Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ವಿದ್ಯಾರ್ಥಿಗಳಿಗೆ ಮಾದಕವಸ್ತು ಮಾರಾಟ ಮಾಡುತ್ತಿದ್ದ ಯುವಕನ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ವಿದ್ಯಾರ್ಥಿಗಳಿಗೆ ಮಾದಕವಸ್ತು ಮಾರಾಟ ಮಾಡುತ್ತಿದ್ದ ಯುವಕನ ಬಂಧನ

    January 18, 2026
    Share

    ಮಂಗಳೂರು: ವಿದ್ಯಾರ್ಥಿಗಳಿಗೆ ನಿಷೇಧಿತ ಮಾದಕವಸ್ತು ಮಾರಾಟ ಮಾಡುತ್ತಿದ್ದ ಆರೋಪದಡಿ ಕದ್ರಿ ಪೊಲೀಸ್ ಠಾಣೆಯ ಅಧಿಕಾರಿಗಳು ಯುವಕನೊಬ್ಬನನ್ನು ಬಂಧಿಸಿ ಎಂಡಿಎಮ್ಎ (MDMA) ಮಾದಕವಸ್ತು ಹಾಗೂ ಬೈಕ್ ವಶಪಡಿಸಿಕೊಂಡಿರುವ ಘಟನೆ ಜನವರಿ 17, 2026ರಂದು ನಡೆದಿದೆ.

    ಬಂಧಿತ ಆರೋಪಿಯನ್ನು ಜೂಡ್ ಮಾಥ್ಯೂ (20) ಎಂದು ಗುರುತಿಸಲಾಗಿದ್ದು, ಆತನು ಮನೋಜ್ ಜೊಸೆಫ್ ಅವರ ಪುತ್ರ. ಆರೋಪಿಯು ಕೇರಳ ರಾಜ್ಯದ ಎರ್ನಾಕುಲಂ ಜಿಲ್ಲೆಯ ಮುತೊಲಪುರಂ ನಿವಾಸಿ, ಚುನಯಮಕ್ಕಿಲ್ ಹೌಸ್ ವಾಸಿಯಾಗಿದ್ದಾನೆ.

    ಮಂಗಳೂರು ಪೂರ್ವ ಪೊಲೀಸ್ ಠಾಣಾಧಿಕಾರಿಗಳಿಗೆ ಲಭಿಸಿದ ಖಚಿತ ಮಾಹಿತಿಯಂತೆ, ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪದವು ಗ್ರಾಮದ ಕೈಲಾಸ ಕಾಲೋನಿ ಸಮೀಪ, ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂದಿರದ ಹಿಂದಿರುವ ಖಾಲಿ ಜಾಗದಲ್ಲಿ ಯುವಕನೊಬ್ಬ ಬೈಕ್ನಲ್ಲಿ ಎಂಡಿಎಮ್ಎ ಮಾದಕವಸ್ತುವನ್ನು ಹೊಂದಿದ್ದು ಅಕ್ರಮವಾಗಿ ಮಾರಾಟ ಮಾಡುತ್ತಿದ್ದನು. ಈ ಮಾಹಿತಿ ಆಧರಿಸಿ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

    ದಾಳಿಯ ವೇಳೆ ಆರೋಪಿಯಿಂದ 5.20 ಗ್ರಾಂ ತೂಕದ ಎಂಡಿಎಮ್ಎ ಮಾದಕವಸ್ತು ಹಾಗೂ ಕೃತ್ಯಕ್ಕೆ ಬಳಸಿದ ಪಲ್ಸರ್ ಎನ್ಎಸ್ ಬೈಕ್ ಸೇರಿ ಒಟ್ಟು ಸುಮಾರು ರೂ.70,000 ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಈ ಸಂಬಂಧ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 237

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.