Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಪೊಲೀಸರ ದಾಳಿ- 3 ಮೊಬೈಲ್ ಪತ್ತೆ
    ಇತ್ತೀಚಿನ ಸುದ್ದಿ

    ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಪೊಲೀಸರ ದಾಳಿ- 3 ಮೊಬೈಲ್ ಪತ್ತೆ

    February 8, 2026
    Share

    ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಬರ್ಕೆ ಠಾಣೆ ಪೊಲೀಸರು ದಾಳಿ ನಡೆಸಿದ್ದು ಕೈದಿಗಳನ್ನು ಶೋಧಕ್ಕೆ ಒಳಪಡಿಸಿದ್ದಾರೆ.

    ಈ ವೇಳೆ, ಮೂರು ಮೊಬೈಲ್ ಪತ್ತೆಯಾಗಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫೆ.6ರಂದು ಮಧ್ಯರಾತ್ರಿ ಜೈಲು ಸುಪರಿಡೆಂಟ್ ನೇತೃತ್ವದಲ್ಲಿ ಪೊಲೀಸರು ಕಾರಾಗೃಹದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದು ಎ ಮತ್ತು ಬಿ ಬ್ಯಾರಕ್ ನಲ್ಲಿ ಪರಿಶೀಲನೆ ಕೈಗೊಂಡಿದ್ದಾರೆ. ಈ ವೇಳೆ, ಎ ಬ್ಯಾರಕ್ ನಲ್ಲಿ ಎರಡು ಮತ್ತು ಬಿ ಬ್ಯಾರಕ್ ನಲ್ಲಿ ಒಂದು ಮೊಬೈಲ್ ಫೋನ್ ಪತ್ತೆಯಾಗಿದೆ.

    ಎ ಬ್ಯಾರಕ್ ನಲ್ಲಿ ಮುಸ್ಲಿಂ ಕೈದಿಗಳನ್ನು ಇರಿಸಲಾಗಿದ್ದು ಇಬ್ರಾಹಿಂ ಹರ್ಷದ್ ಮತ್ತು ಅಸ್ಗರ್ ಎಂಬಿಬ್ಬರು ಕೀ ಪ್ಯಾಡ್ ಮೊಬೈಲ್ ಫೋನ್ ಗಳನ್ನು ಹೊಂದಿದ್ದರು. ಬಿ ಬ್ಯಾರಕ್ ನಲ್ಲಿ ಹಿಂದು ಕೈದಿಗಳಿದ್ದು ಶೋಧ ಸಂದರ್ಭದಲ್ಲಿ ಚಂದ್ರಹಾಸ್ ಪೂಜಾರಿ ಎಂಬ ವಿಚಾರಣಾಧೀನ ಕೈದಿಯಲ್ಲಿ ಕೀ ಪ್ಯಾಡ್ ಮೊಬೈಲ್ ಫೋನ್ ಪತ್ತೆಯಾಗಿದೆ. ಈ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‌

    ಕಾರಾಗೃಹ‌ಕ್ಕೆ ಇತ್ತೀಚೆಗೆ ಭೇಟಿ ನೀಡಿದ್ದ ಬಂಧಿಖಾನೆ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್, ಆಗಿಂದಾಗ್ಗೆ ಜೈಲಿನಲ್ಲಿ ಶೋಧ ಕಾರ್ಯಾಚರಣೆ ಕೈಗೊಳ್ಳುವಂತೆ ಸೂಚಿಸಿದ್ದರು.‌

    ಮೊಬೈಲ್, ಮಾದಕ ವಸ್ತುಗಳು ಪತ್ತೆಯಾದರೆ ಅದಕ್ಕೆ ನೀವೇ ಹೊಣೆ ಎಂದು ಜೈಲು ಅಧಿಕಾರಿಗಳನ್ನು ಎಚ್ಚರಿಸಿದ್ದರು.

    Post Views: 38

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.