂ.ಪಂಗನಾಮ- ಮೈಸೂರಿನ ಯುವತಿ ಅರೆಸ್ಟ್!
    ಇತ್ತೀಚಿನ ಸುದ್ದಿ

    ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವ್ಯಕ್ತಿಗೆ 20 ಲಕ್ಷ ರೂ.ಪಂಗನಾಮ- ಮೈಸೂರಿನ ಯುವತಿ ಅರೆಸ್ಟ್!

    November 13, 2025
    Share

    ಮೈಸೂರು: ಮುಂಬೈ ಪೊಲೀಸ್ ಎಂದು ಹೇಳಿಕೊಂಡು ಡಿಜಿಟಲ್ ಅರೆಸ್ಟ್ ವಾತಾವರಣ ಸೃಷ್ಟಿಸಿ ಕೇರಳದ ವ್ಯಕ್ತಿಯೊಬ್ಬರಿಂದ 20.50 ಲಕ್ಷ ರೂ. ಸುಲಿಗೆ ಮಾಡಿದ ಆರೋಪದಲ್ಲಿ ಮೈಸೂರಿನ 21 ವರ್ಷದ ಯುವತಿಯನ್ನು ಕೇರಳದ ಅಲಪ್ಪುಜ ಸೈಬರ್ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

    ಮೈಸೂರಿನ ಅಶೋಕಪುರಂ ನಿವಾಸಿ ಚಂದ್ರಿಕಾ (21) ಬಂಧಿತ ಯುವತಿ. ಅಶೋಕಪುರಂ ಠಾಣೆ ಇನ್ಸ್‌ಪೆಕ್ಟರ್ ಸಿ.ರೋಹಿತ್ ಅವರು ‘ಈಟಿವಿ ಭಾರತ’ಕ್ಕೆ ಪ್ರತಿಕ್ರಿಯೆ ನೀಡಿ, ಅಲಪ್ಪುಜ ಸೈಬರ್ ಅಪರಾಧ ವಿಭಾಗದ ಪೊಲೀಸರು ಆರೋಪಿಯ ನಿವಾಸ ಪತ್ತೆ ಹಚ್ಚಲು ಮತ್ತು ಬಂಧಿಸಲು ನಮ್ಮ ಸಹಕಾರ ಪಡೆದಿದ್ದಾರೆ ಎಂದು ತಿಳಿಸಿದರು.

    ಉದ್ಯೋಗಿಯನ್ನು ಸಂಪರ್ಕಿಸಿ ಮುಂಬೈ ಪೊಲೀಸ್ ಪ್ರಧಾನ ಕಚೇರಿಯ ನೆಹಶರ್ಮ ಎಂದು ಪರಿಚಯಿಸಿಕೊಂಡಿದ್ದರು. ಬಳಿಕ ನಿಮ್ಮ ಹೆಸರಿನಲ್ಲಿ ಹಲವು ನಕಲಿ ಬ್ಯಾಂಕ್ ಖಾತೆಗಳು ಹಾಗೂ ಮೊಬೈಲ್ ಸಂಖ್ಯೆಗಳನ್ನು ತೆರೆಯಲಾಗಿದೆ. ಅವುಗಳನ್ನು ಕೋಟ್ಯಂತರ ರೂ. ಅಪರಾಧಗಳಿಗೆ ಬಳಸಲಾಗುತ್ತಿದೆ. ನೀವು 25 ಲಕ್ಷ ರೂ. ಕಮಿಷನ್ ಪಡೆದಿದ್ದೀರಿ ಎಂದು ದೂರುದಾರನಿಗೆ ಹೆದರಿಸಿದ್ದರು. ಅಲ್ಲದೆ ನಾವು ಹೇಳಿದಂತೆ ಕೇಳದಿದ್ದರೆ ಬಂಧಿಸುವುದಾಗಿ ಬೆದರಿಕೆ ಹಾಕಿ ವಂಚಿಸಿದ್ದಾರೆ.

    ಅಲಪ್ಪುಜ ಸೈಬರ್ ಪೊಲೀಸ್ ಅಪರಾಧ ವಿಭಾಗ ನೀಡಿದ ಹಲವು ಸಮನ್ಸ್​ಗಳನ್ನು ಯುವತಿ ನಿರ್ಲಕ್ಷ್ಯಿಸಿ ತನಿಖಾಧಿಕಾರಿಗಳ ಮುಂದೆ ಹಾಜರಾಗಿರಲಿಲ್ಲ. ಹೀಗಾಗಿ ಕೇರಳ ಪೊಲೀಸರು ಬಂದಿದ್ದರು. ಅಲಪ್ಪುಜ ಸಮೀಪದ ಖಾಸಗಿ ಕಂಪೆನಿ ಉದ್ಯೋಗಿಗೆ ಕರೆ ಮಾಡಿ, ಮುಂಬೈ ಪೊಲೀಸ್ ಅಧಿಕಾರಿಗಳಂತೆ ನಟಿಸಿ ವಂಚಿಸಲಾಗಿದೆ ಎಂದು ಅಶೋಕಪುರಂ ಪೊಲೀಸರು ತಿಳಿಸಿದ್ದಾರೆ.

    Post Views: 90

    Related Posts

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.