Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್ : ಗಡಿಪಾರು ಆದೇಶ ರದ್ದುಗೊಳಿಸಿದ ಹೈಕೋರ್ಟ್
    ಇತ್ತೀಚಿನ ಸುದ್ದಿ

    ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್ : ಗಡಿಪಾರು ಆದೇಶ ರದ್ದುಗೊಳಿಸಿದ ಹೈಕೋರ್ಟ್

    November 17, 2025
    Share

    ಪುತ್ತೂರು ಉಪವಿಭಾಗಾಧಿಕಾರಿ ಹೊರಡಿಸಿದ್ದ ಗಡೀಪಾರು ಆದೇಶಕ್ಕೆ ದೊಡ್ಡ ತಿರುವು ದೊರೆತಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಾದಾತ್ಮಕ ವ್ಯಕ್ತಿ ಮಹೇಶ್ ಶೆಟ್ಟಿ ತಿಮರೋಡಿಗೆ ಗಡಿಪಾರು ಮಾಡಿದ್ದ ಆಡಳಿತದ ಸೆಪ್ಟೆಂಬರ್ 18ರ ಆದೇಶವನ್ನು ಕರ್ನಾಟಕ ಹೈಕೋರ್ಟ್ ಸೋಮವಾರ (ನವೆಂಬರ್ 17) ರದ್ದುಪಡಿಸಿದೆ.

    ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು, ಉಪವಿಭಾಗಾಧಿಕಾರಿಗಳ ಆದೇಶದಲ್ಲಿ ಕಾನೂನುಬದ್ಧ ಕಾರಣಗಳಿರಬೇಕೆಂಬ ಅವಶ್ಯಕತೆ ಪೂರೈಸಲಿಲ್ಲ ಎಂದು ಸ್ಪಷ್ಟಪಡಿಸಿದೆ. ಕೋರ್ಟ್ ಗಮನಿಸಿದಂತೆ, ನಿರ್ದಿಷ್ಟ ಕಾರಣಗಳು, ಸಂಬಂಧಿತ ಕಾನೂನು ಕಲಂಗಳು ಮತ್ತು ಪರ್ಯಾಯ ಆಧಾರಗಳ ಜತೆಗೇ ಗಡಿಪಾರು ಆದೇಶ ಹೊರಡಿಸುವುದು ಕಡ್ಡಾಯ. ಆದರೆ ಸೆಪ್ಟೆಂಬರ್ 18ರ ಆದೇಶದಲ್ಲಿ ಈ ಅಂಶಗಳು ಸಮರ್ಪಕವಾಗಿ ತೋರಿಸಲ್ಪಡಲಿಲ್ಲ ಎಂದು ಸೂಚಿಸಿದೆ.

    ಈ ಹಿನ್ನೆಲೆಯಲ್ಲಿ, ಪುತ್ತೂರು ಉಪವಿಭಾಗಾಧಿಕಾರಿಗಳಿಗೆ ಹೈಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದೆ: ಹೊಸದಾಗಿ ವಿಚಾರಣೆ ನಡೆಸಬೇಕು ಹಾಗೂ ಸೂಕ್ತವಾದ ಕಾರಣಗಳು ಮತ್ತು ಸಂಬಂಧಿತ ಸೆಕ್ಷನ್‌ಗಳನ್ನು ಬಳಸಿ ಮತ್ತು 15 ದಿನಗಳೊಳಗೆ ಹೊಸ ಆದೇಶ ಹೊರಡಿಸುವುದು ಕಡ್ಡಾಯ ಎಂದು ತಿಳಿಸಿದೆ

    ಮಹೇಶ್ ಶೆಟ್ಟಿ ತಿಮರೋಡಿ ಮೇಲಿನ ಆರೋಪಗಳನ್ನು ಗಮನಿಸಿದರೆ, ಅವರ ವಿರುದ್ಧ ಸುಮಾರು 32 ವಿವಿಧ ಪ್ರಕರಣಗಳು ದಾಖಲಾಗಿವೆ. ಇದೇ ಕಾರಣಕ್ಕೆ, ಪುತ್ತೂರು ಉಪವಿಭಾಗಾಧಿಕಾರಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ‌ ಕನ್ನಡ ಜಿಲ್ಲೆಯಿಂದ ರಾಯಚೂರು‌ ಜಿಲ್ಲೆಯ ಮಾನ್ವಿ ತಾಲ್ಲೂಕಿಗೆ ಒಂದು ವರ್ಷದ ಅವಧಿಗೆ ಅವರು ಸೆಪ್ಟೆಂಬರ್ 18ರಂದು ಗಡೀಪಾರು ಆದೇಶ ಹೊರಡಿಸಿದ್ದರು. ಆದರೆ ಈ ಆದೇಶ ‘ಸ್ವಾಭಾವಿಕ ನ್ಯಾಯ’ ನಿಯಮಗಳನ್ನು ಉಲ್ಲಂಘಿಸಿದೆ ಎಂಬ ಆಧಾರದ ಮೇಲೆ ತಿಮರೋಡಿ ಹೈಕೋರ್ಟ್ ಮೆಟ್ಟಿಲೇರಿದ್ದರು.

    ಇದೇ ಪ್ರಕರಣದಲ್ಲಿ ಹೈಕೋರ್ಟ್ ಸೂಕ್ತ ಕ್ರಮ ಕೈಗೊಂಡಿದ್ದು. ಗಡಿಪಾರು ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿದೆ. ಇದೀಗ ಮುಂದಿನ 15 ದಿನಗಳಲ್ಲಿ ಪ್ರಕರಣಕ್ಕೆ ಹೊಸ ತಿರುವು ಸಿಗುವ ಸಾಧ್ಯತೆ ಇದೆ.

    Post Views: 111

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.