Facebook Twitter Instagram
    Thursday, October 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಆರೋಪಿಗಳು ಪತ್ತೆಯಾಗದಿದ್ದಲ್ಲಿ ಜಾಮೀನು ನೀಡಿದವರ ಮೇಲೂ ಕ್ರಮ: ಪೊಲೀಸ್‌ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಎಚ್ಚರಿಕೆ
    ಇತ್ತೀಚಿನ ಸುದ್ದಿ

    ಆರೋಪಿಗಳು ಪತ್ತೆಯಾಗದಿದ್ದಲ್ಲಿ ಜಾಮೀನು ನೀಡಿದವರ ಮೇಲೂ ಕ್ರಮ: ಪೊಲೀಸ್‌ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಎಚ್ಚರಿಕೆ

    January 25, 2026
    Share

    ಮಂಗಳೂರು: ದರೋಡೆ, ಸುಲಿಗೆ, ಅತ್ಯಾಚಾರ, ಕೋಮು ಹತ್ಯೆ ಮುಂತಾದ ಗಂಭೀರ ಪ್ರಕರಣಗಳಲ್ಲಿ ಆರೋಪಿಗಳು ಪೊಲೀಸರ ಕೈಗೆ ಸಿಗದೇ ಇದ್ದಲ್ಲಿ ಅವರಿಗೆ ಜಾಮೀನು ನೀಡಿದವರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀ‌ರ್ ರೆಡ್ಡಿ ತಿಳಿಸಿದ್ದಾರೆ.

    ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಸುಮಾರು 15 ರೌಡಿಗಳನ್ನು ಬಂಧಿಸಿದ್ದು ವಿವಿಧ ಪ್ರಕರಣಗಳಲ್ಲಿ ವಿಚಾರಣೆ ಆರಂಭಿಸಲಾಗಿದೆ. ಪೊಲೀಸರ ಕೈಗೆ ಸಿಗದೇ ಇರುವ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಲು ಕ್ರಮ ಕೈಗೊಳ್ಳಲಾಗಿದೆ. ಅವರಿಗೆ ಜಾಮೀನು ನೀಡಿದವರ ಕಂದಾಯ ದಾಖಲೆಗಳನ್ನು ನ್ಯಾಯಾಲಯದ ಆಸ್ತಿಯೆಂದು ಘೋಷಿಸಲಾಗುವುದು. ಈಗಾಗಲೇ ಓರ್ವ ಆರೋಪಿಯ ಮನೆಯನ್ನು ನ್ಯಾಯಾಲಯದಿಂದ ಹರಾಜು ಮಾಡಲಾಗಿದೆ. ಜಾಮೀನು ನೀಡಿದವರ ಮೇಲೆ ಕ್ರಮ ಕೈಗೊಳ್ಳಲು ನ್ಯಾಯಾಲಯಕ್ಕೆ ಮನವಿ ಮಾಡಲಾಗಿದೆ. ಜಾಮೀನು ನೀಡಿದ 11 ಮಂದಿಗೆ 10 ಸಾವಿರದಿಂದ 2 ಲಕ್ಷ ರೂ. ವರೆಗೆ ದಂಡ ಹಾಕಲಾಗಿದೆ. 17 ಮಂದಿ ಜಾಮೀನುದಾರರ ಆಸ್ತಿಯ ಆರ್ ಟಿಸಿಯಲ್ಲಿ ‘ನ್ಯಾಯಾಲಯದ ಆಸ್ತಿ’ ಎಂದು ನಮೂದಿಸಲಾಗಿದೆ. ಇದನ್ನೂ ಓದಿ: ಅತ್ತ ಕೋವಿ ಗುಂಡು ತಗುಲಿದ ಸ್ಥಿತಿಯಲ್ಲಿ ಮಗನ ಮೃತದೇಹ ಪತ್ತೆ…ಇತ್ತ ಚೂರಿ ಇರಿತಕ್ಕೊಳಗಾಗಿ ತಂದೆ ಆಸ್ಪತ್ರೆಗೆ….ಏನಿದು ಕೇಸ್!? ಹೀಗಾಗಿ ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಿಗೆ ಜಾಮೀನು ನೀಡುವವರು ಎಚ್ಚರಿಕೆ ವಹಿಸಬೇಕು. ಅಂತಹ ಆರೋಪಿಗಳ ನ್ಯಾಯಾಲಯಕ್ಕೆ ಹಾಜರುಪಡಿಸುವ ಜವಾಬ್ದಾರಿ ಜಾಮೀನುದಾರರು ವಹಿಸಿಕೊಳ್ಳಬೇಕು ಎಂದು ಕಮಿಷನ‌ರ್ ಸುಧೀರ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

    Post Views: 265

    Related Posts

    ಅ.23 ರಂದು ಬನ ತುಳು ಸಿನೆಮಾ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆ

    October 22, 2026

    ನೆಲ್ಯಾಡಿ ಬಳಿ ಭೀಕರ ಅಪಘಾತ: ಗ್ಯಾಸ್ ಟ್ಯಾಂಕರ್‌ಗೆ ಕಾರು ಡಿಕ್ಕಿ, ವಿದ್ಯಾರ್ಥಿ ಸಾವು

    October 22, 2026

    ಮಣಿಪಾಲ: ಮಾನವ ಅಸ್ಥಿಪಂಜರದ ಕೆಲವು ಭಾಗಗಳು ಪತ್ತೆ!!

    October 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಅ.23 ರಂದು ಬನ ತುಳು ಸಿನೆಮಾ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆ

    October 22, 2026

    ನೆಲ್ಯಾಡಿ ಬಳಿ ಭೀಕರ ಅಪಘಾತ: ಗ್ಯಾಸ್ ಟ್ಯಾಂಕರ್‌ಗೆ ಕಾರು ಡಿಕ್ಕಿ, ವಿದ್ಯಾರ್ಥಿ ಸಾವು

    October 22, 2026

    ಮಣಿಪಾಲ: ಮಾನವ ಅಸ್ಥಿಪಂಜರದ ಕೆಲವು ಭಾಗಗಳು ಪತ್ತೆ!!

    October 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.