Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಮಂಗಳೂರು : ಪಾದಚಾರಿಗಳಿಗೆ ಕಾರು ಡಿಕ್ಕಿ ಪ್ರಕರಣ – ಚಾಲಕನಿಗೆ ದಂಡ ವಿಧಿಸಿದ ನ್ಯಾಯಾಲಯ
    Uncategorized

    ಮಂಗಳೂರು : ಪಾದಚಾರಿಗಳಿಗೆ ಕಾರು ಡಿಕ್ಕಿ ಪ್ರಕರಣ – ಚಾಲಕನಿಗೆ ದಂಡ ವಿಧಿಸಿದ ನ್ಯಾಯಾಲಯ

    December 18, 2025
    Share

    ಮಂಗಳೂರು: ಪಾದಚಾರಿಗಳಿಗೆ ಕಾರು ಡಿಕ್ಕಿ ಹೊಡೆದ ಕಾರ್‌ನ ಚಾಲಕನಿಗೆ ನ್ಯಾಯಾಲಯ ದಂಡ ವಿಧಿಸಿದೆ. ಆರೋಪಿ ಚಾಲಕ ಎಂ.ಶ್ರೀಕಷ್ಣ 2023ರ ಡಿ.24ರಂದು ಪಡೀಲ್ ಕಡೆಯಿಂದ ಬಿಕರ್ಣಕಟ್ಟೆ ಕಡೆಗೆ ಹಾದು ಹೋಗಿರುವ ರಸ್ತೆಯಲ್ಲಿ ಕಾರನ್ನು ಚಲಾಯಿಸಿಕೊಂಡು ಹೋಗಿ ಇಬ್ಬರು ಪಾದಚಾರಿಗಳಿಗೆ ಢಿಕ್ಕಿ ಹೊಡೆಯಲು ಕಾರಣರಾಗಿರುವುದಾಗಿ ಆರೋಪಿಸಲಾಗಿತ್ತು.

    ಆರೋಪಿ ಚಾಲಕ ಎಂ.ಶ್ರೀಕಷ್ಣ ಸ್ಕೂಟರೊಂದನ್ನು ಎಡಬದಿಯಿಂದ ಓವರ್ ಟೇಕ್ ಮಾಡಿ ರಸ್ತೆಯ ಎಡಬದಿಗೆ ಹೋಗುವ ಭರದಲ್ಲಿ ನಿರ್ಲಕ್ಷ್ಯತನದಿಂದ ರಸ್ತೆಯ ತೀರಾ ಎಡಬದಿಗೆ ಚಲಾಯಿಸಿಕೊಂಡು ಹೋದ ಪರಿಣಾಮ ಇಬ್ಬರು ಪಾದಚಾರಿಗಳಿಗೆ ಢಿಕ್ಕಿಯಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅಪಘಾತ ಸಂದರ್ಭದಲ್ಲಿ ಕಾರು ಚಾಲಕನ ಚಾಲನಾ ಅನುಜ್ಞಾಪತ್ರದ ಅವಧಿ ಮುಕ್ತಾಯಗೊಂಡಿತ್ತು. ಅಪಘಾತ ಪಡಿಸಿದ ಕಾರಿನ ವಾಯುಮಾಲಿನ್ಯ ಪ್ರಮಾಣ ಪತ್ರದ ಅವಯು ಊರ್ಜಿತದಲ್ಲಿ ಇರಲಿಲ್ಲ. ವಿಚಾರಣೆ ನಡೆಸಿದ ಮಂಗಳೂರು ಜೆಎಂಎಫ್ ಸಿ 8ನೇ ನ್ಯಾಯಾಲಯದ ನ್ಯಾಯಾಧೀಶ ಫವಾಜ್ ಪಿ.ಎ ಅವರು ಡಿ.15ರಂದು ಆರೋಪಿಗೆ 8,500 ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ.ಈ ಘಟನೆಗೆ ಸಂಬಂಧಿಸಿ ಸಂಚಾರ ಪೂರ್ವ ಪೊಲೀಸ್ ಠಾಣೆಯ ಅಂದಿನ ಪೊಲೀಸ್ ಉಪನಿರೀಕ್ಷಕ ಈಶ್ವರ ಸ್ವಾಮಿ ಅವರು ಭಾಗಶ: ತನಿಖೆ ನಡೆಸಿ ಪೊಲೀಸ್ ಉಪನಿರೀಕ್ಷಕ ವೈ.ಎನ್.ಚಂದ್ರಮ್ಮ ಪೂರ್ಣ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕಿ ಗೀತಾ ರೈ ಅವರು ಸಾಕ್ಷಿ ವಿಚಾರಣೆ ನಡೆಸಿದ್ದು, ಸಹಾಯಕ ಸರಕಾರಿ ಅಭಿಯೋಜಕ ಅರೋನ್ ಡಿ ಸೋಜ ವಿಟ್ಲ ಅವರು ವಾದ ಮಂಡಿಸಿದ್ದರು.

    Post Views: 159

    Related Posts

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026

    ಏಪ್ರಿಲ್ 1, 2026 ರಿಂದ ಟೋಲ್ ದರ ಏರಿಕೆ: ₹3,000 ದಿಂದ ₹3,075 ಗೆ ವಾರ್ಷಿಕ ಪಾಸ್?

    March 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.