Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರಿನಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮದ ಸಮಯ ಬದಲಾವಣೆ : ವಿವರ ಇಲ್ಲಿದೆ
    ಇತ್ತೀಚಿನ ಸುದ್ದಿ

    ಮಂಗಳೂರಿನಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮದ ಸಮಯ ಬದಲಾವಣೆ : ವಿವರ ಇಲ್ಲಿದೆ

    August 30, 2022
    Share

    ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್‌ 2 ರಂದು ಆಗಮಿಸುತ್ತಿದ್ದು, ಆದರೆ ಮೋದಿ ಕಾರ್ಯಕ್ರಮದ ಸಮಯ ಬದಲಾವಣೆಯಾಗಿದೆ. ಸೆಪ್ಟೆಂಬರ್ 2ರ ಮಧ್ಯಾಹ್ನ 1 ಗಂಟೆಗೆ ಸುಮಾರಿಗೆ ಮಂಗಳೂರಿಗೆ ಆಗಮಿಸಲಿರುವ ಮೋದಿ, ಮಧ್ಯಾಹ್ನ 3 ಗಂಟೆ ವೇಳೆಗೆ ವಾಪಸಾಗಲಿದ್ದಾರೆ ಎಂದು ತಿಳಿದುಬಂದಿದೆ.

    ಈ ಮೊದಲು ಸಂಜೆ 4 ಗಂಟೆಗೆ ನಿಗದಿಯಾಗಿದ್ದ ಕಾರ್ಯಕ್ರಮ ಈಗ ಮಧ್ಯಾಹ್ನವೇ ನಡೆಯಲಿದೆ. ಸೆಪ್ಟೆಂಬರ್‌ 2 ರಂದು ಪ್ರಧಾನಿ ಮೋದಿ ಮಂಗಳೂರಿಗೆ ಆಗಮಿಸುವುದು ದೃಢಪಟ್ಟಿದ್ದು, ಆದರೆ, ಮೋದಿ ಕಾರ್ಯಕ್ರಮದ ಸಮಯ ಬದಲಾವಣೆಯಾಗಿದೆ. ಸೆಪ್ಟೆಂಬರ್ 2ರ ಮಧ್ಯಾಹ್ನ 1 ಗಂಟೆಗೆ ಸುಮಾರಿಗೆ ಮಂಗಳೂರಿಗೆ ಮೋದಿ ಆಗಮಿಸುತ್ತಿದ್ದು, ಮಧ್ಯಾಹ್ನ 1.30ರಿಂದ 2.30ರ ವರೆಗೆ ಸಮಾವೇಶದಲ್ಲಿ ಮೋದಿ ‌ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಕೊಚ್ಚಿಯಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ಏರ್‌ಪೋರ್ಟ್‌ಗೆ ಆಗಮಿಸಲಿರುವ ಮೋದಿ, ಮಂಗಳೂರು ಏರ್‌ಪೋರ್ಟ್‌ನಿಂದ ಹೆಲಿಕಾಪ್ಟರ್ ಮೂಲಕ ಮಂಗಳೂರು ಬಂದರಿನ ಹೆಲಿಪ್ಯಾಡ್‌ನಲ್ಲಿ‌ ಲ್ಯಾಂಡಿಂಗ್ ಆಗಲಿದ್ದಾರೆ ಎನ್ನಲಾಗಿದೆ.

    ಅಲ್ಲಿಂದ ಸಮಾವೇಶ ನಡೆಯುವ ಸ್ಥಳವಾದ ಕೂಳೂರಿನ ಗೋಲ್ಡ್ ಫಿಂಚ್‌ ಸಿಟಿ ಮೈದಾನಕ್ಕೆ ರಸ್ತೆ ‌ಮೂಲಕ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಮಧ್ಯಾಹ್ನ 1.30ರಿಂದ 2.30ರ ವರೆಗೆ ಸಮಾವೇಶದಲ್ಲಿ ಮೋದಿ ‌ಭಾಗಿಯಾಗಲಿದ್ದು, ಮಧ್ಯಾಹ್ನ 3 ಗಂಟೆ ಹೊತ್ತಿಗೆ ಮಂಗಳೂರಿನಿಂದ ಪ್ರಧಾನಿ ವಾಪಸಾಗಲಿದ್ದಾರೆ ಎಂದು ತಿಳಿದುಬಂದಿದೆ. ಅಧಿಕೃತ ಸರ್ಕಾರಿ ಕಾರ್ಯಕ್ರಮದ ಫಲಾನುಭವಿಗಳ ಸಮಾವೇಶದಲ್ಲಿ ಪ್ರಧಾನಿ ಭಾಗಿಯಾಗಲಿದ್ದು, ಈ ಸಮಾವೇಶದ ವೇದಿಕೆಯಲ್ಲೇ ನವಮಂಗಳೂರು ಬಂದರು ಹಾಗೂ ಇತರೆ 3 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಮೋದಿ ಚಾಲನೆ ನೀಡಲಿದ್ದಾರೆ. ಈ ಮೊದಲು ಸಂಜೆ 4 ಗಂಟೆಗೆ ನಿಗದಿಯಾಗಿದ್ದ ಮೋದಿ ಕಾರ್ಯಕ್ರಮದಲ್ಲಿ ಈಗ ಸಮಯ ಬದಲಾವಣೆಯಾಗಿದೆ. ಆದರೆ, ಸಮಯ ಬದಲಾವಣೆಗೆ ನಿರ್ದಿಷ್ಟವಾದ ಕಾರಣ ತಿಳಿದುಬಂದಿಲ್ಲ.

