Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ : ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಸರಣಿ ಅಪಘಾತ- ವಿದ್ಯಾರ್ಥಿ ಅರೆಸ್ಟ್
    ಇತ್ತೀಚಿನ ಸುದ್ದಿ

    ಉಡುಪಿ : ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಸರಣಿ ಅಪಘಾತ- ವಿದ್ಯಾರ್ಥಿ ಅರೆಸ್ಟ್

    February 16, 2026
    Share

    ಉಡುಪಿ : ಕುಡಿದ ಮತ್ತಿನಲ್ಲಿ ಅತಿವೇಗವಾಗಿ ಕಾರು ಚಲಾಯಿಸಿ ಸರಣಿ ಅಪಘಾತಗಳಿಗೆ ಕಾರಣವಾದ ಆರೋಪದ ಮೇಲೆ ಮಣಿಪಾಲದ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಬಂಧಿತ ವಿದ್ಯಾರ್ಥಿಯನ್ನು ಅಭಿಮನ್ಯು ನೇಗಿ ಎಂದು ಗುರುತಿಸಲಾಗಿದೆ.ಫೆಬ್ರವರಿ 14ರ ತಡರಾತ್ರಿ ಈ ಘಟನೆ ನಡೆದಿದ್ದು, ರಸ್ತೆ ಬದಿಯಲ್ಲಿ ಸಾಲಾಗಿ ನಿಲ್ಲಿಸಿದ್ದ ಏಳು ದ್ವಿಚಕ್ರ ವಾಹನಗಳಿಗೆ ಈತ ಚಲಾಯಿಸುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಈ ವೇಳೆ ಎದುರಿನಿಂದ ಬರುತ್ತಿದ್ದ ಆಟೋ ರಿಕ್ಷಾಕ್ಕೂ ಕಾರು ಢಿಕ್ಕಿಯಾಗಿದ್ದು, ರಿಕ್ಷಾ ಚಾಲಕ ಬಡಗಬೆಟ್ಟು ನಿವಾಸಿ ಶಿವಪ್ರಸಾದ್ (76) ಅವರ ತಲೆಗೆ ಗಂಭೀರ ಒಳಪೆಟ್ಟು ಬಿದ್ದಿದೆ.ಆರೋಪಿಯು ಕಾಲೇಜು ರಸ್ತೆಯ ಬಳಿಯಿಂದ ಅತಿವೇಗವಾಗಿ ಮತ್ತು ನಿರ್ಲಕ್ಷ್ಯದಿಂದ ಕಾರು ಚಲಾಯಿಸಿಕೊಂಡು ಬಂದಿದ್ದು, ಬಳಿಕ ವಾಹನದ ಮೇಲಿನ ನಿಯಂತ್ರಣ ತಪ್ಪಿ ರಸ್ತೆಯ ಎಡ ಮತ್ತು ಬಲಕ್ಕೆ ನುಗ್ಗಿದ್ದಾನೆ ಎನ್ನಲಾಗಿದೆ. ಒಂದು ವೇಳೆ ಇದೇ ವೇಗದಲ್ಲಿ ಕಾರು ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸಿದ್ದರೆ ಮತ್ತಷ್ಟು ಭೀಕರ ಅನಾಹುತ ಸಂಭವಿಸುವ ಸಾಧ್ಯತೆಯಿತ್ತು.ಅಪಘಾತಕ್ಕೆ ಕಾರಣವಾದ ಕಾರು ಹರಿಯಾಣ ನೋಂದಣಿ ಸಂಖ್ಯೆಯನ್ನು ಹೊಂದಿದೆ. ಘಟನೆಯಲ್ಲಿ ರಸ್ತೆ ಬದಿಯ ಮಳಿಗೆಗಳ ಸಿಬ್ಬಂದಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳು ಜಖಂಗೊಂಡಿವೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಈ ಭಾಗದಲ್ಲಿ ಸಾರ್ವಜನಿಕರು ಮತ್ತು ಉದ್ಯೋಗಿಗಳು ಹಗಲು-ರಾತ್ರಿ ಸಂಚರಿಸುತ್ತಿರುತ್ತಾರೆ. ಇಲ್ಲಿ ಕೆಲವು ಭಾರಿ ವಾಹನಗಳ ಅತಿವೇಗದ ಚಾಲನೆಯಿಂದಾಗಿ ಆಗಾಗ್ಗೆ ಸಣ್ಣಪುಟ್ಟ ಅಪಘಾತಗಳು ಸಂಭವಿಸುತ್ತಿರುತ್ತವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

    Post Views: 183

    Related Posts

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026

    ನಿವೃತ್ತ ಪೋಸ್ಟ್ ಮಾಸ್ಟರ್‌ಗೆ 6 ಕೋಟಿ ರೂ. ಬಂಪರ್ ಲಾಟರಿ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.