Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯದಲ್ಲಿ ಸಾರ್ವಜನಿಕರ ವಾಹನ ತಪಾಸಣೆ ವೇಳೆ ದುರ್ನಡತೆ ತೋರುವ ಪೊಲೀಸರಿಗೆ ಖಡಕ್ ಸೂಚನೆ.!
    ಇತ್ತೀಚಿನ ಸುದ್ದಿ

    ರಾಜ್ಯದಲ್ಲಿ ಸಾರ್ವಜನಿಕರ ವಾಹನ ತಪಾಸಣೆ ವೇಳೆ ದುರ್ನಡತೆ ತೋರುವ ಪೊಲೀಸರಿಗೆ ಖಡಕ್ ಸೂಚನೆ.!

    December 11, 2025
    Share

     ವಾಹನ ತಪಾಸಣಾ/ಪರೀಶೀಲನೆ ಸಮಯದಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ವಾಹನ ಚಾಲಕರಿಗೆ ಕಿರುಕುಳ ಹಲ್ಲೆ. ಅವಾಚ್ಯ ಶಬ್ದಗಳ ಬಳಕೆ ಮಾಡಿ ದುರ್ನಡತೆ ತೋರುವುದನ್ನು ಕಡಿವಾಣ ಹಾಕಲು ಸೂಕ್ತ ಸುತ್ತೋಲೆ ಹೊರಡಿಸಲಾಗಿದೆ.

    ಈ ಮೇಲ್ಕಂಡ ವಿಷಯಕ್ಕೆ ಸಂಬಂದಿಸಿದಂತೆ ರಾಜ್ಯ ಪೊಲೀಸ್ ಇಲಾಖೆಯು ಶಿಸ್ತಿನ ಇಲಾಖೆಯಾಗಿದ್ದು ಕೆಲವು ಅಧಿಕಾರಿ ಸಿಬ್ಬಂದಿಗಳು ತೋರುತ್ತಿರುವ ದುರ್ನಡತೆ, ಅಧಿಕಾರ ದುರ್ಬಳಕೆಯಿಂದ ಸಂಪೂರ್ಣ ಪೊಲೀಸ್ ಇಲಾಖೆಯ ಗೌರವಕ್ಕೆ ಧಕ್ಕೆ ಉಂಟಾಗುತ್ತಿದ್ದು ಕಾಲಕಾಲಕ್ಕೆ ಇಲಾಖೆಯಿಂದ ಹಲವಾರು ಸುತ್ತೋಲೆ ಜ್ಞಾಪನಗಳನ್ನು ಹೊರಡಿಸಿದ್ದರು ಕೆಲವು ಪೊಲೀಸ್ ಸಿಬ್ಬಂದಿಗಳು ವಾಹನ ತಪಾಸಣಾ ಸಂದರ್ಭದಲ್ಲಿ ವಾಹನ ಚಾಲಕರ ಮೇಲೆ ದೌರ್ಜನ್ಯ, ಹಲ್ಲೆ, ಕಿರುಕುಳ, ಅವಹೇಳನಕಾರಿ ಅವಾಚ್ಯ ಶಬ್ದಗಳ ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ವಾಗ್ವಾದಕ್ಕಿಳಿದು ಅವಮಾನ ಮಾಡುವಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಮಾಧ್ಯಮಗಳಲ್ಲಿ ವರದಿಯಾಗುತ್ತಿರುತ್ತವೆ.

