Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಇನೋವಾ ಕಾರು ಖರೀದಿ ಹೆಸರಿನಲ್ಲಿ ₹8 ಲಕ್ಷ ವಂಚನೆ – ಹಣ ಕೇಳಿದಾಗ ಕೊಲೆ ಬೆದರಿಕೆ
    ಇತ್ತೀಚಿನ ಸುದ್ದಿ

    ಮಂಗಳೂರು: ಇನೋವಾ ಕಾರು ಖರೀದಿ ಹೆಸರಿನಲ್ಲಿ ₹8 ಲಕ್ಷ ವಂಚನೆ – ಹಣ ಕೇಳಿದಾಗ ಕೊಲೆ ಬೆದರಿಕೆ

    January 27, 2026
    Share

    ಮಂಗಳೂರು : ಇನೋವಾ ಕಾರು ಖರೀದಿ ಮಾಡುವ ನೆಪದಲ್ಲಿ ₹8 ಲಕ್ಷಕ್ಕೂ ಅಧಿಕ ಮೊತ್ತ ವಂಚನೆ ಮಾಡಿರುವ ಆರೋಪ ಮಂಗಳೂರಿನ ಪಾಂಡೇಶ್ವರ ಮೂಲದ ತಾಯಿ–ಮಗಳ ಮೇಲೆ ಕೇಳಿಬಂದಿದೆ. ವಂಚನೆಗೆ ಒಳಗಾದ ವ್ಯಕ್ತಿ ಅಶ್ರಫ್ MRPL ಉದ್ಯೋಗಿ ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ ಇದುವರೆಗೂ ಯಾವುದೇ ಕಾನೂನು ಕ್ರಮ ಜರುಗಿಸಿಲ್ಲ ಎಂದು ಆರೋಪಿಸಲಾಗಿದೆ.

    ಪೀಡಿತ ವ್ಯಕ್ತಿಯ ಸ್ನೇಹಿತ ನಾದ ಗಂಗಾಧರ ಅವರು ಹರಿಯಾಣ ರಾಜ್ಯದಿಂದ HR-83-0630 ನಂಬರ್‌ನ ಇನೋವಾ ಕಾರನ್ನು ಖರೀದಿಸಿ ತಂದಿದ್ದರು. ನಂತರ ಕಾರು ಅವರಿಗೆ ಇಷ್ಟವಾಗದ ಕಾರಣ, ಅದನ್ನು ಮಾರಾಟ ಮಾಡಿ ಹಣ ಹಿಂತಿರುಗಿಸುವಂತೆ ಪೀಡಿತರಿಗೆ ಮನವಿ ಮಾಡಿದ್ದರು.

    ಈ ನಡುವೆ, ದಿನಾಂಕ 1 ಏಪ್ರಿಲ್ 2025 ರಂದು ಪೀಡಿತರ ನೆರೆಹೊರೆಯ ಶಾಹಿದ್ ಎಂಬವರು ತಮ್ಮ ಪರಿಚಯದ ಗ್ರಾಹಕರಿದ್ದಾರೆ ಎಂದು ಹೇಳಿ, ಬೀ. ಫಾತಿಮ (ಪತಿ: ಅಬ್ದುಲ್ ಮಜಿದ್) ಹಾಗೂ ಅವರ ಮಗಳು ರೆಹಮತ್ (ಪತಿ: ಅಬ್ದುಲ್ ರೆಹಮಾನ್ ಅಶ್ಫಾಕ್) ಅವರನ್ನು ಪರಿಚಯಿಸಿದರು. ಆರೋಪಿಗಳು ಇನೋವಾ ಕಾರನ್ನು ₹8,60,000ಕ್ಕೆ ಖರೀದಿಸುವುದಾಗಿ ಒಪ್ಪಿಕೊಂಡರು.

    ಮಂಗಳೂರು RTO ಯಲ್ಲಿ ತೆರಿಗೆ ಪಾವತಿಸಲು ಒಟ್ಟು ₹1,80,000 ಅಗತ್ಯವಿದ್ದು, ಅದರಲ್ಲಿ ₹60,000 ಮಾತ್ರ ತಮ್ಮ ಬಳಿ ಇದೆ, ಉಳಿದ ₹8 ಲಕ್ಷವನ್ನು ಶ್ರೀರಾಮ್ ಫೈನಾನ್ಸ್‌ನಿಂದ ಸಾಲ ಪಡೆದು ಕೊಡುತ್ತೇವೆ ಎಂದು ಭರವಸೆ ನೀಡಿದರು. ಸಮುದಾಯದ ಮಹಿಳೆಯರು ಎಂಬ ಕಾರಣಕ್ಕೆ ನಂಬಿದ ಪೀಡಿತರು ಕಾರು ವರ್ಗಾವಣೆಗೆ ಒಪ್ಪಿದರು.

