Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಆರೋಪಿಯ ಹಣವನ್ನೇ ಕದ್ದುಕೊಂಡು ಹೋದ ಹೆಡ್‌ಕಾನ್‌ಸ್ಟೆಬಲ್‌..!!
    ಇತ್ತೀಚಿನ ಸುದ್ದಿ

    ಆರೋಪಿಯ ಹಣವನ್ನೇ ಕದ್ದುಕೊಂಡು ಹೋದ ಹೆಡ್‌ಕಾನ್‌ಸ್ಟೆಬಲ್‌..!!

    December 4, 2025
    Share

    ಬೆಂಗಳೂರು: ಪೊಲೀಸರೇ ಅಪರಾಧ ಕೃತ್ಯಗಳನ್ನು ಎಸಗಿ ಇಲಾಖೆಗೆ ಮಸಿ ಬಳಿಯುತ್ತಿರುವ ಕೃತ್ಯಗಳು ಹೆಚ್ಚುತ್ತಿವೆ. ಈಗ ಮತ್ತೊಬ್ಬ ಪೊಲೀಸ್ ಸಿಬ್ಬಂದಿಯ ಮೇಲೆ ಕಳ್ಳತನ ಆರೋಪ ಬಂದಿದೆ. ನಾಚೆಕೆಗೇಡಿನ ವಿಚಾರವೆಂದರೆ ಪೊಲೀಸ್ ಆಯುಕ್ತರ ಕಚೇರಿಯ ಆವರಣದಲ್ಲಿಯೇ ಈ ಕಳ್ಳತನ ನಡೆದಿದೆ.

    ಸೈಬರ್ ಪ್ರಕರಣದ ಆರೋಪಿಯನ್ನು ವಿಚಾರಣೆಗೆ ಕರೆತಂದಾಗ ಆತನ ಕಾರಿನಲ್ಲಿದ್ದ 11 ಲಕ್ಷ ರೂ.ತುಂಬಿದ್ದ ಬ್ಯಾಗನ್ನು ಹೆಡ್‌ಕಾನ್‌ಸ್ಟೆಬಲ್‌ ಜಬೀವುಲ್ಲಾ ಕದ್ದಿರುವ ಆರೋಪ ಕೇಳಿಬಂದಿದೆ.

    ಹಣ ಕಳ್ಳತನ ಮಾಡಿ ಏನು ಗೊತ್ತೇ ಇಲ್ಲ ಎನ್ನುವಂತೆ ಜಬೀವುಲ್ಲಾ ಕೆಲಸ ಮಾಡುತ್ತಿದ್ದನಂತೆ. ಆರೋಪಿಯನ್ನು ಬಂಧಿಸಿದ್ದ ಇನ್‌ಸ್ಪೆಕ್ಟರ್ ಉಮೇಶ್ ಆತನನ್ನು ಜೈಲಿಗಟ್ಟಿತ್ತು. ಬಳಿಕ ಜಾಮೀನು ಪಡೆದು ಹೊರಬಂದ ಆರೋಪಿ ತನ್ನ ಕಾರಿನಲ್ಲಿ ಇದ್ದ ಹಣದ ಬ್ಯಾಗ್ ನಾಪತ್ತೆ ಆಗಿರುವುದನ್ನ ನೋಡಿ ಈ ಬಗ್ಗೆ ಸೈಬರ್ ಪೊಲೀಸರ ಬಳಿ ಪ್ರಶ್ನೆ ಮಾಡಿದ್ದಾನೆ. ಆರೋಪಿಯ ಪ್ರಶ್ನೆಗೆ ಗಾಬರಿಗೊಂಡು ಪರಿಶೀಲನೆ ಮಾಡಿದಾಗ ಕಾರಿನಲ್ಲಿದ್ದ ಹಣವನ್ನ ಜಬೀವುಲ್ಲಾ ತೆಗೆದುಕೊಂಡು ಹೋಗಿರುವುದು ಗೊತ್ತಾಗಿದೆ.

    ಸಿಸಿಟಿವಿ ಕ್ಯಾಮೆರಾದಲ್ಲಿ ಜಬೀವುಲ್ಲಾ ಹಣದ ಬ್ಯಾಗ್ ಕಳ್ಳತನ ಮಾಡಿರುವುದು ಪತ್ತೆಯಾಗಿದೆ. ಸುಮಾರು 11 ಲಕ್ಷ ಹಣ ಕಳ್ಳತನ ಮಾಡಿ ಜಬಿವುಲ್ಲಾ ಆರಾಮಾಗಿ ಓಡಾಡಿಕೊಂಡಿದ್ದ. ಘಟನೆಯ ಬಗ್ಗೆ ಸಿಸಿಬಿ ಡಿಸಿಪಿ ರಾಜಾ ಇಮಾಮ್ ಖಾಸಿಂಗೆ ಹಣ ಕಳೆದುಕೊಂಡ ವ್ಯಕ್ತಿ ದೂರು ನೀಡಿದ್ದ. ಜಬೀವುಲ್ಲಾ ಮನೆ ಸರ್ಚ್ ಮಾಡಲು ತೆರಳಿದಾಗ ಮನೆಯ ಬಳಿ ಜಬೀವುಲ್ಲಾ ಮನೆಯ ಒಳಗೆ ಸೈಬರ್ ಪೊಲೀಸರನ್ನು ಬಿಡದೆ ಗಲಾಟೆ ಮಾಡಿ ಹೈಡ್ರಾಮಾ ಸೃಷ್ಟಿಸಿದ್ದಾನೆ. ಕೊನೆಗೆ ಜಬೀವುಲ್ಲಾನನ್ನು ತಡೆದು ಮನೆ ಸರ್ಚ್‌ ಮಾಡಿದಾಗ ತನ್ನ ಕೋಣೆಯ ಬೆಡ್ ಕೆಳಗೆ ಲಕ್ಷ ಲಕ್ಷ‌ ಹಣ ಜೋಡಿಸಿಟ್ಟಿದ್ದು ಬಯಲಾಗಿದೆ. ಕದ್ದ ಹಣದಿಂದಲೇ ಪತ್ನಿಗೆ ಒಡೆವೆಗಳನ್ನೂ ಕೊಡಿಸಿದ್ದ. ಸದ್ಯ ಜಬಿವುಲ್ಲಾ 2 ಲಕ್ಷ ರೂ. ಹಣ ವಾಪಸ್ ಕೊಟ್ಟಿದ್ದಾನೆ. ಉಳಿದ ಹಣ ವಾಪಸ್‌ ಕೊಡುವಂತೆ ಹಿರಿಯ ಅಧಿಕಾರಿಗಳು ತಾಕೀತು ಮಾಡಿದ್ದಾರೆ. ದೂರು ಪಡೆದಿರುವ ಪೊಲೀಸರಿಂದ‌ ಪ್ರಕರಣ ಮುಚ್ಚಿ ಹಾಕಲು ಯತ್ನ ನಡೆದಿದೆ ಎಂಬ ಆರೋಪ ಸಹ ಕೇಳಿ ಬಂದಿದೆ.

    Post Views: 220

    Related Posts

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.