Facebook Twitter Instagram
    Wednesday, July 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೇರಳದ ದೀಪಕ್ ಆತ್ಮಹತ್ಯೆ ಪ್ರಕರಣ : ಪರಾರಿಯಾಗಿದ್ದ ಆರೋಪಿ ಶಿಮ್ಜಿತಾ ಮುಸ್ತಫಾ ಸಂಬಂಧಿಕರ ಮನೆಯಿಂದ ಬಂಧನ
    ಇತ್ತೀಚಿನ ಸುದ್ದಿ

    ಕೇರಳದ ದೀಪಕ್ ಆತ್ಮಹತ್ಯೆ ಪ್ರಕರಣ : ಪರಾರಿಯಾಗಿದ್ದ ಆರೋಪಿ ಶಿಮ್ಜಿತಾ ಮುಸ್ತಫಾ ಸಂಬಂಧಿಕರ ಮನೆಯಿಂದ ಬಂಧನ

    January 22, 2026
    Share

    ಕೋಝಿಕೋಡ್ : ಬಸ್ ಪ್ರಯಾಣ ಸಮಯದಲ್ಲಿ ಸಹ ಪ್ರಯಾಣಿಗ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಹಂಚಿಕೊಂಡ ನಂತರ ಸಹ ಪ್ರಯಾಣಿಗ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಶಿಮ್ಜಿತಾ ಮುಸ್ತಫಾ ಅವರನ್ನು ಬಂಧಿಸಲಾಗಿದೆ.

    ಬಸ್ಸಿನಲ್ಲಿ ಸಹ ಪ್ರಯಾಣಿಕ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಅಪಾದಿಸಿ ಪ್ರಯಾಣಿಕ ದೀಪಕ್ ಅವರ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ್ದರು, ಇದರಿಂದ ಅವಮಾನವನ್ನು ಸಹಿಸಿಕೊಳ್ಳಲಾಗದೆ ದೀಪಕ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು.

    ಈ ಪ್ರಕರಣ ಕೇರಳದಾದ್ಯಂತ ಭಾರೀ ಆಕ್ರೋಷಕ್ಕೆ ಕಾರಣವಾಗಿತ್ತು, ಪ್ರಕರಣದ ನಂತರ ಆರೋಪಿ ಶಿಮ್ಜಿತಾ ಮುಸ್ತಫಾ ತಲೆಮರೆಸಿಕೊಂಡಿದ್ದರು,ನಂತರ ಆಕೆಯನ್ನು ಕೋಝಿಕೋಡ್ ವೈದ್ಯಕೀಯ ಕಾಲೇಜು ಪೊಲೀಸರು ವಡಕಾರದಲ್ಲಿರುವ ಆಕೆಯ ಸಂಬಂಧಿಕರ ಮನೆಯಲ್ಲಿ ಪತ್ತೆ ಹಚ್ಚಿ ಆಕೆಯನ್ನು ಬಂಧಿಸಿದ್ದಾರೆ. ನಂತರ  ಆಕೆಯನ್ನು ಕೊಯಿಲಾಂಡಿ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ನಂತರ ಠಾಣೆಗೆ ಕರೆತರಲಾಯಿತು.

    ಆಕೆಯ ವಿರುದ್ಧ ಲುಕೌಟ್ ನೋಟಿಸ್ ಜಾರಿಯಾದ ನಂತರ ಆಕೆಯನ್ನು ಬಂಧಿಸಲಾಯಿತು. ಉಳ್ಳತ್ತೋಡಿಯ ಕೊಳಂಗರಕಂಡಿಯ ಗೋವಿಂದಪುರದ ಆತನ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಶಿಜ್ಮಿತಾ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆಕೆಯ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ವಿಧಿಸಲಾಗಿತ್ತು. ಶಿಮ್ಜಿತಾ ದೇಶ ಬಿಟ್ಟು ಹೋಗುತ್ತಾರೆ ಎಂಬ ಮಾಹಿತಿ ಬಂದ ನಂತರ ಪೊಲೀಸರು ಲುಕೌಟ್ ನೋಟಿಸ್ ಜಾರಿ ಮಾಡಿದ್ದರು. ಆಕೆಯ ಮೇಲೆ ಹೇರಲಾದ ಆರೋಪಗಳಿಗೆ ಗರಿಷ್ಠ ಹತ್ತು ವರ್ಷಗಳ ಜೈಲು ಶಿಕ್ಷೆ ಮತ್ತು ದಂಡ ವಿಧಿಸಬಹುದಾಗಿದೆ. ಈ ಮಧ್ಯೆ, ಶಿಮ್ಜಿತಾ ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಆಕೆಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನಾಳೆ ಪರಿಗಣಿಸುವ ಸಾಧ್ಯತೆಯಿದೆ.

    Post Views: 246

    Related Posts

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026

    ಮಂಗಳೂರು: ಮನೆ ದುರಸ್ತಿ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು..!! ಆರೋಪಿಯ ಬಂಧನ

    July 22, 2026

    ಜು.22-25: ಮಂಗಳೂರಿನಲ್ಲಿ ಎನ್‌ಎಸ್‌ಜಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ-ಸಾರ್ವಜನಿಕರ ಸಹಕಾರಕ್ಕೆ ಡಿ.ಸಿ ಮನವಿ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026

    ಮಂಗಳೂರು: ಮನೆ ದುರಸ್ತಿ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು..!! ಆರೋಪಿಯ ಬಂಧನ

    July 22, 2026

    ಜು.22-25: ಮಂಗಳೂರಿನಲ್ಲಿ ಎನ್‌ಎಸ್‌ಜಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ-ಸಾರ್ವಜನಿಕರ ಸಹಕಾರಕ್ಕೆ ಡಿ.ಸಿ ಮನವಿ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.