Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಣಿಪಾಲ : ಮಾದಕ ವಸ್ತು ಮಾರಾಟ – ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್
    ಇತ್ತೀಚಿನ ಸುದ್ದಿ

    ಮಣಿಪಾಲ : ಮಾದಕ ವಸ್ತು ಮಾರಾಟ – ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

    February 12, 2026
    Share

    ಮಣಿಪಾಲ: ನಗರದ ಪೊಲೀಸ್ ಠಾಣೆಯಲ್ಲಿ ದಾಖಲಾದ ಮಾದಕ ವಸ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕನೇ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕೇರಳ ರಾಜ್ಯದ ಮಲ್ಲಪುರಂ ಮೂಲದ ಪ್ರಸ್ತುತ ಮಣಿಪಾಲದಲ್ಲಿ ವಾಸವಾಗಿರುವ ಅಜ್ಮಲ್(26) ಬಂಧಿತ ಆರೋಪಿ.
    2025ರ ಆ.16ರಂದು ಮಣಿಪಾಲ ಈಶ್ವರ ನಗರದ ರೂಮ್‌ನಲ್ಲಿ ಗಾಂಜಾ ಹಾಗೂ ಎಲ್‌ಎಸ್‌ಡಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಆಪ್ಶಿನ್ ಮತ್ತು ಶಿವನಿಧಿ ಆಚಾರ್ಯ ಎಂಬವರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದ ತನಿಖೆ ಮುಂದು ವರೆಸಿದ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದ ಮತ್ತೋರ್ವ ಆರೋಪಿ ಕೇರಳ ಮೂಲದ ಮನೀಶ್ ಎಂಬಾತನನ್ನು 2025ರ ಆ.17ರಂದು ಬಂಧಿಸ ಲಾಗಿತ್ತು. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ 4ನೇ ಆರೋಪಿ ಅಜ್ಮಲ್‌ನನ್ನು ಪೊಲೀಸರು 2026ರ ಫೆ.4ರಂದು ಮಣಿಪಾಲ ಸಿಂಡಿಕೇಟ್ ಸರ್ಕಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಬಂಧಿಸಿದ್ದಾರೆ.ಈತನಿಂದ ಸುಮಾರು 1 ಲಕ್ಷ ರೂ. ಮೌಲ್ಯದ 2084 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಈತ ಗಾಂಜಾವನ್ನು ಸರಬರಾಜು ಮಾಡಿದ 5 ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದು, ಇವರು ಗಾಂಜಾ ಸೇವಿಸಿದ ಬಗ್ಗೆ ದೃಢಪಟ್ಟಿದೆ. ಗಾಂಜಾ ಸೇವಿಸಿದ ಬಗ್ಗೆ ಈ ಐವರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

    Post Views: 200

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.