Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೊಲೀಸ್ ಇನ್ಸ್ ಪೆಕ್ಟರ್ ಗೆ ಲವ್ ಲೆಟರ್ ಬರೆದು ಮಹಿಳೆ ಕಿರುಕುಳ; FIR ದಾಖಲು
    ಇತ್ತೀಚಿನ ಸುದ್ದಿ

    ಪೊಲೀಸ್ ಇನ್ಸ್ ಪೆಕ್ಟರ್ ಗೆ ಲವ್ ಲೆಟರ್ ಬರೆದು ಮಹಿಳೆ ಕಿರುಕುಳ; FIR ದಾಖಲು

    December 17, 2025
    Share

    ಬೆಂಗಳೂರಿನ ರಾಮಮೂರ್ತಿ ನಗರ ಪೊಲೀಸ್ ಠಾಣಾ ಇನ್ಸ್ಪೆಕ್ಟರ್‌ಗೆ ಮಹಿಳೆಯೊಬ್ಬರು ಲವ್ ಲೆಟರ್ ಬರೆದಿದ್ದು, ಮಹಿಳೆ ಕಾಟಕ್ಕೆ ಬೇಸತ್ತ ಇನ್ಸ್ಪೆಕ್ಟರ್ ಎಫ್‌ಐಆರ್ ದಾಖಲು ಮಾಡಿದ್ದಾರೆ.

    ಇನ್ಸ್ಪೆಕ್ಟರ್ ಸತೀಶ್ ಅವರಿಗೆ ರಾಮಮೂರ್ತಿ ನಗರ ನಿವಾಸಿ ಮಹಿಳೆ ವನಜಾ ಎನ್ನುವವರು ಪದೇ ಪದೇ ಲವ್ ಲೆಟರ್ ಬರೆಯುತ್ತಿದ್ದರು. ಇನ್ಸ್ಪೆಕ್ಟರ್ ಠಾಣೆಯಲ್ಲಿ ಇಲ್ಲದ ವೇಳೆ ಠಾಣೆಗೆ ಬಂದು ಇನ್ಸ್ಪೆಕ್ಟರ್ ಟೇಬಲ್ ಮೇಲೆ ಲವ್ ಲೆಟರ್ ಜೊತೆಗೆ ಕಜ್ಜಾಯದ ಡಬ್ಬಿ, ಹೂ ಬೊಕ್ಕೆ ಹಾಗೂ ಅಲ್ಲದೇ ಇಪ್ಪತ್ತು ಮಾತ್ರೆಗಳನ್ನು ಇಟ್ಟು ಹೋಗಿದ್ದರು.

    ಪ್ರೇಮ ಪತ್ರದಲ್ಲಿ ನೀವು, ನನ್ನ ಪ್ರೀತಿಯನ್ನು ಒಪ್ಪುತ್ತಿಲ್ಲ, ನಿಮಗೆ ತೊಂದರೆ ಕೊಡಲು ನನಗೆ ಇಷ್ಟ ಇಲ್ಲ. ನೀವು ನನ್ನ ಪ್ರೀತಿ ಒಪ್ಪಿಕೊಳ್ಳದಿದ್ದರೆ, ನಾನು ಆತ್ಮಹತ್ಯೆ ಮಾಡಿಕೊಳ್ತುತ್ತೇನೆ. ನನ್ನ ಸಾವಿಗೆ ನೀವೆ ಕಾರಣ ಎಂದು ಹಾರ್ಟ್ ಚಿತ್ರ ಬರೆದು ಅದರಲ್ಲಿ ಚಿನ್ನಿ ಲವ್ ಯೂ, ಯೂ ಮಸ್ಟ್ ಲವ್ ಮೀ ಎಂದು ರಕ್ತದಲ್ಲಿ ಪತ್ರ ಬರೆದಿದ್ದಾಳೆ.

    ಮಹಿಳೆ ಪತ್ರ ಬರೆಯುವ ಮುನ್ನ ಮೊಬೈಲ್‌ಗೆ ಸಾಕಷ್ಟು ಬಾರಿ ಮೆಸೇಜ್ ಮಾಡುತ್ತಿದ್ದಳು. ಇದರಿಂದ ಬೇಸತ್ತು ಇನ್ಸ್ಪೆಕ್ಟರ್ ಮೊಬೈಲ್ ನಂಬರ್ ಬ್ಲಾಕ್ ಮಾಡಿದ್ದಾರೆ. ಹತ್ತಕ್ಕೂ ಹೆಚ್ಚು ನಂಬರ್‌ಗಳಿ0ದ ಮೆಸೆಜ್ ಮಾಡಿದ್ದರಿಂದ ಅಷ್ಟೂ ನಂಬರ್‌ಗಳನ್ನೂ ಇನ್ಸ್ಪೆಕ್ಟರ್ ಬ್ಲಾಕ್ ಮಾಡಿದ್ದಾರೆ. ಫೋನ್ ನಂಬರ್‌ಗಳನ್ನು ಬ್ಲಾಕ್ ಮಾಡಿದ್ದಕ್ಕೆ ಇದೀಗ ಪತ್ರ ಬರೆದಿದ್ದಾಳೆ.

    ತಾನು ಕಾಂಗ್ರೆಸ್ ಕಾರ್ಯಕರ್ತೆ ಎಂದು ಹೇಳಿಕೊಂಡಿದ್ದ ಮಹಿಳೆ, ಮೋಟಮ್ಮ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆಗಿರುವ ಫೋಟೋ ಕಳುಹಿಸಿ ಪ್ರೀತಿಸಲೇ ಬೇಕು ಎಂದು ಒತ್ತಡ ಹಾಕಿದ್ದಾಳೆ.  ಮಹಿಳೆ ಕಾಟಕ್ಕೆ ಬೇಸತ್ತು, ಇನ್ಸ್ಪೆಕ್ಟರ್ ಮಹಿಳೆ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಕರ್ತವ್ಯಕ್ಕೆ ಅಡ್ಡಿ, ಆತ್ಮಹತ್ಯೆ ಬೆದರಿಕೆ ಆರೋಪದಲ್ಲಿ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    Post Views: 242

    Related Posts

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.