Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಮಹಿಳೆಗೆ ಕಿರುಕಳ ನೀಡಿದ ಆರೋಪ – ಹೆಡ್‌ಕಾನ್‌ಸ್ಟೇಬಲ್ ಅಮಾನತು…!!
    ಇತ್ತೀಚಿನ ಸುದ್ದಿ

    ಮಂಗಳೂರು : ಮಹಿಳೆಗೆ ಕಿರುಕಳ ನೀಡಿದ ಆರೋಪ – ಹೆಡ್‌ಕಾನ್‌ಸ್ಟೇಬಲ್ ಅಮಾನತು…!!

    January 6, 2026
    Share

    ಮಂಗಳೂರು : ಮಹಿಳೆಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಮತ್ತು ಮಾಹಿತಿ ನೀಡದೆ ಅನಧಿಕೃತವಾಗಿ ಕರ್ತವ್ಯಕ್ಕೆ ಗೈರು ಹಾಜರಾದ ಕಾರಣ ಉಳ್ಳಾಲ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಸಂತೋಷ್ ಸಿ.ಜೆ. ಎಂಬವರನ್ನು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಕರ್ತವ್ಯದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

    2023ರಲ್ಲಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಾವೂರು ಠಾಣೆಗೆ ದೂರು ನೀಡಲು ಹೋದ ಮಹಿಳೆಗೆ ಸಂತೋಷ್‌ರ ಪರಿಚಯ ಆಗಿತ್ತು. ಬಳಿಕ ಸಂತೋಷ್‌ನ ನಡವಳಿಕೆ ಬಗ್ಗೆ ಅಸಮಾಧಾನಗೊಂಡ ಮಹಿಳೆ ಕಮಿಷನರ್‌ಗೆ ದೂರು ನೀಡಿದ್ದರು. ಆ ಬಗ್ಗೆ ಕ್ಷಮೆ ಕೇಳಿದ ಹಿನ್ನೆಲೆಯಲ್ಲಿ ಮಹಿಳೆಯು ದೂರನ್ನು ಹಿಂಪಡೆದಿದ್ದರು.

    ಆದರೆ ನಂತರ ಸುಮ್ಮನಿರದೆ ನಿರಂತರವಾಗಿ ಕಿರುಕುಳ ನೀಡಲು ಆರಂಭಿಸಿದ ಕಾರಣ ಮಹಿಳೆ ಮತ್ತೆ ಮೇಲಾಧಿಕಾರಿಗೆ ಮಾಹಿತಿ ನೀಡಿ ಸಂತೋಷ್ ವಿರುದ್ಧ ಡಿ.17ರಂದು ಕಾವೂರು ಠಾಣೆಗೆ ದೂರು ನೀಡಿದ್ದರು. ಇದನ್ನು ತಿಳಿದ ಸಂತೋಷ್ ಡಿ.18ರಿಂದ ಮೇಲಾಧಿಕಾರಿ ಅಥವಾ ಠಾಣೆಗೆ ಯಾವುದೇ ಮಾಹಿತಿ ನೀಡದೆ ಕರ್ತವ್ಯಕ್ಕೆ ಗೈರು ಹಾಜರಾಗಿದ್ದ. ಈ ಪ್ರಕರಣದಲ್ಲಿ ವಿಚಾರಣೆಯ ಆವಶ್ಯಕತೆ ಇದ್ದ ಕಾರಣ ಇಲಾಖಾ ಶಿಸ್ತು ಕ್ರಮ/ವಿಚಾರಣೆ ಬಾಕಿ ಇರಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರು ಸಂತೋಷ್ ರನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

    Post Views: 118

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.