    ಕೆಲವು ದಿನಗಳ ಹಿಂದೆ ಮಂಡ್ಯ ಜಿಲ್ಲೆಯಲ್ಲಿ ಸಂಚಾರಿ ಪೊಲೀಸರು ವಾಹನ ತಪಾಸಣಾ ಸಂದರ್ಭದಲ್ಲಿ ಮಗು ಮೃತಪಟ್ಟ ಪ್ರಕರಣ ಹಾಗೂ ವಿಜಯನಗರ ಜಿಲ್ಲೆ ಕೂಡ್ಲಿಗಿಯಲ್ಲಿ ಸಾರಿಗೆ ಬಸ್ ಚಾಲಕನ ಮೇಲೆ ಪೊಲೀಸ್ ಪೇದೆಯಿಂದ ನಡೆದ ಹಲ್ಲೆಯು ರಾಜ್ಯಾದ್ಯಂತ ವೈರಲ್ ಆದ ಘಟನೆಯನ್ನು ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ವಿಚಾರಣೆ ಕೈಗೊಂಡಿರುತ್ತಾದರೂ ವಾರದ ಹಿಂದೆ ಚಿತ್ರದುರ್ಗದಲ್ಲಿ ವಾಹನ ಪರೀಶೀಲನೆ ವೇಳೆಯಲ್ಲಿ ಆಟೋ ಚಾಲಕನಿಗೆ ಪೊಲೀಸ್ ಸಿಬ್ಬಂದಿ ಕಿರುಕುಳ ನೀಡಿದ್ದರಿಂದ ಮನನೊಂದ ಚಾಲಕ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ, ಸಂಡೂರಿನಲ್ಲಿ ಲಾರಿ ಚಾಲಕನ ಮೇಲೆ ಪೊಲೀಸ್ ಸಿಬ್ಬಂದಿಯೊಬ್ಬ ದೌರ್ಜನ್ಯವೆಸಗಿದ ಘಟನೆಗಳು ಸಾಮಾಜಿಕ ಜಾಲತಾಣದಲ್ಲಿ ರಾಜ್ಯಮಟ್ಟದಲ್ಲಿ ವೈರಲ್ ಆಗಿರುತ್ತವೆ, ಇಂತಹ ಪ್ರಕರಣಗಳು ದಿನನಿತ್ಯ ಮರುಕಳಿಸುತ್ತಿರುವುದರಿಂದ ರಾಜ್ಯ ಪೊಲೀಸ್ ಇಲಾಖೆಗೆ ಅಪಕೀರ್ತಿತರುತ್ತಿರುವುದಲ್ಲದೇ ಜನವಿರೋಧಿ ಇಲಾಖೆ ಎನ್ನುವಂತೆ ಸಾರ್ವಜನಿಕ ವಲಯದಲ್ಲಿ ಬಿಂಬಿತವಾಗುತ್ತಿರುತ್ತದಲ್ಲದೆ ಶಿಸ್ತನ್ನು ಕಾಪಾಡಿಕೊಂಡು ಪ್ರಾಮಾಣಿಕತೆ, ದಕ್ಷತೆಯಿಂದ ಕಾರ್ಯನಿರ್ವಹಿಸುವ ಸಿಬ್ಬಂದಿಗಳನ್ನು ಸಹ ಅಗೌರವದಿಂದ ನೋಡುವಂತಾಗುತ್ತಿರುತ್ತದೆ,

    ಆದ್ದರಿಂದ ವಾಹನ ತಪಾಸಣೆ/ಪರೀಶೀಲನೆ ಸಂದರ್ಭದಲ್ಲಿ ಸಾರ್ವಜನಿಕ ಜೀವನದಲ್ಲಿ ವಾಹನ ಚಾಲನೆ ಮಾಡುವ ಎಲ್ಲಾ ರೀತಿಯ ವಾಹನಗಳ ಚಾಲಕರೊಂದಿಗೆ ಗೌರವದಿಂದ ವರ್ತಿಸುವಂತೆ ಹಾಗೂ ಮೇಲ್ಕಾಣಿಸಿದ ದುರ್ನಡತೆಗಳು ಮರುಕಳಿಸದಂತೆ ಸಿಬ್ಬಂದಿಗಳಿಗೆ ಸೂಕ್ತ ಸುತ್ತೋಲೆ/ನಿರ್ದೇಶನ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಿದೆ.

    Post Views: 245

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.