    ಈ ಮಧ್ಯೆ, ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಘಟನೆ ಮುಂದಿಟ್ಟುಕೊಂಡು ಕರಾವಳಿ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನದ ಪೋಸ್ಟರ್‌ಗಳ ವೈರಲ್‌ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ ಪಕ್ಷದಿಂದಲೇ ಪ್ರತಿ ಪೋಸ್ಟರ್‌ ಟ್ರೋಲ್‌ ಶುರುವಾಗಿದೆ. ಮಂಗಳೂರಲ್ಲಿ ನಡೆಯುವ ಪ್ರಧಾನಿ ನರೇಂದ್ರ ಮೋದಿ ಸಮಾವೇಶಕ್ಕೆ ಕಾರ್ಯಕರ್ತರನ್ನು ಕರೆತರುವ ದಿಶೆಯಲ್ಲಿ ಬೂತ್‌ ಭೇಟಿಯಲ್ಲಿರುವ ಮುಖಂಡರು, ಏಕಕಾಲಕ್ಕೆ ಒಂದೇ ಕಲ್ಲಿನಿಂದ ಎರಡು ಹಕ್ಕಿ ಹೊಡೆಯುವ ಕೆಲಸಕ್ಕೆ ಮುಂದಾಗಿದ್ದಾರೆ.

    ನಾಯಕರ ವಿರುದ್ಧದ ಅಸಮಾಧಾನ ತಣಿಯಬೇಕು. ಸಮಾವೇಶಕ್ಕೂ ಕಾರ್ಯಕರ್ತರೂ ಆಗಮಿಸಬೇಕು. ಈ ಎರಡು ಅಜೆಂಡಾ ಇರಿಸಿಕೊಂಡು ಪಕ್ಷ ಮುಖಂಡರು ಬೂತ್‌ ಭೇಟಿ ನಡೆಸುತ್ತಿದ್ದಾರೆ. ಬಿಜೆಪಿ ನಾಯಕರ ವಿರುದ್ಧದ ಅಸಮಾಧಾನಿತರ ಟ್ರೋಲ್‌ ಹಿಂದೆ ಕಾಂಗ್ರೆಸ್‌ ಕೈವಾಡವನ್ನು ಆರೋಪಿಸುವ ಮುಖಂಡರು, ಈ ಬಗ್ಗೆ ಕಾರ್ಯಕರ್ತರಿಗೆ ಮನವರಿಕೆ ಮಾಡಲು ಹೊರಟಿದ್ದಾರೆ.

    ಇನ್ನೊಂದೆಡೆ, ಕರಾವಳಿಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ ಸೆ.2ರಂದು ಕೂಡ ಭಾರಿ ಮಳೆಯ ಮುನ್ಸೂಚನೆ ಲಭಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಸಮಾವೇಶಕ್ಕೆ ತೊಂದರೆಯಾಗದಂತೆ ಇಡೀ ಸಮಾವೇಶ ಸ್ಥಳವನ್ನು ಪೂರ್ತಿಯಾಗಿ ನೆಲಮಟ್ಟದಿಂದ ತುಸು ಎತ್ತರದಲ್ಲಿ ರಚಿಸಲು ನಿರ್ಧರಿಸಲಾಗಿದೆ. ಇದರಿಂದಾಗಿ ಒಂದು ವೇಳೆ ಭಾರಿ ಮಳೆ ಬಂದರೂ ಕಾರ್ಯಕ್ರಮಕ್ಕೆ ತೊಂದರೆಯಾಗದು. ಅಲ್ಲದೆ ಮಳೆ ನೀರು ನಿಂತು ಕೆಸರಿನ ತಾಪತ್ರಯವೂ ಇರದು. ಜರ್ಮನ್‌ ಮಾದರಿ ಬೃಹತ್‌ ಪೆಂಡಾಲ್‌ ಮಳೆಯಿಂದ ಪೂರ್ತಿ ರಕ್ಷಣೆ ನೀಡಲಿದ್ದು, ಇದಕ್ಕೆ ಬೇಕಾದ ಎಲ್ಲ ರೀತಿಯ ತಯಾರಿಗಳನ್ನು ಮಾಡಲಾಗುತ್ತಿದೆ.

    Post Views: 192

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.