Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ ನಿಧನ
    ಇತ್ತೀಚಿನ ಸುದ್ದಿ

    ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ ನಿಧನ

    January 1, 2026
    Share

    ಮಂಗಳೂರು : ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ (86) ಗುರುವಾರ (ಜ.1) ಮುಂಜಾನೆ ನಿಧನರಾಗಿದ್ದಾರೆ. ಶಿಕ್ಷಣ ತಜ್ಞ, ಉದ್ಯಮಿ ಮತ್ತು ಸಮಾಜ ಸೇವಕರಾಗಿದ್ದ ಅವರು, ನಿಟ್ಟೆ ಶಿಕ್ಷಣ ಸಂಸ್ಥೆಗಳ ವಿಸ್ತರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ರಾಜ್ಯೋತ್ಸವ ಪ್ರಶಸ್ತಿ ಮತ್ತು ಗೌರವ ಡಾಕ್ಟರೇಟ್ ಸೇರಿದಂತೆ ಹಲವು ಗೌರವಗಳಿಗೆ ಪಾತ್ರರಾಗಿದ್ದರು.

    ರಾಜ್ಯದ ಪ್ರಮುಖ ಶಿಕ್ಷಣ ತಜ್ಞರ, ಉದ್ಯಮಿ ಮತ್ತು ಸಮಾಜ ಸೇವಕರಾಗಿ ಅವರು ಗುರುತಿಸಿಕೊಂಡಿದ್ದಾರೆ. ವಿನಯ ಹೆಗ್ಡೆ ಅವರು ಲೋಕಸಭಾ ಸ್ಪೀಕರ್ ಆಗಿದ್ದ ದಿವಂಗತ ಜಸ್ಟಿಸ್ ಕೆ.ಎಸ್. ಹೆಗ್ಡೆ ಅವರ ಪುತ್ರ.

    ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ತಮ್ಮ ಶಿಕ್ಷಣ ಪೂರೈಸಿ ತಂದೆಯವರ ಆಶಯದಂತೆ 1979ರಲ್ಲಿ ‘ನಿಟ್ಟೆ ಎಜುಕೇಶನ್ ಟ್ರಸ್ಟ್’ ಸ್ಥಾಪಿಸಿದರು. ಇಂದು ನಿಟ್ಟೆ ಶಿಕ್ಷಣ ಸಂಸ್ಥೆಗಳು ಮಂಗಳೂರು, ಬೆಂಗಳೂರು ಮತ್ತು ನಿಟ್ಟೆಯಲ್ಲಿ 40ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳನ್ನು ಹೊಂದಿವೆ. ಇದರಲ್ಲಿ ವೈದ್ಯಕೀಯ, ಇಂಜಿನಿಯರಿಂಗ್, ದಂತ ವೈದ್ಯಕೀಯ, ಫಾರ್ಮಸಿ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜುಗಳು ಸೇರಿವೆ.

    ಪ್ರಸ್ತುತ ಅವರು ಮಂಗಳೂರಿನ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದರು. ಲೆಮಿನಾ ಸಸ್ಪೆನ್ಷನ್ ಪ್ರೈವೇಟ್ ಲಿಮಿಟೆಡ್ ಸೇರಿದಂತೆ ಲೆಮಿನಾ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾಗಿದ್ದಾರೆ. ಇದು ಆಟೋಮೊಬೈಲ್ ಬಿಡಿಭಾಗಗಳ ತಯಾರಿಕೆಯಲ್ಲಿ ಪ್ರಮುಖ ಸಂಸ್ಥೆಯಾಗಿದೆ.

    ರಾಜ್ಯದ ಹಲವು ಸಮಿತಿಗಳಲ್ಲಿ ಮತ್ತು ಕೈಗಾರಿಕಾ ಒಕ್ಕೂಟಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹಲವು ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು. ಶಿಕ್ಷಣ ಮತ್ತು ಸಮಾಜ ಸೇವೆಗಾಗಿ ಅವರಿಗೆ ಕರ್ನಾಟಕ ಸರ್ಕಾರದಿಂದ ‘ರಾಜ್ಯೋತ್ಸವ ಪ್ರಶಸ್ತಿ’ ಮಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಲಭಿಸಿದೆ. ಕರಾವಳಿ ಕರ್ನಾಟಕದ ಶೈಕ್ಷಣಿಕ ಮತ್ತು ಕೈಗಾರಿಕಾ ಕ್ರಾಂತಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ದೂರದೃಷ್ಟಿಯ ನಾಯಕರಾಗಿದ್ದರು.

    Post Views: 195

    Related Posts

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.