Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : PSI ಆಯ್ಕೆ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ !
    ಇತ್ತೀಚಿನ ಸುದ್ದಿ

    ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : PSI ಆಯ್ಕೆ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ !

    February 10, 2026
    Share

    ಬೆಂಗಳೂರು : ರಾಜ್ಯ ಸರ್ಕಾರವು ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದು, ವಸತಿ ಸಹಿತ ಪೊಲೀಸ್ ಸಬ್ ಇನ್ಸ್ ಪೆಕ್ಟರ್ (PSI) ಆಯ್ಕೆ ಪೂರ್ವ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

    ಹಿಂದುಳಿದ ವರ್ಗಳ ಕಲ್ಯಾಣ ಇಲಾಖೆಯಿಂದ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಗೆ ಮಾತ್ರ ವಸತಿ ಸಹಿತ ಪೊಲೀಸ್ ಸಬ್-ಇನ್ಸೆಕ್ಟರ್(PSI) ಆಯ್ಕೆ ಪೂರ್ವ ತರಬೇತಿಯನ್ನು 75 ದಿನಗಳ ಅವಧಿಗೆ ಉಚಿತ ಊಟ ಮತ್ತು ವಸತಿಯೊಂದಿಗೆ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ನೀಡಲಾಗುವುದು. ಈ ಹಿನ್ನೆಲೆಯಲ್ಲಿ ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶಿಷ್ಯವೇತನ, ಪ್ರಯಾಣ ಭತ್ಯೆ ಅಥವಾ ಇತರೆ ಯಾವುದೇ ರೀತಿಯ ಆರ್ಥಿಕ ಸೌಲಭ್ಯವನ್ನು ಒದಗಿಸಲಾಗುವುದಿಲ್ಲ. ತರಬೇತಿ ಪಡೆಯುವ ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ನಿಗದಿತ ತರಬೇತಿ ಕೇಂದ್ರದಲ್ಲಿಯೇ ಇದ್ದು, ಸದರಿ ತರಬೇತಿಯನ್ನು ಪಡೆಯುವುದು.

    1. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಉಚಿತವಾಗಿ ವಸತಿ ಸಹಿತ ಪೊಲೀಸ್ ಸಬ್ -ಇನ್ಸೆಕ್ಟರ್(PSI) ಆಯ್ಕೆ ಪೂರ್ವ ತರಬೇತಿಯನ್ನು ನೀಡುತ್ತಿದ್ದು, 2025-26ನೇ ಸಾಲಿನಲ್ಲಿ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    2. ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳು ಮಾತ್ರ ಆನ್-ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

    ಸ್ವಾಮ್ಯತೆಗೆ 3. ಕೇಂದ್ರ/ರಾಜ್ಯ ಸರ್ಕಾರದ/ಅನುದಾನಿತ ಸಂಸ್ಥೆಗಳ/ಸಾರ್ವಜನಿಕ ಒಳಪಟ್ಟ ಸಂಸ್ಥೆಗಳಲ್ಲಿನ ನೌಕರರು ಸದರಿ ಕಾರ್ಯಕ್ರಮದಡಿ ಅರ್ಜಿ ಸಲ್ಲಿಸಲು ಮತ್ತು ತರಬೇತಿ ಪಡೆಯಲು ಅರ್ಹರಿರುವುದಿಲ್ಲ.

    4. ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

    5. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಸಾಮಾನ್ಯ ಅರ್ಹತೆಗಳು:

    a) ರಾಜ್ಯದ ಹಿಂದುಳಿದ ವರ್ಗಗಳಾದ ಪ್ರವರ್ಗ-1, 2(ಎ), 3(ಎ) ಅಥವಾ 3(ಬಿ) ಗಳಿಗೆ ಸೇರಿರಬೇಕು. ಅಭ್ಯರ್ಥಿಯ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ – ರೂ.8.00 ಲಕ್ಷಗಳು.

    b) ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.

    c) ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಎತ್ತರ, ತೂಕ, ಎದೆಯ ಸುತ್ತಳತೆಗಳು ಕರ್ನಾಟಕ ಪೊಲೀಸ್ ಸೇವೆಗಳ ನೇಮಕಾತಿ ಪ್ರಾಧಿಕಾರ ನಿಗದಿಪಡಿಸಿರುವಂತೆ ಇರಬೇಕು.

    Post Views: 172

    Related Posts

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.