    ಹರಿಯಾಣ RTO ಯಿಂದ ಕಾರು ಎರಡನೇ ಆರೋಪಿ ರೆಹಮತ್ ಹೆಸರಿಗೆ ನೋಂದಾಯಿಸಿ, ನಂತರ KA-19-MQ-7027 ನಂಬರ್‌ಗೆ ವರ್ಗಾವಣೆ ಮಾಡಲಾಯಿತು. ಆದರೆ ಆರೋಪಿಗಳು ಶ್ರೀರಾಮ್ ಫೈನಾನ್ಸ್‌ನಿಂದ ₹8 ಲಕ್ಷ ಸಾಲ ಪಡೆದುಕೊಂಡರೂ ಆ ಹಣವನ್ನು ಪೀಡಿತರಿಗೆ ನೀಡದೆ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ದೂರಲಾಗಿದೆ.

    ಪೀಡಿತರು ಹಣ ಕೇಳಿದಾಗ ಸಾಲ ಸಿಗಲಿಲ್ಲ ಎಂದು ಸುಳ್ಳು ಹೇಳಿ ಕಾಲಹರಣ ಮಾಡುತ್ತಿದ್ದರು. ನಂತರ ಸಾಲ ಪಡೆದಿರುವುದು ತಿಳಿದ ಬಳಿಕ ಹಣ ಕೇಳಿದಾಗ, ಮೊದಲ ಆರೋಪಿ ಬೀ. ಫಾತಿಮ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿ, ರೌಡಿಗಳ ಮೂಲಕ ಹಲ್ಲೆ ಮಾಡುವುದಾಗಿ ಹಾಗೂ ಕೊಲೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಎರಡನೇ ಆರೋಪಿ ರೆಹಮತ್ ಕೂಡ ಮನೆಗೆ ಬಂದರೆ ಕೈಕಾಲು ಮುರಿಸುವುದಾಗಿ ಬೆದರಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

    ಈ ಕುರಿತು ಪೀಡಿತರು ದಿನಾಂಕ 15 ಜುಲೈ 2025 ರಂದು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಳಿಕ 4 ಆಗಸ್ಟ್ ರಂದು ಹಿಂಬರವಣಿಗೆ ನೀಡಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ತಿಳಿಸಿದ್ದಾರೆ. ದಿನಾಂಕ 12 ಮತ್ತು 16 ಆಗಸ್ಟ್ 2025 ರಂದು ಠಾಣಾಧಿಕಾರಿ ಹಾಗೂ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮರುದೂರು ಹಾಗೂ ನೋಂದಾಯಿತ ಅಂಚೆಯ ಮೂಲಕ ಮನವಿ ಸಲ್ಲಿಸಿದರೂ ಕ್ರಮ ಜರುಗಿಸಿಲ್ಲ ಎನ್ನಲಾಗಿದೆ.

    ಈ ನಡುವೆ ಆರೋಪಿಗಳು ಸೌದಿ ಅರೇಬಿಯಾ ಹಾಗೂ ಖತಾರ್ ದೇಶಗಳಿಗೆ ತೆರಳಿ ವಾಪಸ್ಸು ಬರುತ್ತಿರುವುದಾಗಿ ಪೀಡಿತರು ಆರೋಪಿಸಿದ್ದಾರೆ. ₹8 ಲಕ್ಷ ವಂಚನೆಗೆ ಒಳಗಾದರೂ ನ್ಯಾಯ ಸಿಗದೆ, ಇದೀಗ ನ್ಯಾಯಾಲಯದ ಮೊರೆ ಹೋಗಲು ಸಿದ್ಧತೆ ನಡೆಸಿದ್ದಾರೆ.ಪೊಲೀಸರು ಈ ಗಂಭೀರ ವಂಚನೆ ಹಾಗೂ ಕೊಲೆ ಬೆದರಿಕೆ ಪ್ರಕರಣದಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕ ವಲಯದಲ್ಲಿ ಒತ್ತಾಯ ಕೇಳಿಬರುತ್ತಿದೆ.

    Post Views: 170

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.