Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಗೂಡ್ಸ್ ವಾಹನದಲ್ಲಿ ಕಾರ್ಮಿಕರ ಸಾಗಾಟ : 10ಸಾವಿರ ರೂ. ದಂಡ
    ಇತ್ತೀಚಿನ ಸುದ್ದಿ

    ಕಾರ್ಕಳ: ಗೂಡ್ಸ್ ವಾಹನದಲ್ಲಿ ಕಾರ್ಮಿಕರ ಸಾಗಾಟ : 10ಸಾವಿರ ರೂ. ದಂಡ

    December 16, 2025
    Share

    ಕಾರ್ಕಳ: ಪೊಲೀಸರ ಎಚ್ಚರಿಕೆಯನ್ನು ಲೆಕ್ಕಿಸದೆ ಗೂಡ್ಸ್ ವಾಹನದಲ್ಲಿ ಸೆಂಟ್ರಿಂಗ್ ಮೆಷೀನ್‌ಗಳೊಂದಿಗೆ ಕೂಲಿ ಕಾರ್ಮಿಕರನ್ನು ಸಾಗಿಸುವ ಕೆಲಸ ನಿರಂತರ ಹಾಗೂ ನಿರಾತoಕವಾಗಿ ನಡೆಯುತ್ತಿದ್ದು, ಪೊಲೀಸರು ವಾಹನವನ್ನು ಬೆನ್ನಟ್ಟಿ ಹಿಡಿದು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಾರ್ಕಳ ನ್ಯಾಯಾಲಯವು ವಾಹನದ ಮಾಲೀಕ ನಾಗಪ್ಪ ಎಂಬವರಿಗೆ 10 ಸಾವಿರ ರೂ. ದಂಡ ವಿದಿಸಿದೆ.

    ಕಾರ್ಕಳ ಪರಿಸರದಲ್ಲಿ ಮಾತ್ರವಲ್ಲದೆ, ಜಿಲ್ಲೆಯದ್ಯಂತ ಬೆಳಿಗ್ಗೆ ಹಾಗೂ ಸಾಯಂಕಾಲ ಕೂಲಿ ಕಾರ್ಮಿಕರನ್ನು ಸಿಮೆಂಟ್ ಕಾಂಕ್ರೀಟ್ ಮೆಷಿನ್‌ನೊಟ್ಟಿಗೆ ತುಂಬಿಕೊಂಡು ಹೋಗುತ್ತಿರುವುದು ಸರ್ವೇ ಸಾಮಾನ್ಯವಾಗಿದೆ. ಪೊಲೀಸರು ಈ ಬಗ್ಗೆ ಹಲವಾರು ಬಾರಿ ಖಡಕ್ ಎಚ್ಚರಿಕೆ ನೀಡಿದ್ದರೂ ಕ್ಯಾರೇ ಎನ್ನದ ಕಾಂಟಾಕ್ಟ್‌ದಾರರು ಮತ್ತದೇ ಚಾಳಿಯನ್ನು ಮುಂದುವರಿಸುತಿದ್ದು, ವಾಹನದಲ್ಲಿ ಇಷ್ಟಬಂದಂತೆ ಕಾರ್ಮಿಕರನ್ನು ತುಂಬಿಸಿಕೊಂಡು, ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ವಾಹನ ಚಲಾಯಿಸುವುದಲ್ಲದೇ, ದಾರಿಯಲ್ಲಿ ಓಡಾಡುವ ಇತರ ವಾಹನಗಳಿಗೂ ತೊಂದರೆಯಾಗುವ ಬಗ್ಗೆ ಹಲವಾರು ದೂರುಗಳು ಕೇಳಿ ಬರುತ್ತಿತ್ತು. ಈ ಬಗ್ಗೆ ಕಾರ್ಯಪ್ರವೃತ್ತರಾದ ಕಾರ್ಕಳ ನಗರ ಪೊಲೀಸರು ವಾಹನವನ್ನು ಬೆನ್ನಟ್ಟಿ ಕಾರ್ಕಳ ಪುರಸಭಾ ವ್ಯಾಪ್ತಿಯ ಶಿವತಿಕೆರೆ ಎಂಬಲ್ಲಿ ವಾಹನವನ್ನು ತಡೆದು ನಿಲ್ಲಿಸಿ ಕಾರ್ಕಳ ನ್ಯಾಯಾಲಯಕ್ಕೆ ಒಪ್ಪಿಸಿದ್ದು, ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

    ಕೆಲವು ವರ್ಷಗಳ ಹಿಂದೆ ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹಿರ್ಗಾನ ಗ್ರಾಮದ ಶಾಲಾ ಮುಂಭಾಗದ ತಿರುವಿನಲ್ಲಿ ವಾಹನದಲ್ಲಿದ್ದ ಸಿಮೆಂಟ್ ಕಾಂಕ್ರೀಟ್ ಮೆಷೀನ್ ಕಾರ್ಮಿಕರ ಮೇಲೆ ಮಗುಚಿ ಬಿದ್ದು, ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಲ್ಲದೇ, ಹಲವಾರು ಕಾರ್ಮಿಕರು ಗಂಭೀರ ಗಾಯಗೊಂಡಿದ್ದರು. ಕೆಲವಾರು ದಿನ ಘಟನೆಯ ಗಂಭೀರತೆಯನ್ನು ಅರಿತು ಸ್ವಲ್ಪ ಮಟ್ಟಿನ ಸುಧಾರಣೆ ಕಂಡಿದ್ದರೂ, ಪುನಃ ಹಿಂದಿಂನಂತೆ ಕಾರ್ಮಿಕರನ್ನು ಕೊಂಡೋಯ್ಯುತಿದ್ದು, ಅಪಾಯವನ್ನು ಅರಿತಿದ್ದರೂ ಕ್ಯಾರೆ ಎನ್ನದ ಕಾರ್ಮಿಕರಿಗೆ ಹಾಗೂ ಕಾಂಟಾಕ್ಟ್‌ದಾರರಿಗೆ ನ್ಯಾಯಾಲಯದ ಮೂಲಕ ದಂಡ ಪಾವತಿಸುವಂತೆ ಮಾಡಿ ಎಚ್ಚರಿಕೆಯ ಕರೆಗಂಟೆ ನೀಡಿದೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಪೊಲೀಸರ ಬಗ್ಗೆ ಪ್ರಶಂಸೆಯ ಮಾತು ಕೇಳಿಬರುತ್ತಿದೆ.

    Post Views: 153

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.