Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಅಂಗಡಿ, ಹೋಟೆಲ್, ಕಂಪೆನಿ, ಕಚೇರಿ ಸಹಿತ ಎಲ್ಲ ಕಡೆಗಳಲ್ಲೂ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ
    ಇತ್ತೀಚಿನ ಸುದ್ದಿ

    ಮಂಗಳೂರು: ಅಂಗಡಿ, ಹೋಟೆಲ್, ಕಂಪೆನಿ, ಕಚೇರಿ ಸಹಿತ ಎಲ್ಲ ಕಡೆಗಳಲ್ಲೂ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ

    February 3, 2026
    Share

    ಮಂಗಳೂರು : ಎಲ್ಲಾ ರೀತಿಯ ಅಂಗಡಿ, ಕಂಪೆನಿ, ಕಚೇರಿಗಳು, ಹೋಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ ಕನ್ನಡದಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಫೆ 2 ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ ಗಳು ವಾಣಿಜ್ಯ ಸಂಸ್ಥೆಗಳಿಗೆ ಟ್ರೇಡ್ ಲೈಸೆನ್ಸ್ ಮಂಜೂರು ಮಾಡುವಾಗಲೇ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಎಂಬ ಶರತ್ತು ವಿಧಿಸಿ ಮಂಜೂರು ಮಾಡಬೇಕು.

    ಈ ಬಗ್ಗೆ ಆಗ್ಗಿಂದಾಗೆ ಪರಿಶೀಲನೆ ನಡೆಸಬೇಕು ಎಂದರು.  ರಾಷ್ಟ್ರ್ರೀಯ ಹೆದ್ದಾರಿಗಳಲ್ಲಿ ವಿವಿಧ ಸೂಚನಾ ಫಲಕಗಳಲ್ಲಿ ಕನ್ನಡದಲ್ಲಿ ಮಾಹಿತಿ ನಮೂದಿಸಲು ರಾಷ್ಟ್ರ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚಿಸಲಾಗುವುದು. ಬ್ಯಾಂಕುಗಳಲ್ಲಿ ಅರ್ಜಿ ನಮೂನೆಗಳನ್ನು ಕನ್ನಡದಲ್ಲಿಯೂ ಒದಗಿಸಲು ಬ್ಯಾಂಕುಗಳ ಸಮಿತಿ ಸಭೆಯಲ್ಲಿ ನಿರ್ದೇಶಿಸಲಾಗುವುದು ಎಂದ ಅವರು, ಇಂಗ್ಲಿಷ್ ಮೀಡಿಯಂ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಇಂಗ್ಲಿಷ್ ಮಾಧ್ಯಮದಲ್ಲಿ ಬೋಧಿಸುತ್ತಿದ್ದರೂ, ಶಾಲೆಯ ನಾಮಫಲಕಗಳಲ್ಲಿ ಕನ್ನಡದಲ್ಲಿಯೂ ಹೆಸರು ಬರೆಯಬೇಕು. ಖಾಸಗಿ ಬಸ್ಸುಗಳ ಬೋರ್ಡುಗಳಲ್ಲಿ ಕನ್ನಡದಲ್ಲಿ ಊರಿನ ಹೆಸರು ಬರೆಯುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

    ನಗರದ ಮಾಲ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗಡಿಗಳ ನಾಮಫಲಕದಲ್ಲಿ ಹೆಸರನ್ನು ಕನ್ನಡದಲ್ಲಿ ನಮೂದಿಸುವ ಬಗ್ಗೆ ಕ್ರಮಕೈಗೊಳ್ಳಲು ಮಹಾನಗರ ಪಾಲಿಕೆಗೆ ಸೂಚಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರು ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಕರ ಕೊರತೆಯಿಂದಾಗಿ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುತ್ತಿದ್ದು, ಈ ಸಮಸ್ಯೆಯನ್ನು ಪರಿಹರಿಸಬೇಕು. ಕೆಲ ಉದ್ಯಮಗಳಲ್ಲಿ ಹೊರ ರಾಜ್ಯದ ಕಾರ್ಮಿಕರನ್ನು ನೇಮಿಸಲಾಗುತ್ತಿದ್ದು, ಸ್ಥಳೀಯರನ್ನು ನಿರ್ಲಕ್ಷಿಸಲಾಗುತ್ತಿದೆ.

    ರಾಷ್ಟ್ರೀಕೃತ ಬ್ಯಾಂಕುಗಳು ಠೇವಣಿ ಹಾಗೂ ಹಣ ಹಿಂತೆಗೆಯುವಿಕೆ ಸ್ಲಿಪ್ ಗಳನ್ನು ಕನ್ನಡದಲ್ಲಿಯೂ ಒದಗಿಸಬೇಕು. ಗ್ರಾಮೀಣ ಪ್ರದೇಶದ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಕನ್ನಡ ಜ್ಞಾನವಿಲ್ಲದ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು, ಇದರಿಂದ ಸ್ಥಳೀಯರ ಬ್ಯಾಂಕ್ ವ್ಯವಹಾರಗಳಿಗೆ ತೊಂದರೆಯಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ ಎಂ ಪಿ ಶ್ರೀನಾಥ್ ಮಾತನಾಡಿ, ಮಂಗಳೂರು ನಗರದಲ್ಲಿ ಜಿಲ್ಲಾ ಮಟ್ಟದ ಕನ್ನಡ ಭವನ ನಿರ್ಮಿಸಲು ನಿವೇಶನ ಮಂಜೂರು ಮಾಡಲು ಸಭೆಯಲ್ಲಿ ಆಗ್ರಹಿಸಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಕೆ, ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಡಾ. ಸಂತೋಷ್ ಕುಮಾರ್ ಜಿ, ಕೈಗಾರಿಕಾ ಜಂಟಿ ನಿರ್ದೇಶಕ ಗೋಕುಲ್ ದಾಸ್ ನಾಯಕ್, ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ, ಜಿಲ್ಲಾ ಕನ್ನಡ ಜಾಗೃತಿ ಸಮಿತಿ  ಸದಸ್ಯರಾದ ದೇವಿಪ್ರಸಾದ್, ರಾಜಶೇಖರ್ ಅಜ್ರಿ, ರಾಜೇಶ್ ಡಿಸೋಜಾ, ದಿವಾಕರ್ ದಾಸ್, ಹಸೈನಾರ್ ತಾಳಿತ್ತನೂಜಿ ಮೊದಲಾದವರು ಉಪಸ್ಥಿತರಿದ್ದರು. 

    Post Views: 138

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.