Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಲೂರ್ಡ್ಸ್ ಸೆಂಟ್ರಲ್ ಶಾಲೆಗೆ ಬಾಂಬ್ ಬೆದರಿಕೆ
    ಇತ್ತೀಚಿನ ಸುದ್ದಿ

    ಮಂಗಳೂರು: ಲೂರ್ಡ್ಸ್ ಸೆಂಟ್ರಲ್ ಶಾಲೆಗೆ ಬಾಂಬ್ ಬೆದರಿಕೆ

    February 26, 2026
    Share

    ಮಂಗಳೂರು: ನಗರದ ಬಿಜೈ ಪ್ರದೇಶದಲ್ಲಿರುವ ಪ್ರತಿಷ್ಠಿತ ಲೂರ್ಡ್ಸ್ ಸೆಂಟ್ರಲ್ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್ ಬಂದಿರುವ ಘಟನೆ ಬೆಳಕಿಗೆ ಬಂದಿದೆ.

    ಶಾಲೆಯ ಅಧಿಕೃತ ಇಮೇಲ್ ವಿಳಾಸಕ್ಕೆ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದೆ. ಮಾಹಿತಿ ಪಡೆದ ಕದ್ರಿ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

    ಇತ್ತೀಚೆಗಷ್ಟೇ ಮಂಗಳೂರಿನ ನ್ಯಾಯಾಲಯಕ್ಕೆ ಬಾಂಬ್ ಇಡಲಾಗಿದೆ ಎಂದು ಇಮೇಲ್ ಮೂಲಕ ಬೆದರಿಕೆ ಬಂದಿದ್ದರೂ, ಪರಿಶೀಲನೆ ಬಳಿಕ ಅದು ಹುಸಿ ಕರೆ ಎಂಬುದು ದೃಢಪಟ್ಟಿತ್ತು. ತಮಿಳುನಾಡು ಮೂಲದಿಂದ ರಾಜ್ಯದ ಹಲವು ನ್ಯಾಯಾಲಯಗಳಿಗೆ ಇಂತಹ ಬೆದರಿಕೆ ಸಂದೇಶಗಳು ಬಂದಿರುವುದೂ ಪತ್ತೆಯಾಗಿತ್ತು. ಅದೇ ರೀತಿ ಬೆಂಗಳೂರಿನ ಕೆಲವು ಶಾಲೆಗಳಿಗೂ ಇತ್ತೀಚೆಗೆ ಬಾಂಬ್ ಬೆದರಿಕೆ ಬಂದಿದ್ದವು.

    ಇದೀಗ ಮಂಗಳೂರಿನ ಲೂರ್ಡ್ಸ್ ಶಾಲೆಗೆ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಪೊಲೀಸರು ಸಂಪೂರ್ಣ ತಪಾಸಣೆ ನಡೆಸುತ್ತಿದ್ದಾರೆ. ಯಾರು ಇಮೇಲ್ ಕಳುಹಿಸಿದ್ದಾರೆ ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ. ಈವರೆಗೆ ನಡೆದ ಪರಿಶೀಲನೆಯಲ್ಲಿ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 84

    Related Posts

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026

    ನಿವೃತ್ತ ಪೋಸ್ಟ್ ಮಾಸ್ಟರ್‌ಗೆ 6 ಕೋಟಿ ರೂ. ಬಂಪರ್ ಲಾಟರಿ

    April 23, 2026

    ಬೆಳ್ತಂಗಡಿ ಅಪಘಾತ ದುರಂತ: ದ್ವಿಚಕ್ರ ವಾಹನ ಡಿಕ್ಕಿ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.