Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»CCB ಪೊಲೀಸರಿಂದ ಮುಡಾ ಸೈಟ್ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಬಂಧನ
    ಇತ್ತೀಚಿನ ಸುದ್ದಿ

    CCB ಪೊಲೀಸರಿಂದ ಮುಡಾ ಸೈಟ್ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಬಂಧನ

    February 20, 2026
    Share

    ಬೆಂಗಳೂರು: ಮೈಸೂರಿನ ಮುಡಾ ಸೈಟ್ ಹಗರಣದ ದೂರುದಾರನನ್ನೇ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಬಳಿಯಲ್ಲಿ ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

    ಇಂದು ಮುಂಡಾ ಪ್ರಕರಣದಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಬಳಿಯಲ್ಲಿ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್ ಅವರು ಬಡ್ತಿ ಪಡೆಯುವುದಕ್ಕಾಗಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಲಂಚ ನೀಡಿದ್ದಾರೆಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದರು. ಈ ಸಂಬಂಧ ಸಿಸಿಬಿಗೆ ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್ ದೂರು ನೀಡಿದ್ದರು. ಈ ದೂರು ಆಧರಿಸಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿತ್ತು.

    ಇದೇ ಪ್ರಕರಣದಲ್ಲಿ ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ. ಅವರನ್ನು ವಶಕ್ಕೆ ಪಡೆದಿರುವಂತ ಸಿಸಿಬಿ ಪೊಲೀಸರು, ಶಾಂತಿನಗರದ ಕಚೇರಿಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಜೊತೆಗೆ ಅವರ ನಿವಾಸದಲ್ಲೂ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.

    ಮೈಸೂರಿನಲ್ಲಿ ಸ್ನೇಹಮಯಿ ಕೃಷ್ಣ ನಿವಾಸದ ಮೇಲೆ ಸಿಸಿಬಿ ಪೊಲೀಸರ ದಾಳಿ

    ಇತ್ತ ಬೆಂಗಳೂರಲ್ಲಿ ಸಿಸಿಬಿ ಪೊಲೀಸರಿಂದ ಮುಡಾ ಪ್ರಕರಣದ ದೂರುದಾರ, ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರನ್ನು ವಶಕ್ಕೆ ಪಡೆಯಲಾದಿದೆ. ಅತ್ತ ಮೈಸೂರಲ್ಲಿ ಇರುವಂತ ಅವರ ನಿವಾಸದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

    ಮೈಸೂರಿನ ಗೌರಿಶಂಕರ ನಗರದಲ್ಲಿ ಇರುವಂತ ಸ್ನೇಹಮಯಿ ಕೃಷ್ಣ ನಿವಾಸದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಸ್ನೇಹಮಯಿ ನಿವಾಸದಲ್ಲಿ ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ.

    ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ಮೈಸೂರಿನಲ್ಲಿರುವಂತ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ 2 ಮನೆಗಳ ಮೇಲೆ 10ಕ್ಕೂ ಹೆಚ್ಚು ಸಿಸಿಬಿ ಪೊಲೀಸರು ದಾಳಿ ನಡೆಸಿ, ಪರಿಶೀಲನೆಯನ್ನು ನಡೆಸುತ್ತಿದ್ದಾರೆ.

    Post Views: 173

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.